ನೊಂದ ಕುಟುಂಬಗಳಿಗೆ ನೆರವು
Team Udayavani, Jan 3, 2022, 12:44 PM IST
ಕಮಲನಗರ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಶನಿವಾರ ಕಮಲನಗರ ತಾಲೂಕಿನ ಎಂ.ಪಿ. ಡೋಣಗಾಂವ ಗ್ರಾಮಕ್ಕೆ ಭೇಟಿ ನೀಡಿ ಸಂಕಷ್ಟದಲ್ಲಿರುವ ಜನರಿಗೆ ಧನಸಹಾಯ ಮಾಡಿದರು.
ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಶಿವರಾಜ ಸಂಗನಾಳ ಹಾಗೂ ವಿದ್ಯುತ್ ಅವಘಡದಿಂದ ಮೃತಪಟ್ಟ ಸೂರ್ಯಕಾಂತ ಲಕ್ಷ್ಮಣ ಡೋಂಗ್ರೆ ಅವರ ಮನೆಗೆ ತೆರಳಿದ ಸಚಿವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಅವರ ಸಮಸ್ಯೆಗಳನ್ನು ಆಲಿಸಿ, ವೈಯಕ್ತಿಕವಾಗಿ ಸಹಾಯ ಮಾಡಿದರು. ನೊಂದ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ ಸಚಿವರು, ಸಾರ್ವಜನಿಕರ ಸೇವೆಗೆ ನಾನು ಸದಾ ಸಿದ್ಧನಿದ್ದೇನೆ. ಯಾವುದೇ ರೀತಿಯ ಸಮಸ್ಯೆಗಳು ಎದುರಾದಲ್ಲಿ ತಮ್ಮನ್ನು ನೇರವಾಗಿ ಭೇಟಿ ಮಾಡಿ ಪರಿಹಾರ ಕಂಡುಕೊಳ್ಳಬಹುದೆಂದು ಧೈರ್ಯ ನೀಡಿದರು.
ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಎಪಿಎಂಸಿ ಅಧ್ಯಕ್ಷ ರಂಗರಾವ್ ಜಾಧವ, ಗ್ರಾಪಂ ಅಧ್ಯಕ್ಷ ಶಿವಕುಮಾರ ಜುಲೆ, ಮುಖಂಡರಾದ ಶಿವಾನಂದ ವಡ್ಡೆ, ಮಾಧವರಾವ್ ಚಾನಗುಣಿ, ಬಸವರಾಜ ಪಾಟೀಲ, ಗಿರೀಶ ಒಡೆಯರ್, ನಾಗೇಶ ಪತ್ರೆ, ಬಾಲಾಜಿ ತೇಲಂಗ ಇತರರಿದ್ದರು.
ಸಚಿವ ಪ್ರಭು ಚವ್ಹಾಣ್ ಅವರು ಜ. 1ರಂದು ಕಮಲನಗರದಲ್ಲಿ ಏರ್ಪಡಿಸಲಾದ ಅಖಂಡ ಹರಿನಾಮ ಸಪ್ತಾಹದಲ್ಲಿ ಭಾಗವಹಿಸಿದರು. ವ್ಯವಸ್ಥಿತವಾಗಿ ನಡೆಯುತ್ತಿರುವ ಹರಿನಾಮ ಸಪ್ತಾಹ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.