ಉತ್ತಮ ಸಮಾಜಕ್ಕೆ ಮತದಾನ ಪಾತ್ರ ಮಹತ್ವದ್ದು
Team Udayavani, Dec 7, 2021, 12:14 PM IST
ರಾಯಚೂರು: ಸದೃಢ ಸಮಾಜ ನಿರ್ಮಾಣಕ್ಕೆ ಉತ್ತಮ ಜನನಾಯಕರ ಅಗತ್ಯವಿದೆ. ಅಂಥ ಜನನಾಯಕರನ್ನು ಆಯ್ಕೆ ಮಾಡಲು ಮತದಾನ ಬಹಳ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಪಂ ಯೋಜನಾ ನಿರ್ದೇಶಕ ಮಡೋಳಪ್ಪ ಪಿ.ಎಸ್ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ವಿವಿಧ ಚಟುವಟಿಕೆಗಳ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
18 ವರ್ಷ ಪೂರ್ಣಗೊಂಡ ಯುವಜನರು ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಪ್ರತಿ ಚುನಾವಣೆಯಲ್ಲಿ ತಪ್ಪದೆ ಮತ ಚಲಾಯಿಸುವ ಮೂಲಕ ಅರ್ಹ ನಾಯಕರನ್ನು ಆಯ್ಕೆ ಮಾಡಬೇಕು. ಇದು ಪ್ರತಿ ಪ್ರಜೆಯ ಮುಖ್ಯ ಕರ್ತವ್ಯ ಎಂದರು.
ನಮ್ಮ ದೇಶದ ಪ್ರಜ್ಞಾಪ್ರಭುತ್ವದ ಇಡೀ ವಿಶ್ವದಲ್ಲೇ ದೊಡ್ಡದಾಗಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿಯೇ ಮತದಾನ. ತಮ್ಮ ಮನೆಯ ನೆರೆ-ಹೊರೆಯವರಿಗೆ ಮತದಾನ ನೋಂದಣಿ ಮಾಡಿಕೊಳ್ಳುವಂತೆ ಸಲಹೆ ನೀಡಬೇಕು ಎಂದು ಹೇಳಿದರು.
ಗ್ರಾಮ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತರನ್ನು ಸಂಪರ್ಕಿಸಿ ಅಥವಾ ನೇರವಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಯಾವುದೇ ಜಾತಿ, ಮತ, ಆಮಿಷಕ್ಕೊಳಗಾಗದೇ ಮತ ಚಲಾಯಿಸಬೇಕು. ಚುನಾವಣೆ ಪ್ರಕ್ರಿಯೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಕುರಿತು ತಿಳಿಸುವ ಉದ್ದೇಶದಿಂದ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ವಿವರಿಸಿದರು.
ಡಿಡಿಪಿಐ ವೃಷಬೇಂದ್ರಯ್ಯ ಸ್ವಾಮಿ ಮಾತನಾಡಿ, ಜಿಲ್ಲೆಯ ಮತದಾನ ಜಾಗೃತಿ ಹಾಗೂ ಮತದಾನ ಶೇಕಡ ಹೆಚ್ಚಳಕ್ಕೆ ಈಗಾಗಲೇ ಅಗತ್ಯ ಸಿದ್ಧತೆಯೊಂದಿಗೆ ಜಾಗೃತಿ ಮೂಡಿಸಲಾಗುತ್ತದೆ. ಕೋವಿಡ್ -19ರ ನಿಯಂತ್ರಣಕ್ಕಾಗಿ ಪ್ರತಿ ಶಾಲಾ ವಿದ್ಯಾರ್ಥಿಯ ಪೋಷಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಅಲ್ಲದೇ, ಕೋವಿಡ್ ಮುಕ್ತ ಜಿಲ್ಲೆಗಾಗಿ ಶಿಕ್ಷಣ ಇಲಾಖೆ ಪ್ರತಿ ಶಿಕ್ಷಕರು ಶ್ರಮಿಸುತ್ತಿದ್ದಾರೆ ಎಂದರು. ಡಿಡಿಪಿಯು ಸೋಮಶೇಖರ ಹೊಕ್ರಾಣಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಎಂ.ಎಚ್ ನಾಯಕ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.