ಹಳಕಟ್ಟಿ ತ್ಯಾಗ-ಪರಿಶ್ರಮ ಅಪಾರ
Team Udayavani, Jul 8, 2017, 2:46 PM IST
ಭಾಲ್ಕಿ: ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಅವರ ತ್ಯಾಗ ಮತ್ತು ಪರಿಶ್ರಮದಿಂದಾಗಿ ಇಂದು ನಮಗೆ ಸಮಗ್ರ ವಚನ ಸಾಹಿತ್ಯ ಪುಸ್ತಕ ರೂಪದಲ್ಲಿ ದೊರೆತಿದೆ ಎಂದು ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದ್ದಾರೆ.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಡಾ| ಫ.ಗು. ಹಳಕಟ್ಟಿ ಜಯಂತಿ ಮಹೋತ್ಸವ ನಿಮಿತ್ತ ನಡೆದ “ನವಿಲೂರು ನಿಲ್ದಾಣ’ ನಾಟಕ
ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಡಾ| ಫ.ಗು.ಹಳಕಟ್ಟಿಯವರ ಜೀವನದ ಬಹುಭಾಗ ಬಸವಾದಿ ಶರಣರ ವಚನ
ಸಾಹಿತ್ಯದ ಸಂಗ್ರಹದಲ್ಲಿಯೇ ಕಳೆದಿದೆ. ಇದಕ್ಕಿಂತ ಪೂರ್ವದಲ್ಲಿ ವಚನ ಸಾಹಿತ್ಯ ತಾಡೋಲೆಗಳಲ್ಲಿ ಬಿಡಿ ಬಿಡಿಯಾಗಿತ್ತು. ಹಳಕಟ್ಟಿಯವರ ಪರಿಶ್ರಮದಿಂದ ಇಂದು ವಚನ ಸಾಹಿತ್ಯವನ್ನು ನಾವು ಪುಸ್ತಕ ರೂಪದಲ್ಲಿ ಓದುವಂತಾಗಿದೆ. ಅವರ ಶ್ರಮ ನಮ್ಮೆಲ್ಲರಿಗೆ ಆದರ್ಶವಾಗಿದೆ ಎಂದು ಹೇಳಿದರು.
ಶ್ರೀ ರೇವಣಸಿದ್ದ ಸ್ವಾಮಿಗಳು ಸಮ್ಮುಖ ವಹಿಸಿದ್ದರು. ಅ.ಭಾ.ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಚಂದ್ರಕಾಂತ ಬಿರಾದಾರ,
ಬಸವಕೇಂದ್ರ ಭಾಲ್ಕಿ ಅಧ್ಯಕ್ಷ ಕಿರಣ ಖಂಡ್ರೆ ಉಪಸ್ಥಿತರಿದ್ದರು. ಇದೇವೇಳೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪುರ
ಗ್ರಾಮದ ನಾಟ್ಯ ಯೋಗ ಕಲಾ ತಂಡದವರಿಂದ ಪ್ರದರ್ಶನಗೊಂಡ “ನವಿಲೂರು ನಿಲ್ದಾಣ’ ನಾಟಕ ಗಮನ ಸೆಳೆಯಿತು. ಗಾಂವಕರ್ ನಿರೂಪಿಸಿದರು. ವೀರಣ್ಣ ಕುಂಬಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.