ಎಲ್ಲ ರಂಗಗಳಲ್ಲಿ ಮಹಿಳೆ ಸಬಲೆ


Team Udayavani, Jan 29, 2019, 8:26 AM IST

bell-2.jpg

ಬೀದರ: ಪ್ರತಿಯೊಬ್ಬ ಹೆಣ್ಣು ಮಕ್ಕಳಲ್ಲಿ ಯಾವುದಾದರೊಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದು ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ ಹೇಳಿದರು.

ನಗರದ ಜಿಲ್ಲಾ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆದ ಮಹಿಳಾ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮಹಿಳೆ ಅಬಲೆಯಲ್ಲ ಸಬಲೆ. ಎಲ್ಲಾ ರಂಗಗಳಲ್ಲಿ ಕೆಲಸ ಮಾಡಬಲ್ಲೆ ಎನ್ನುವುದನ್ನು ಹಲವಾರು ಮಹಿಳೆಯರು ಸಾಧಿಸಿ ತೋರಿಸಿದ್ದಾರೆ. ಹಾಗಾಗಿ ಮಹಿಳೆಯರು ಕೇವಲ ಮನೆಗೆಲಸಗಳಿಗೆ ಮಾತ್ರ ಸೀಮಿತವಾಗದೇ ಸಾಹಿತ್ಯ, ಸಂಗೀತ, ನಾಟಕ ಇಂತಹ ಯಾವುದಾದರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಾಹಿತಿ ಪ್ರತಿಭಾ ಚಾಮಾ ಮಾತನಾಡಿ, ಹಲವು ಸಾಂಸ್ಕೃತಿಕ ಕಲೆಗಳು ಗ್ರಾಮಗಳಲ್ಲಿ ಮಾತ್ರ ಜೀವಂತವಾಗಿವೆ. ಹಾಗಾಗಿ ಗ್ರಾಮಗಳನ್ನು ಅಭಿವೃದ್ಧಿಪಡಿಸಿದಲ್ಲಿ ಮಾತ್ರ ಕಲೆಗಳ ಬೆಳವಣಿಗೆ ಸಾಧ್ಯ ಎಂದು ಹೇಳಿದರು.

ಬೆಂಗಳೂರು ಮಹಿಳಾ ಟಾಸ್ಕ್ಫೋರ್ಸ್‌ನ ಮಾಜಿ ಅಧ್ಯಕ್ಷೆ ಗುರಮ್ಮಾ ಸಿದ್ದಾರೆಡ್ಡಿ ಮಾತನಾಡಿದರು. ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ, ಹಿರಿಯ ಚಿತ್ರಕಲಾವಿದೆ ಶಾಂತಾ ಕೆ.ಸೌದತ್ತಿ, ಸಾಹಿತಿಗಳಾದ ಭಾರತಿ ವಸ್ತ್ರದ, ಗಂಗಮ್ಮ ಫುಲೆ, ಸಂಜೀವಕುಮಾರ ಅತಿವಾಳೆ ಹಾಗೂ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ ಸ್ವಾಗತಿಸಿದರು. ಶ್ರೀದೇವಿ ಪಾಟೀಲ ನಿರೂಪಿಸಿದರು. ಪ್ರಿಯಾ ಲಂಜವಾಡಕರ್‌ ವಂದಿಸಿದರು.

ಕಾರ್ಯಕ್ರಮದಲ್ಲಿ ರಂಗೋಲಿ, ಆಶುಭಾಷಣ ಸ್ಪರ್ಧೆಗಳಲ್ಲಿ ವಿಜೇತರು, ಚಿತ್ರಕಲಾ ಶಿಬಿರ, ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆ, ಆಹಾರ ಮಳಿಗೆಯಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ರಂಗೋಲಿಯಲ್ಲಿ ಮೂಡಿ ಬಂದ ಬಣ್ಣ-ಬಣ್ಣದ ಚಿತ್ರಗಳು ನೋಡುಗರ ಗಮನ ಸೆಳೆದವು. ಬಳಿಕ ಸ್ತ್ರೀಯರ ಸಮಸ್ಯೆಗಳ ಕುರಿತು ನಡೆದ ಕವಿಗೋಷ್ಠಿಯಲ್ಲಿ ಹಿರಿಯ ಸಾಹಿತಿ ರಜಿಯಾ ಬಳಬಟ್ಟಿ ಅವರು ವಿಶೇಷ ಉಪನ್ಯಾಸ ನೀಡಿದರು. ಪುಷ್ಪಾ ಕನಕ, ಸುನೀತಾ ಬಿರಾದಾರ, ಸಾರಿಕಾ ಗಂಗಾ, ಮೇನಕಾ ಪಾಟೀಲ, ರೇಣುಕಾ ಮಠ, ಸುಮನ್‌ ಹೆಬ್ಟಾಳಕರ್‌, ಸಾಧನಾ ರಂಜೋಳಕರ್‌, ಕಾವ್ಯನಂದಿನಿ ಸಿಂಧೆ, ಪುಣ್ಯವತಿ ವಿಸಾಜಿ, ಚನ್ನಮ್ಮ ವಲ್ಲೆಪೂರೆ, ಕೃಷ್ಣಾಬಾಯಿ ಪವಾರ, ಕಲ್ಪನಾ ಶೀಲವಂತ, ಶ್ರೀದೇವಿ ಹೂಗಾರ ಅವರು ಸ್ತ್ರೀಯರ ಕುರಿತಾದ ಕವನಗಳನ್ನು ವಾಚಿಸಿದರು.

ಟಾಪ್ ನ್ಯೂಸ್

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.