ರಾಜಕೀಯ ಪಕ್ಷಗಳ ಚಟುವಟಿಕೆ ಚುರುಕು

Team Udayavani, Aug 4, 2018, 11:42 AM IST

bid-23.jpg

ಹುಮನಾಬಾದ: ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ರಾಜ್ಯದ 3ನೇ ಗ್ರಾಮ ಪಂಚಾಯಿತಿ ಎನ್ನುವ ಖ್ಯಾತಿ ಹೊಂದಿರುವ ತಾಲೂಕಿನ ಹಳ್ಳಿಖೇಡ(ಬಿ)ಅನ್ನು ರಾಜ್ಯ ಸರ್ಕಾರ ಪುರಸಭೆಯಾಗಿ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಿದ್ದು, ಹೊಸ ಪುರಸಭೆಗೆ ಆ.29ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಚಟುವಟಿಕೆ ಚುರುಗೊಂಡಿವೆ.

ಮೇಲ್ದರ್ಜೆಗಾಗಿ ಹೋರಾಟ: 2011ರ ಜನಗಣತಿ ಪ್ರಕಾರ ಹಳ್ಳಿಖೇಡ(ಬಿ) 20,163 ಜನಸಂಖ್ಯೆ ಹೊಂದಿತ್ತು. ಜನಸಂಖ್ಯೆ ಆಧರಿಸಿ, 2015-16ನೇ ಸಾಲಿನಲ್ಲಿ ಅಂದಿನ ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತಯ್ಯ ತೀರ್ಥ ನೇತೃತ್ವದಲ್ಲಿ ಗ್ರಾಮಸ್ತರು ಗ್ರಾಮ ಪಂಚಾಯಿತಿಗೆ ಪಟ್ಟಣದ ಮಾನ್ಯತೆ ನೀಡಿ, ಮೇಲ್ದರ್ಜೆಗೇರಿಸುವಂತೆ ಶಾಸಕ ರಾಜಶೇಖರ ಪಾಟೀಲ ಅವರಿಗೆ ಮನವಿ ಸಲ್ಲಿಸಿದ್ದರು.

ವಿಷಯವನ್ನು ಗಂಭೀರವಾಗಿ ಪರಗಣಿಸಿದರೂ ಗ್ರಾಮ ಪಂಚಾಯಿತಿಯಿಂದ ಅಗತ್ಯ ದಾಖಲೆ ಸಕಾಲಕ್ಕೆ ಸಲ್ಲಿಕೆಯಾಗದ ಕಾರಣ ಸರ್ಕಾರ ಘೋಷಣೆ ಮಾಡಲಿಲ್ಲ. ತದನಂತರ ಸಲ್ಲಿಸದ ದಾಖಲೆ ಪರಿಶೀಲಿಸಿದ ಸರ್ಕಾರ ಹಳ್ಳಿಖೇಡ(ಬಿ)ಗೆ ಪುರಸಭೆ ಮಾನ್ಯತೆ ನೀಡಿ ಅಧಿಕೃತ ಘೋಷಣೆ ಮಾಡಿತು. 

ಎಸಿ ಆಡಳಿತಾಧಿಕಾರಿ: ಗ್ರಾಮ ಪಂಚಾಯಿತಿಗೆ ಆಗಷ್ಟೇ ಚುನಾವಣೆ ನಡೆದ ಹಿನ್ನೆಲೆಯಲ್ಲಿ ಹೊಸದಾಗಿ ಆಯ್ಕೆಗೊಂಡಿದ್ದ
ಕೆಲವು ಸದಸ್ಯರು ತಕ್ಷಣ ಚುನಾವಣೆ ನಡೆಸುವುದನ್ನು ವಿರೋಧಿಸಿದ್ದರಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನೇ 6ತಿಂಗಳ ಅವಧಿಗಾಗಿ ಪುರಸಭೆ ಹಂಗಾಮಿ ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿತ್ತು. ಹೊಸ ಅಧ್ಯಕ್ಷರಿಗೆ ನೀಡಿದ್ದ 6ತಿಂಗಳ ಅವಧಿ ಹಿಂದೆ ಪೂರ್ಣಗೊಂಡ ಹಿನ್ನೆಲೆಯಲ್ಲಿ 6ತಿಂಗಳಿಂದ ಉಪವಿಭಾಗಾಧಿಕಾರಿಗಳೇ ಪುರಸಭೆ ಆಡಳಿತಾಧಿಕಾರಿಯಾಗಿದ್ದರು.

ಆಗಸ್ಟ್‌ನಲ್ಲೇ ಚುನಾವಣೆ: ಕರ್ನಾಟಕ ಸರ್ಕಾರ ರಾಜ್ಯ ಪತ್ರದ ಆದೇಶದನ್ವಯ ಹಳ್ಳಿಖೇಡ(ಬಿ) ಪುರಸಭೆಯ 23ವಾರ್ಡ್‌ಗಳಿಗೆ ಚುನಾವಣೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳು ಆ.10ರಂದು ಅಧಿಕೃತ ಆದೇಶ ಹೊರಡಿಸುವರು. ಆ.17 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ನಾಮಪತ್ರ ಹಿಂದಕ್ಕೆ ಪಡೆಯಲು ಆ.20 ಕಡೆದಿನ.

