ಮಂಠಾಳಕ್ಕೆ ಬೇಕು ಮೂಲ ಸೌಕರ್ಯ


Team Udayavani, Jan 29, 2019, 8:35 AM IST

bid-1.jpg

ಬಸವಕಲ್ಯಾಣ: ಮಂಠಾಳ ಗ್ರಾಮದ ಧರಂಪೇಠ ಬಡಾವಣೆಯು ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದು, ನಿವಾಸಿಗಳು ಕೊಳಚೆ ಪ್ರದೇಶದಲ್ಲಿ ಜೀವನ ಸಾಗಿಸುವಂಥ ಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದ ಪ್ರಮುಖ ರಸ್ತೆ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಡಾವಣೆ ಇದಾಗಿದ್ದು, ಒಂದು ದಶಕದಿಂದ ಗ್ರಾಮ ಪಂಚಾಯತ ಅಧಿಕಾರಿ ಮತ್ತು ಜನಪ್ರತಿನಿಧಿಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಸಿಸಿರಸ್ತೆ, ಚರಂಡಿ, ವಿದ್ಯುತ್‌ ಕಂಬಗಳ ವಿವಿಧ ಸೌಕರ್ಯಗಳ ಕೊರತೆಯಿಂದ ಧರಂಪೇಠ ನರಳುತ್ತಿದೆ.

ಚರಂಡಿ ಇಲ್ಲದ ಕಾರಣ ಬಡಾವಣೆಯ ಯಾವುದೇ ರಸ್ತೆಗೆ ಹೋಗಲಿ, ಪ್ರತಿ ಮನೆಯ ಮುಂದೆ ಮಲಿನ ನೀರು ಸಂಗ್ರಹ ವಾಗಿರುವುದು ಕಂಡುಬರುತ್ತದೆ. ಇದರಿಂದ ರಸ್ತೆ ಮಧ್ಯದಲ್ಲಿ ನಾಯಿ ಮತ್ತು ಹಂದಿಗಳು ಠಿಕಾಣಿ ಹೂಡುತ್ತಿವೆ. ಹಾಗಾಗಿ ಬಡಾವಣೆಯಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿ, ಸಾಂಕ್ರಾಮಿಕ ರೋಗಗಳು ಹರಡುವ ಭಯದಲ್ಲಿ ಮಕ್ಕಳು ಮತ್ತು ನಿವಾಸಿಗಳು ಸಂಚರಿಸುವಂತಾಗಿದೆ.

ಬಡಾವಣೆಯಲ್ಲಿ ವಿದ್ಯುತ್‌ ಕಂಬಗಳ ವ್ಯವಸ್ಥೆ ಇಲ್ಲ. ದೂರ ದೂರದ ಕಂಬಗಳಿಂದ ವಿದ್ಯುತ್‌ ಸಂಪರ್ಕ ಪಡೆದುಕೊಳ್ಳಲಾಗಿದೆ. ಇದರಿಂದ ಅಲ್ಲಲ್ಲಿ ಮನೆ ಮುಂದೆ ವಿದ್ಯುತ್‌ ತಂತಿಗಳು ಜೋತು ಬಿದ್ದಿವೆ. ಆದರೂ ಸಂಬಂಧ ಪಟ್ಟವರು ನಮ್ಮ ಸಮಸ್ಯೆ ಬಗೆಹರಿಸಲು ಮುಂದೆ ಬರುತ್ತಿಲ್ಲ ಎಂದು ನಿವಾಸಿಗಳು ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕಿದರು.

ಬಡಾವಣೆಯಲ್ಲಿ ವರ್ಷ ಕಳೆದಂತೆ ಮನೆಗಳ ಹಾಗೂ ಜನಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಸೌಕರ್ಯ ಕಲ್ಪಿಸಬೇಕೆಂದು ಸಾಕಷ್ಟು ಬಾರಿ ಸಂಬಂಧ ಪಟ್ಟವರ ಗಮನಕ್ಕೆ ತರಲಾಗಿದೆ. ಮತ್ತು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಡಾವಣೆ ನಿವಾಸಿ ಫಿರೋಜ್‌ಖಾನ್‌ ಅಳಲು ತೊಡಿಕೊಂಡರು.

ರಸ್ತೆ ಇಲ್ಲದಿದ್ದರೂ ನಡೆಯುತ್ತದೆ. ಆದರೆ ಚರಂಡಿ ನಿರ್ಮಿಸುವುದು ತುಂಬಾ ಅವಶ್ಯವಾಗಿದೆ. ಏಕೆಂದರೆ ನಿತ್ಯ ಬಳಕೆ ಮಾಡಿದ ನೀರು ಮನೆ ಮುಂದೆ ನಿಲ್ಲುವುದು ಒಂದು ಸಮಸ್ಯೆ ಯಾದರೆ, ರಾತ್ರಿ ಸಮಯದಲ್ಲಿ ವಿದ್ಯುತ್‌ ಕೈ ಕೊಟ್ಟರೆ ಸೊಳ್ಳೆಗಳ ಕಾಟದಿಂದ ಯಾರೂ ನಿದ್ದೆ ಮಾಡದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಬಡಾವಣೆಯ ಮಹಿಳೆಯೊಬ್ಬರು ಸಮಸ್ಯೆ ಹೇಳಿಕೊಂಡರು.

ತಾಲೂಕಿನ ದೊಡ್ಡ ಗ್ರಾಮ ಪಂಚಾಯತ ಎಂಬ ಹೆಗ್ಗಳಿಕೆಗೆ ಪಾತ್ರವಾದ ಮಂಠಾಳ ಗ್ರಾಮದ ಧರಂಪೇಠ ಬಡಾವಣೆಯಲ್ಲಿ ಒಂದು ದಶಕದಿಂದ ಮೂಲಭೂತ ಸೌಕರ್ಯ ಕಲ್ಪಿಸದಿರುವುದು ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಸಮಸ್ಯೆಗೆ ಸ್ಪಂದಿಸಬೇಕು ಎಂಬುದು ನಿವಾಸಿಗಳ ಒತ್ತಾಯವಾಗಿದೆ.

ಟಾಪ್ ನ್ಯೂಸ್

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.