ವಿಭಜಕದಲ್ಲಿ ಬೆಳೆಯಲಿವೆ ಹೂಗಿಡ

•ನನೆಗುದಿಗೆ ಬಿದ್ದಿದ್ದ ಕಾಮಗಾರಿ ಆರಂಭ •ಪಟ್ಟಣದ ಸೌಂದರ್ಯ ವರ್ಧನೆ

Team Udayavani, Aug 13, 2019, 1:11 PM IST

bidar-tdy-1

ಹುಮನಾಬಾದ: ಪಟ್ಟಣದ ಕಲ್ಲೂರ ಮಾರ್ಗದ ರಸ್ತೆ ವಿಭಜಕದ ಮಧ್ಯದಲ್ಲಿ ಗಿಡ ನೆಡುವುದಕ್ಕಾಗಿ ಗುಣಮಟ್ಟದ ಮಣ್ಣು ಹಾಕಿರುವುದು.

ಹುಮನಾಬಾದ: ಐದು ವರ್ಷಗಳ ಹಿಂದೆ ಪಟ್ಟಣದ ಕಲ್ಲೂರ ರಸ್ತೆ ವಿಸ್ತರಣೆ ಕೈಗೊಂಡ ನಂತರ ಕಾರಣಾಂತರದಿಂದ ನನೆಗುದಿಗೆ ಬಿದ್ದದ್ದ ನಗರ ಸೌಂದರ್ಯ ವೃದ್ಧಿಸುವ ಗಿಡಗಳನ್ನು ಅಳವಡಿಕೆ ಕಾರ್ಯಕ್ಕೆ ಪುರಸಭೆ ಆಡಳಿತ ಇದೀಗ ಸಜ್ಜುಗೊಂಡಿದ್ದು ಅದಕ್ಕಾಗಿ ಅಗತ್ಯ ಸಿದ್ಧತೆಗೆ ಅಣಿಯಾಗಿದೆ.

2015-16ನೇ ಸಾಲಿನಲ್ಲಿ 13 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ವಿಭಜಕ ಕಾಮಗಾರಿ ಕೈಗೊಳ್ಳಲಾಗಿದೆ. 11 ಲಕ್ಷ ರೂ. ವೆಚ್ಚದಲ್ಲಿ ಬಟರ್‌ ಫ್ಲೈ ಮಾದರಿ ವಿದ್ಯುತ್‌ ಕಂಭ ಅಳವಡಿಕೆ, 7 ಲಕ್ಷ ರೂ ವೆಚ್ಚದಲ್ಲಿ ವಿಭಜಕ ಮೆಟಾಲ್ ಜಾಲಿ ಅಳವಡಿಕೆ ಹಾಗೂ ಪಾದಚಾರಿ ರಸ್ತೆಯನ್ನು 1ಕೋಟಿ ರೂ. ಅನುದಾದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಶಾಸಕ ರಾಜಶೇಖರ ಪಾಟೀಲ ಅವರ ಆಶಯದಂತೆ ನಗರ ಸೌಂದರ್ಯ ವೃದ್ಧಿಸುವ ಗಿಡಗಳ ಅಳವಡಿಕೆ ಕಾರ್ಯ ನನೆಗುದಿಗೆ ಬಿದ್ದಿದ್ದರಿಂದ ರಸ್ತೆವಿಭಜಕ ಮಧ್ಯದಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆದು ಅಂದ ಕೆಡಿಸುತ್ತಿದ್ದರು. ಈ ಕುರಿತು ಉದಯವಾಣಿಯಲ್ಲಿ ಹಲವು ಬಾರಿ ವಿಶೇಷ ವರದಿ ಪ್ರಕಟಿಸಿದ ಬಳಿಕ ಎಚ್ಚೆತ್ತುಕೊಂಡ ಪುರಸಭೆ ಆಡಳಿತ ಇದೀಗ ಅಭಿವೃದ್ಧಿಗೆ ಮುಂದಾಗಿದೆ.

ಹುಮನಾಬಾದ ಪಟ್ಟಣದ ಡಾ|ಬಿ.ಆರ್‌.ಅಂಬೇಡ್ಕರ್‌ ವೃತ್ತದಿಂದ ವಾಂಜ್ರಿ ಮತ್ತು ಕೆಇಬಿ ಬೈಪಾಸ್‌ ರಸ್ತೆಯಿಂದ ಪ್ರವಾಸಿ ಮಂದಿರದ ವರೆಗೆ ರಸ್ತೆ ವಿಭಜಕದ ಮಧ್ಯದಲ್ಲಿ ಸೌಂದರ್ಯು ವೃದ್ಧಿಸುವ ಅತ್ಯಾಕರ್ಷಕ ಗಿಡ ನೆಡಲು ಎರಡು ರಸ್ತೆಗಳಿಗೆ ತಲಾ ರೂ.5ಲಕ್ಷ ದಂತೆ ಒಟ್ಟು ರೂ.10ಲಕ್ಷ ಅನುದಾನ ನಿಗದಿಪಡಿಸಲಾಗಿದೆ. ಗಿಡಗಳನ್ನು ನೆಡುವುದಕ್ಕಾಗಿಯೇ ವಿಭಜಕದ ಮಧ್ಯ ಉತ್ತಮ ಬೆಳವಣಿಗೆಗೆ ಅಗತ್ಯವಿರುವ ಗುಣಮಟ್ಟದ ಮಣ್ಣು ಸುರಿಯುವ ಕಾರ್ಯ ವಾರದಿಂದ ಕೈಗೆತ್ತಿಕೊಳ್ಳಲಾಗಿದೆ.

ನೆಡುವುದು ಯಾವ ಗಿಡ?:

ವಿಭಜಕ ಮತ್ತು ರಸ್ತೆಗೆ ಯಾವುದೇ ಹಾನಿಯಾಗದಿರುವಂತಹ, ರಸ್ತೆ ಸೌಂದರ್ಯ ವೃದ್ಧಿಸುವ ಗಿಡಗಳಾದ ವೆಸ್ಟ್‌ ಇಂಡಿಯನ್‌ ಚೆರ್ರಿ, ಆಕಾಶ ಮಲ್ಲಿಗೆ, ಅರಿಶಿಣ ಹೂಬಿಡುವ ಟೆಕೋಮೊ, ಹೊಂಗೆ ಮರ, ಫೈಕಸ್‌ ಬ್ರೀಡಾ ಇನ್ನಿತರ ಸೌಂದರ್ಯ ವರ್ಧಕ ಗಿಡಗಳನ್ನು ನೆಡಲು ಯೋಜನೆ ರೂಪಿಸಲಾಗಿದ್ದು, ಶೀಘ್ರ ಕಾರ್ಯ ಆರಂಭಗೊಳ್ಳಲಿದೆ. ಇವು ರಸ್ತೆ ಸೌಂದರ್ಯ ವೃದ್ಧಿಯೊಂದಿಗೆ ಮಾಲಿನ್ಯ ಹೀರಿಕೊಂಡು ಶುದ್ಧ ಗಾಳಿ ಪೂರೈಸುತ್ತವೆ.

 

•ಶಶಿಕಾಂತ ಕೆ.ಭಗೋಜಿ

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.