ಕನ್ನಡಪರ ಸರ್ಕಾರ ಬರುವ ತನಕ ಹೋರಾಟ ನಿರಂತರ

Team Udayavani, Nov 22, 2021, 1:30 PM IST

14kannada

ಆಲಮೇಲ: ಕರ್ನಾಟಕದಲ್ಲಿ ಕನ್ನಡ ಪರವಾಗಿ ಯಾವುದೆ ಸರ್ಕಾರಗಳು ಕೆಲಸ ಮಾಡುತ್ತಿಲ್ಲ. ರಾಷ್ಟ್ರೀಯ ಪಕ್ಷಗಳು ರಾಷ್ಟ್ರೀಯವಾದಿಗಳಂತೆ ವರ್ತಿಸುತ್ತಿಸುವ ಮೂಲಕ ಕನ್ನಡ ಬೆಳವಣಿಗೆ ನಿರ್ಲಕ್ಷಸಿವೆ. ಕನ್ನಡ ಪರವಾಗಿ ಕೆಲಸ ಮಾಡುವ ಸರ್ಕಾರ ಬರುವತನಕ ನಿರಂತರ ಹೋರಾಟ ಮಾಡುತ್ತೇವೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ಹೇಳಿದರು.

ಪಟ್ಟಣದ ಫೀರ ಗಾಲಿಬ ಸಾಬ ಉರೂಸ್‌ ನಿಮಿತ್ತ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಆಲಮೇಲ ತಾಲೂಕು ಘಟಕ ಸಹಯೋಗದಲ್ಲಿ ನಡೆದ ಕನ್ನಡ ಉತ್ಸವ ಮತ್ತು ಪುನೀತ್‌ರಾಜಕುಮಾರ ನುಡಿ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ವಿವಿದ ರಾಜ್ಯಗಳು ರಾಜಕಾರಣಿಗಳು ತಮ್ಮ ರಾಜ್ಯದ ಹಿತಾಸಕ್ತಿಗಳು ಕಾಪಾಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ರಾಷ್ಟೀಯ ಪಕ್ಷಗಳು ಆಳ್ವಿಕೆ ಮಾಡುತ್ತಿದ್ದು ಕನ್ನಡದ ಎಲ್ಲ ರಂಗದ ಬೆಳವಣಿಗೆ ನಿರ್ಲಕ್ಷಿಸುತ್ತಿದೆ. ಕನ್ನಡ ಪರವಾಗಿ ಕೆಲಸ ಮಾಡುವಂತ ಸರ್ಕಾರ ಬರುವಂತೆ ಮಾಡಲು ಕನ್ನಡಪರ ಸಂಘಟನೆ ನಿರಂತರ ಹೋರಾಟ ಮಾಡಲಿದೆ ಎಂದರು.

ಕನ್ನಡ ಭಾಷೆ, ನೆಲ, ಜಲ ಸಮಗ್ರ ಕರ್ನಾಟಕದ ರಕ್ಷಣೆಗಾಗಿ ಕನ್ನಡಪರ ಸಂಘಟನೆ ಹೋರಾಟ ಮಾಡುತ್ತಿದ್ದರೆ ನಮ್ಮ ಸಂಘಟನೆಯನ್ನು ಹತ್ತಿಕಲು ಅನೇಕ ಪ್ರಕರಣಗಳು ದಾಖಲಿಸಿ ಮೂಲೆಗುಂಪು ಮಾಡುವ ಹುನ್ನಾರ ನಡೆದಿದೆ. ರಾಷ್ಟ್ರೀಯ ರಾಜಕೀಯ ಪಕ್ಷಗಳು ಕನ್ನಡಪರ ಸಂಘಟನೆ ಕಾರ್ಯಕರ್ತರ ಮೇಲೆ ಎಷ್ಟೇ ಪ್ರಕರಣ ದಾಖಲಿಸಿದರು ಹೋರಾಟ ನಿಲ್ಲಿಸುವುದಿಲ್ಲ. ರೈತ ಸಂಘ ಸೇರಿದಂತೆ ಕೆಲವು ಸಂಘಟನೆಗಳ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಸರ್ಕಾರ ಹಿಂಪಡೆಯುತ್ತಿದೆ. ಆದರೆ ಕನ್ನಡಪರ ಸಂಘಟನೆಗಳ ಮೇಲೆ ದಾಖಲಿಸಿರುವ ಯಾವುದೇ ಪ್ರಕರಣಗಳು ಹಿಂಪಡೆಯುತ್ತಿಲ್ಲ ಎಂದರು.

