ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ನೆಲ ಕಲ್ಯಾಣ
Team Udayavani, Oct 16, 2021, 11:04 AM IST
ಬಸವಕಲ್ಯಾಣ: ಜಗತ್ತಿನಲ್ಲೆ ಪ್ರಥಮ ಬಾರಿಗೆ ಪ್ರಜಾಪ್ರಭುತ್ವ ಕಲ್ಪನೆಗೆ ಅಡಿಪಾಯ ಹಾಕಿದ ನೆಲ ಬಸವಕಲ್ಯಾಣ ನಾಡು ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಪ್ರೊ| ಸತ್ಯ ನಾರಾಯಣ ಬಟ್ಟು ಹೇಳಿದರು.
ನಗರದ ಹರಳಯನ್ನವರ ಗವಿಯಲ್ಲಿ ಹಮ್ಮಿಕೊಂಡ ಶರಣ ವಿಜಯೋತ್ಸವ ನಾಡಹಬ್ಬ ಹಾಗೂ 42ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ಸಂಸತ್ತು ಎಂದು ಕರೆಯುವ ಅನುಭವ ಮಂಟಪ ಇಲ್ಲಿತ್ತು. ಈ ಪುಣ್ಯ ಭೂಮಿಯಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಚಾಲನೆ ಸಿಕ್ಕಿದ್ದು, 12ನೇ ಶತಮಾನದ ಗತವೈಭವ ಮರುಕಳಿಸಲಿದೆ ಎಂದರು.
ಸಾನ್ನಿಧ್ಯ ವಹಿಸಿದ್ದ ಹುಲಸೂರು ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ, ನೇತೃತ್ವ ವಹಿಸಿದ್ದ ಹರಳಯ್ಯ ಗವಿಯ ಡಾ| ಗಂಗಾಂಬಿಕೆ ಅಕ್ಕ ಆಶೀರ್ವಚನ ನೀಡಿದರು. ನಂತರ ಅಂತಾರಾಷ್ಟ್ರೀಯ ವಚನ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ| ಮೀನಾಕ್ಷಿ ಬಾಳಿ ಮಾತನಾಡಿದರು. ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಅನುಭಾವ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಕುಲಸಚಿವ ಪ್ರೊ| ಬಸವರಾಜ ಡೊಣೂರ, ಬಸವರಾಜ ಸ್ವಾಮಿ, ಸೂರ್ಯಕಾಂತ ಕಾಂಬ್ಳೆ, ಸೇರಿ ದಂತೆ ಮತ್ತಿತರರು ಇದ್ದರು. ಹರಳಯ್ಯ ಸಮಾಜದ ಕಲಬುರಗಿ ಅಧ್ಯಕ್ಷ ಕಾಶಿರಾಮ ನಂದೂರಕರ್ ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.