ಕಳ್ಳತನ; ಆರೋಪಿ ಸೆರೆ-ಚಿನ್ನಾಭರಣ ಜಪ್ತಿ
Team Udayavani, Jul 27, 2022, 5:48 PM IST
ಮುದಗಲ್ಲ: ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಠಾಣೆ ಸೇರಿದಂತೆ ಮುದಗಲ್ಲ ಠಾಣೆ ವ್ಯಾಪ್ತಿಯ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುದಗಲ್ಲ ಪೊಲೀಸರು 2.45 ಲಕ್ಷ ರೂ. ಮೌಲ್ಯದ ಬೆಳ್ಳಿ ಮತ್ತು ಬಂಗಾರದ ಆಭರಣ ವಶಪಡಿಸಿಕೊಂಡಿದ್ದಾರೆ ಎಂದು ಲಿಂಗಸುಗೂರು ಡಿವೈಎಸ್ಪಿ ಎಸ್. ಮಂಜುನಾಥ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತೀಚೆಗೆ ಮುದಗಲ್ಲ ಠಾಣೆ ವ್ಯಾಪ್ತಿಯಲ್ಲಿ 2 ಕಳ್ಳತನ ಪ್ರಕರಣಗಳು ಜರುಗಿದ್ದವು. ಅದಕ್ಕೆ ಸಂಬಂಧಿಸಿದಂತೆ ಎಸ್ಪಿ ನಿಖೀಲ್ ಬಿ. ವಿಶೇಷ ತಂಡ ರಚಿಸಿದ್ದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಕಮಾರ, ಡಿವೈಎಸ್ಪಿ ಲಿಂಗಸುಗೂರ, ಮಸ್ಕಿ ಸಿಪಿಐ ಸಂಜೀವ ಬಳಿಗಾರ ಮಾರ್ಗದರ್ಶನದಲ್ಲಿ ಮುದಗಲ್ಲ ಠಾಣೆ ಪಿಎಸೈ ಪ್ರಕಾಶರಡ್ಡಿ ಡಂಬಳ ಹಾಗೂ ಸಿಬ್ಬಂದಿಗಳಾದ ಶರಣರಡ್ಡಿ, ಮಂಜುನಾಥ, ಅಮರೇಶ, ಶಿವನಗೌಡ, ಕೃಷ್ಣ, ಅಡಿವೆಪ್ಪ, ಹನುಮಂತ ತಂಡವು ಕಳ್ಳರನ್ನು ಬಂಧಿಸಿದೆ ಎಂದರು.
ಕದೀಮರನ್ನು ತನಿಖೆಗೊಳಪಡಿಸಿ ಇಳಕಲ್ಲ ಠಾಣೆ ವ್ಯಾಪ್ತಿಯಲ್ಲಿ ಒಂದು ಮತ್ತು ಮುದಗಲ್ಲ ಠಾಣೆ ವ್ಯಾಪ್ತಿಯ ನಾಗರಾಳ ಗ್ರಾಮದ ಬಸವರಾಜ ಬಿರಾದಾರ, ನಾಗಲಾಪುರ ಗ್ರಾಮದ ಹನುಮಪ್ಪ ಪೂಜಾರಿ ಎಂಬವರ ಮನೆಯಲ್ಲಿ ಕಳ್ಳತನ ಮಾಡಿರುವುದನ್ನು ಆರೋಪಿತರಾದ ಇಳಕಲ್ಲ ಮೂಲದ ಆಲಂಪೂರ ಪೇಟೆಯ ನಾಗರಾಜ ಆಂಜನೇಯ್ಯ ಕಲ್ಲುಗುಡಿ ಕುಂಚಿ ಕೊರವರ ಮತ್ತು ಇನ್ನೋರ್ವ ಆರೋಪಿ ಬಾಲಪರಾಧಿಯಾಗಿದ್ದು, ಅವರನ್ನು ಪ್ರತ್ಯೇಕವಾಗಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದರು.
ಈ ವೇಳೆ ಮಸ್ಕಿ ಸಿಪಿಐ ಸಂಜೀವ ಬಳಿಗಾರ, ಮುದಗಲ್ಲ ಪಿಎಸೈ ಪ್ರಕಾಶ ರಡ್ಡಿ ಡಂಬಳ, ಎಎಸೈ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.