ಕುವೆಂಪು ಕೃತಿಗಳಲ್ಲಿದೆ ವಿಶ್ವಮಾನವ ಸಂದೇಶ: ಡಾ| ಹೆಬ್ಟಾಳೆ

Team Udayavani, Jan 16, 2019, 9:23 AM IST

bid-2.jpg

ಬೀದರ: ಕರ್ನಾಟಕ ಜಾನಪದ ಅಕಾಡೆಮಿ ಪ್ರಾದೇಶಿಕ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಾದೇಶಿಕ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘದ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ರಾಷ್ಟ್ರಕವಿ ಕುವೆಂಪು ಜಯಂತಿ ನಿಮಿತ್ತ ವಿಶ್ವಮಾನವ ದಿನ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜಾನಪದ ಅಕಾಡೆಮಿ ಪ್ರಾದೇಶಿಕ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಡಾ| ಜಗನ್ನಾಥ ಹೆಬ್ಟಾಳೆ ಮಾತನಾಡಿ, ಕುವೆಂಪು ಅವರು ರಚಿಸಿದ ಅನೇಕ ಮೌಲಿಕ ಕೃತಿಗಳಲ್ಲಿ ಮುಖ್ಯವಾಗಿ ವಿಶ್ವಮಾನವ ಸಂದೇಶ ಸಿಗುತ್ತದೆ. ಈ ಕಾರಣದಿಂದಲೇ ಅವರ ಅನೇಕ ಪದ್ಯಗಳು ಸಿನಿಮಾ ಹಾಡುಗಳಾಗಿವೆ. ಕಾದಂಬರಿಗಳು ಕೂಡ ಸಿನಿಮಾಗಳಾಗಿವೆ ಎಂದರು.

ಬುದ್ಧ, ಬಸವ, ಅಂಬೇಡ್ಕರರಂತಹ ವಿಭೂತಿ ಪುರುಷರು ಹೊಂದಿದ್ದ ಜೀವಪರ ಆದರ್ಶ ಗುಣಗಳನ್ನು ನಾವು ಕುವೆಂಪು ಅವರಲ್ಲಿ ಕಾಣಬಹುದಾಗಿದೆ. ಇಂತಹ ಮಹಾನ್‌ ಮಾನವತಾವಾದಿ ಕುವೆಂಪು ಅವರ ಕೃತಿಗಳನ್ನು ಮಕ್ಕಳಿಗೆ ಓದಲು ಹೇಳಬೇಕಿದೆ ಎಂದರು.

ಮನುಷ್ಯ ಜಾತಿಯಿಂದ ಮುಖ್ಯವಾಗಬಾರದು. ನಡೆ-ನುಡಿಯಿಂದ ಮುಖ್ಯವಾಗಬೇಕು. ಮನುಷ್ಯನಿಗೆ ಸಮಷ್ಠಿ ಪ್ರಜ್ಞೆ, ಸಂಸ್ಕಾರ ಹಾಗೂ ಸಂಪನ್ನತೆ ಬಹಳ ಮುಖ್ಯ. ಮನುಷ್ಯನು ತನ್ನ ನಡತೆಯಲ್ಲಿ ಬದಲಾವಣೆ ತಂದುಕೊಳ್ಳಬೇಕು ಎನ್ನುವಂತಹ ಅನೇಕ ಸಂದೇಶಗಳನ್ನು ಕುವೆಂಪು ಅವರು ಈ ಸಮಾಜಕ್ಕೆ ನೀಡಿದ್ದಾರೆ ಎಂದರು.

ವಾರ್ತಾ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕುವೆಂಪು ಅವರು ಬರಿ ವ್ಯಕ್ತಿಯಲ್ಲ, ಅವರು ಒಂದು ಶಕ್ತಿ ಇದ್ದಂತೆ. ನಮ್ಮದು ಮನುಜಮತವಾಗಬೇಕು. ವಿಶ್ವಪಥವಾಗಬೇಕು. ಮನುಷ್ಯ ವಿಶ್ವಮಾನವನಾಗಬೇಕು ಎನ್ನುವ ಅವರ ಸಂದೇಶ ನಿಜಕ್ಕೂ ಮಹತ್ವದ್ದು. ಇದನ್ನು ಪ್ರತಿಯೊಬ್ಬರು ಅರಿಯುವಂತಾಗಬೇಕು ಎಂದು ಹೇಳಿದರು.

ಇದೇ ವೇಳೆ ಭಾಲ್ಕಿಯ ವೀರಣ್ಣ ಅವರು ಕುವೆಂಪು ಅವರ ಪದ್ಯ ಹಾಡಿದರು. ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ, ಸಾಕ್ಷರತಾ ತಾಲೂಕು ಸಂಯೋಜನಾಧಿಕಾರಿ ವೆಂಕಟರಾವ್‌ ಬಿ. ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕಾಧ್ಯಕ್ಷ ಎಸ್‌.ಬಿ.ಕುಚಬಾಳ ಇದ್ದರು.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.