ಒಳಚರಂಡಿ ಕಾಮಗಾರಿ ಅಪೂರ್ಣ: ಕಾನೂನು ಕ್ರಮಕ್ಕೆ ಆಗ್ರಹ

Team Udayavani, May 6, 2022, 2:52 PM IST

20work

ಹುಮನಾಬಾದ: ಪಟ್ಟಣದಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡ ಯುಜಿಡಿ (ಒಳ ಚರಂಡಿ) ಕಾಮಗಾರಿ ಇಂದಿಗೂ ಅಪೂರ್ಣವಿದ್ದು, ಈ ಕುರಿತು ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಬೇಕು ಎಂದು ಪುರಸಭೆ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಸರ್ವಾನುಮತದಿಂದ ಆಗ್ರಹಿಸಿದರು.

ಪಟ್ಟಣದ ಪುರಸಭೆ ಸಭಾಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪುರಸಭೆ ಸದಸ್ಯರಾದ ರಮೇಶ ಕಲ್ಲೂರ್‌, ಅನಿಲ ಪಲ್ಲರಿ, ಎಸ್‌.ಎ ಬಾಸಿದ್‌, ಅಪ್ಸರ್‌ ಮಿಯ್ನಾ, ರಾಜರೆಡ್ಡಿ, ಅಬ್ದುಲ್‌ ಗೋರೆಮಿಯ್ನಾ, ವೀರೇಶ ಸೀಗಿ ಸೇರಿದಂತೆ ಇತರೆ ಸದಸ್ಯರು, ಅಪೂರ್ಣ ಕಾಮಗಾರಿಯನ್ನು ಪೂರ್ಣಗೊಂಡಿದೆ ಎಂದು ಈ ಹಿಂದಿನ ಪುರಸಭೆ ಅಧಿಕಾರಿ ಕಾಮಗಾರಿ ಹಸ್ತಾಂತರ ಪತ್ರಕ್ಕೆ ಸಹಿ ಹಾಕಿದ್ದಾರೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಬೆಂಗಳೂರಿನ ಕಚೇರಿಗೆ ಹಸ್ತಾಂತರ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

29 ಕೋಟಿ ರೂ. ಅನುದಾನದ ಕಾಮಗಾರಿ ಜನರ ಉಪಯೋಗಕ್ಕೆ ಬರಬೇಕು ಎಂದು ಒತ್ತಾಯಿಸಿದರು. ಈ ಕುರಿತು ಸಭೆಯ ನಡುವಳಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಮುಖ್ಯಾಧಿಕಾರಿ ಶೇಖ್‌ ಚಾಂದ್‌ ಪಟೇಲ್‌ ಹೇಳಿದರು.

ವಿವಿಧ ಚರ್ಚೆಗಳು: ಉದ್ಯಾನವನದಲ್ಲಿ ನಿರ್ಮಿಸಿರುವ ಪುರಭವನ ಕಟ್ಟಡ ಹಸ್ತಾಂತರ ಕುರಿತು ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಬೇಕು. ಪೂರ್ಣ ಕಾಮಗಾರಿ ಮಾಡಿ ಪರಿಶೀಲನೆ ನಡೆಸಿ ಕಟ್ಟಡ ಹಸ್ತಾಂತರ ಮಾಡಿಕೊಳ್ಳಬೇಕು ಎಂದು ಸಭೆಯಲ್ಲಿ ಸದಸ್ಯರು ಹೇಳಿದರು.

ಧುಮ್ಮನಸೂರ ವಲಯದಲ್ಲಿನ ಪುರಸಭೆ ಭೂಮಿಯಲ್ಲಿ ನಿವೇಶನ ಅಳವಡಿಸಿ ಮನೆ ಇಲ್ಲದವರಿಗೆ ಹಂಚಿಕೆ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತವಾಯಿತು. ಪಟ್ಟಣದ ಅಭಿವೃದ್ಧಿಗಾಗಿ ಹೊಸ ಲೇಔಟ್‌ಗಳ ಅನುಮೋದನೆ ನೀಡಬೇಕು. ಉದ್ಯಾನವನ ಪ್ರದೇಶದಲ್ಲಿನ ನಿವೇಶನಕ್ಕೆ ಆನ್‌ ಲೈನ್‌ ಖಾತೆ ರದ್ದು ಮಾಡಬೇಕು ಎಂದು ಸಭೆಯಲ್ಲಿ ಚರ್ಚೆಗಳು ನಡೆದವು. ಅಲ್ಲದೆ, 15ನೇ ಹಣಕಾಸು ಯೋಜನೆಯ 2.15 ಕೋಟಿ, ಎಸ್‌. ಎಫ್‌.ಸಿ ಯೋಜನೆಯಡಿ 86 ಲಕ್ಷ ರೂ. ಅನುದಾನ ಕುರಿತು ಹೊಸ ಕೆಲಸಗಳ ಕುರಿತು ಚರ್ಚೆ ನಡೆಸಿದರು.

92 ಹುದ್ದೆ ಖಾಲಿ: ಪುರಸಭೆಯಲ್ಲಿ ಒಟ್ಟಾರೆ 134 ಹುದ್ದೆಗಳು ಹೊಂದಿದ್ದು, ಈ ಪೈಕಿ 42 ಹುದ್ದೆಗಳು ಮಾತ್ರ ಭರ್ತಿ ಇವೆ. 92 ಹುದ್ದೆಗಳು ಖಾಲಿ ಇರುವ ಕಾರಣ ವಿವಿಧ ಕೆಲಸ ಕಾರ್ಯಕ್ಕೆ ಸಮಸ್ಯೆ ಉಂಟಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದರು.

ಇದಕ್ಕೆ ಪುರಸಭೆ ಸದಸ್ಯ ಸುನೀಲ ಪಾಟೀಲ ಮಾತನಾಡಿ, ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಪುರಸಭೆಯ ಸರ್ವ ಸದಸ್ಯರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡಬೇಕು. ಕೂಡಲೇ ಖಾಲಿ ಹುದ್ದೆಗಳ ಅವಶ್ಯಕತೆ ಹೆಚ್ಚಿರುವ ಕಾರಣ ಸರ್ಕಾರಕ್ಕೆ ಪ್ರಾಸ್ತಾವನೆ ಸಲ್ಲಿಸುವಂತೆ ಮನವಿ ಮಾಡಬೇಕು ಎಂದು ತಿಳಿಸಿದರು. ಇದಕ್ಕೆ ಸರ್ವ ಸದಸ್ಯರು ಕೂಡ ಧ್ವನಿಗೂಡಿಸಿದರು. ಕೂಡಲೇ ಜಿಲ್ಲಾಧಿಕಾರಿಗಳ ಬಳಿಗೆ ನಿಯೋಗ ತೆರಳಿ ಮನವಿ ಸಲ್ಲಿಸೋಣ ಎಂದು ತೀರ್ಮಾನಿಸಿದರು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.