ಕನ್ನಡದ ಬಗ್ಗೆ ಅಗೌರವದಿಂದ ಮಾತನಾಡುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ಕನ್ನಡದ ಬಗ್ಗೆ ಅಗೌರವ ತೋರಿದ ಗೂಗಲ್‌ ವಿರುದ್ಧ ಹೋರಾಟ ಮಾಡಿದ ಫಲದಿಂದ ಕ್ಷಮೆ ಕೇಳಿದೆ. ಅದು ಕನ್ನಡಪರ ಸಂಘಟನೆ ಹೋರಾಟದಿಂದ. ಹಾಗೆ ರೈಲ್ವೆ ಡಿ ದರ್ಜೆ ನೌಕರರಿಗೆ ಕನ್ನಡದಲ್ಲಿಯೆ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದ್ದು ಕನ್ನಡಪರ ಸಂಘಟನೆ ಹೋರಾಟದಿಂದ ಎಂದರು.

ನಮ್ಮ ಜೊತೆಯಲ್ಲಿದ್ದು ತಾನು ಮಾಡಿದ ಸಹಾಯ ಯಾರಿಗೂ ಗೊತ್ತಾಗದ ರೀತಿಯಲ್ಲಿ ಅನೇಕ ಬಡವರಿಗೆ, ಅನಾಥರಿಗೆ ಆಶ್ರಯದಾತನಾಗಿದ್ದ ಕನ್ನಡದ ಶ್ರೇಷ್ಠ ನಟ ಪುನೀತ್‌ ರಾಜಕುಮಾರ ಅವರ ನಡೆ ಅನೇಕ ನಟರಿಗೆ, ಶ್ರೀಮಂತರಿಗೆ ಪ್ರೇರಣೆಯಾಗಿದೆ. ಅವರ ಮಾಡುವ ಕೆಲಸ ವಿದೇಶಗಳಲ್ಲಿಯೂ ಪ್ರೇರಣೆಯಾಗಿದೆ. ಅವರು ಮೃತರಾಗಿರಬಹುದು ಅವರು ಮಾಡಿರುವ ಸಹಾಯ, ಸಾಧನೆಗಳು ಜನರ ಮನಸಿನಲ್ಲಿ ಶಾಶ್ವತವಾಗಿ ಜೀವಂತವಾಗಿರಲಿವೆ ಎಂದರು.

ಸಾನ್ನಿಧ್ಯ ವಹಿಸಿದ್ದ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು, ಕಾನಿಪ ತಾಲೂಕಾಧ್ಯಕ್ಷ ಸೈಯದ್‌ ದೇವರಮನಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಮಾತನಾಡಿದರು. ತಾಲೂಕು ಸರಕಾರಿ ನೌಕರ ಸಂಘದ ಅಧ್ಯಕ್ಷ ಆನಂದ ಭೂಸನೂರ, ಕರವೇ ತಾಲೂಕಾಧ್ಯಕ್ಷ ಅಶೋಕ ಭೂಸನೂರ, ಗುಂಡು ಕರುಟೆ, ಈರಣ್ಣ ತೆಲ್ಲೂರ, ಸಂತೋಷ ಉಪ್ಪಿನ ಇದ್ದರು. ನಂತರ ವಿವಿಧ ಕಲಾವಿದರಿಂದ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.