ಏಕಾಏಕಿ ಗುಡಿಸಲು ತೆರವು: ರಸ್ತೆಯಲ್ಲೇ ಸಂತ್ರಸ್ತೆಗೆ ಹೆರಿಗೆ
Team Udayavani, Nov 23, 2017, 6:15 AM IST
ಬೀದರ: ಸರ್ಕಾರಿ ಜಾಗದಲ್ಲಿ ಹಲವು ವರ್ಷಗಳಿಂದ ಆಶ್ರಯ ಪಡೆದಿದ್ದ 80ಕ್ಕೂ ಹೆಚ್ಚು ಅಲೆಮಾರಿ ಸಮುದಾಯದ ಕುಟುಂಬಗಳ ಗುಡಿಸಲುಗಳನ್ನು ಮಂಗಳವಾರ ರಾತ್ರಿ ಏಕಾಏಕಿ ತೆರವುಗೊಳಿಸಲಾಗಿದ್ದು, ಈ ವೇಳೆ ಮನೆ ಕಳೆದುಕೊಂಡು ರಸ್ತೆಯಲ್ಲಿದ್ದ ಗರ್ಭಿಣಿಗೆ ರಸ್ತೆಯಲ್ಲೇ ಹೆರಿಗೆಯಾಗಿರುವ ಕರುಣಾಜನಕ ಘಟನೆ ನಡೆದಿದೆ.
ನಗರದ ನೌಬಾದ್ ಆಟೋನಗರ ಹತ್ತಿರ ಕೆಐಎಡಿಬಿ ಅಧಿಕಾರಿಗಳು ರಾತ್ರಿಯಿಡಿ ಪೊಲೀಸರ ಪಹರೆಯಲ್ಲಿ ಕಾರ್ಯಾಚರಣೆ ನಡೆಸಿ ಗುಡಿಸಲುಗಳನ್ನು ತೆರವುಗೊಳಿಸಿದರು. ವಿವಿಧ ವೃತ್ತಿಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅಲೆಮಾರಿ ಸಮುದಾಯ ಗುಡಿಸಲು ದಿಢೀರ್ ತೆರವುಗೊಳಿಸಿದ್ದರಿಂದ ಬೀದಿಗೆ ಬಿದ್ದಿದ್ದಾರೆ. ರಾತ್ರಿಯಿಡೀ ಮಹಿಳೆ, ಮಕ್ಕಳು, ವಯೋವೃದಟಛಿರು ಮೈಕೊರೆವ ಚಳಿಯಲ್ಲೇ ರಸ್ತೆ ಪಕ್ಕ ಜಾಗರಣೆ ಮಾಡುವಂಥ ಸ್ಥಿತಿ ನಿರ್ಮಾಣವಾಗಿತ್ತು. ತೆರವು ಕಾರ್ಯಾಚರಣೆ ಸಂದರ್ಭದಲ್ಲೇ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂದ ಬಳಲಲು ಆರಂಭಿಸಿದ್ದಳು.
ಆದರೆ, ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಶೀಘ್ರ ಆಗದ ಕಾರಣ ಗರ್ಭಿಣಿಗೆ ರಸ್ತೆ ಪಕ್ಕದಲ್ಲೇ ಹೆರಿಗೆ ಆಗಿದೆ. ಗುಡಿಸಲು ತೆರವುಗೊಳಿ ಸಿದ್ದರಿಂದ ಗರ್ಭಿಣಿ ಸೇರಿದಂತೆ ನಿವಾಸಿಗಳು ಆಶ್ರಯವಿಲ್ಲದೇ ನರಳಾಡಿದರೂ ಯಾರೊಬ್ಬ ಅ ಧಿಕಾರಿಗಳು ಸ್ಥಳಕ್ಕೆ ಭೇಟಿ ಅವರ ಕಣ್ಣೀರೊರೆಸುವ ಯತ್ನ ಮಾಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.