ಆ.29ರಂದು ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ಮತದಾನ ನಡೆಯುವುದು. ಅಗತ್ಯಬಿದ್ದರೇ ಆ.31ಕ್ಕೆ ಮರು ಮತದಾನ
ನಡೆಸಲು ಸೂಚಿಸಿದೆ. ಸೆ.1ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು
ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

ರಾಜಕೀಯ ಚಟುವಟಿಕೆ ಚುರುಕು: ಚುನಾವಣೆ ಘೋಷಣೆ ಬೆನ್ನಲ್ಲೆ ವಿವಿಧ ರಾಜಕೀಯ ಪಕ್ಷಗಳ ಚಟುವಟಿಕೆ ಇಂದಿನಿಂದ
ಚುರುಕುಗೊಂಡಿವೆ. ಸದ್ಯ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಿಜೆಪಿ, ಈ ಬಾರಿ ಚುನಾವಣೆ ಸ್ಪರ್ಧೆಗಾಗಿ ನಮ್ಮ ಪಕ್ಷದಿಂದ ಪ್ರತೀ ವಾರ್ಡ್‌ಗಳಲ್ಲಿ ಕನಿಷ್ಟ 3ರಿಂದ 5ಜನ ಟಿಕೆಟ್‌ ಆಕಾಂಕ್ಷಿಗಳಿದ್ದಾರೆ ಎಂದು ಹೇಳುತ್ತಿದೆ.

ಕ್ಷೇತ್ರದಲ್ಲಿ ನಮ್ಮ ಪಕ್ಷದವರೇ ಶಾಸಕರು ಮಾತ್ರವಲ್ಲ ಸದ್ಯ ಸಚಿವರು ಆಗಿದ್ದಾರೆ. ಮೂರು ಅವಧಿಯಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೈಗೊಂಡ ನಮ್ಮಲ್ಲಿ ಪ್ರತೀ ವಾರ್ಡ್‌ನಲ್ಲಿ 4ರಿಂದ 8ಜನ ಟಿಕೆಟ್‌ ಆಕಾಂಕ್ಷಿಗಳಿದ್ದಾರೆ ಎನ್ನುವುದು ಕಾಂಗ್ರೆಸ್‌ ಮುಖಂಡರ ಅಭಿಪ್ರಾಯ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ ಎಲ್ಲ ಕಡೆ 2ನೇ ಸ್ಥಾನದಲ್ಲಿರುವ ಕಾರಣ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಸ್ಥಿತ್ವ ಸರಿ ಇರುವ ಕಾರಣ ನಮ್ಮಲ್ಲೂ ಟಿಕೆಟ್‌ಗಾಗಿ ಭಾರೀ ಪೈಪೋಟಿ ಇದೆ ಎನ್ನುವುದು ಜೆಡಿಎಸ್‌ ಮುಖಂಡರ ಅನಿಸಿಕೆ

ಕ್ಷೇತ್ರದಲ್ಲಿ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಎಲ್ಲ 23 ಸ್ಥಾನಗಳಿಂದ ಅಭ್ಯರ್ಥಿಗಳನ್ನು
ಕಣಕ್ಕಿಳಿಸುವುದು ಮಾತ್ರ ಅಲ್ಲ. ಅಧಿಕಾರ ಗದ್ದುಗೆಯನ್ನೂ ನಾವೇ ಹಿಡಿಯುತ್ತೇವೆ.
 ಅಪ್ಸರಮಿಯ್ಯ ಹುಮನಾಬಾದ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ

ಕ್ಷೇತ್ರದಲ್ಲಿ ಒಂದು ಜಿಲ್ಲಾ ಪಂಚಾಯಿತಿ, ಎರಡು ತಾಲೂಕು ಪಂಚಾಯಿತಿ ಸ್ಥಾನಗಳನ್ನು ನಾವು ಗೆದ್ದಿದ್ದೇವೆ. ಸಾಕಷ್ಟು ಅಭಿವೃದ್ಧಿ ಕೈಗೊಂಡಿದ್ದು, ಎಲ್ಲ 23 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಿಕ್ಕಿಸುತ್ತೇವೆ. ಅಲ್ಲದೇ ಅಧಿಕಾರ ಗದ್ದುಗೆ ಹಿಡಿಯುವುದು ಕೂಡ ನಾವೆ.
 ವಿಶ್ವನಾಥ ಪಾಟೀಲ ಮಾಡ್ಗುಳ್‌, ಬಿಜೆಪಿ ತಾಲ್ಲೂಕು ಅಧ್ಯಕ್ಷರು

ಹಳ್ಳಿಖೇಡ(ಬಿ) ಕ್ಷೇತ್ರದಲ್ಲಿ ಜೆಡಿಎಸ್‌ ಯಾವತ್ತೂ ಪ್ರಬಲವಾಗಿದೆ. ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ
ಸರ್ಕಾರ ಅಸ್ತಿತ್ವದಲ್ಲಿದೆ. ರೈತರ ಸಾಲಮನ್ನಾ ಮೊದಲಾದ ಜನಪರ ಕೆಲಸವನ್ನು ಕುಮಾರಸ್ವಾಮಿ ಮಾಡಿದ್ದಾರೆ. ನಾವು
23 ಸ್ಥಾನಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಅಧಿಕಾರ ಗದ್ದುಗೆ ಹಿಡಿಯಲು ಶಕ್ತಿಮೀರಿ ಪ್ರಯತ್ನಿಸುತ್ತೇವೆ.
 ಮಹೇಶ ಅಗಡಿ, ಅಧ್ಯಕ್ಷರು, ತಾಲ್ಲೂಕು ಜೆಡಿಎಸ್‌

„ವಿಶೇಷ ವರದಿ

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.