ಶೌಚಾಲಯ ನಿರ್ಮಾಣ ಸಮರ್ಪಕವಾಗಿರಲಿ
Team Udayavani, Sep 30, 2018, 1:02 PM IST
ಬೀದರ: ಶೌಚಾಲಯ ನಿರ್ಮಾಣ ಸಮರ್ಪಕವಾಗಿ ನಡೆಯಬೇಕಿದ್ದು, ಬಳಕೆ ವಿಷಯದಲ್ಲೂ ಜಾಗೃತಿ ಮೂಡಿಸಬೇಕು. ಪರಿಸರ ನೈರ್ಮಲ್ಯ ಕುರಿತು ಜನರಲ್ಲಿ ತಿಳಿವಳಿಕೆ ಮೂಡಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಇದಕ್ಕೆ ಗ್ರಾಮಸ್ಥರು ಕೂಡ ಸಹಕಾರ ನೀಡಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಂಡೆಪ್ಪ ಖಾಶೆಂಪೂರ ಅಧಿಕಾರಿಗಳಿಗೆ ಸೂಚಿಸಿದರು.
ಬಗದಲ್ ಗ್ರಾಮದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಗ್ರಾಮಸ್ಥರ ಅಹವಾಲು ಆಲಿಸಿ ಮಾತನಾಡಿದ ಸಚಿವರು, ಬಗದಲ್ ಗ್ರಾಮದ ಸರ್ವಾಂಗೀಣ ವಿಕಾಸಕ್ಕಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗ್ರಾಮ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ರಸ್ತೆ, ಕುಡಿಯುವ ನೀರು, ಚರಂಡಿ ಮುಂತಾದ ಬೇಡಿಕೆಗಳನ್ನು ಜನರು ಮುಂದಿಟ್ಟಿದ್ದಾರೆ. ಬೇಡಿಕೆ ಬಂದಿರುವ ಬಡಾವಣೆಗಳಲ್ಲಷ್ಟೇ ಕಾಮಗಾರಿ ಕೈಗೊಳ್ಳುವ ಬದಲು ಇಡೀ ಗ್ರಾಮದಲ್ಲಿ ಪರಿಶೀಲನೆ ನಡೆಸಿ ಪ್ರಗತಿ ಕಾರ್ಯ, ಮೂಲ ಸೌಕರ್ಯ ಕಲ್ಪಿಸುವ ಕಾರ್ಯ ಮಾಡುವುದಾಗಿ ಭರವಸೆ ನೀಡಿದರು.
ಗ್ರಾಮದಲ್ಲಿ ಶೌಚಾಲಯ ನಿರ್ಮಾಣ ಸಮರ್ಪಕವಾಗಿ ನಡೆಯುತ್ತಿಲ್ಲ. ಕೆಲವೆಡೆ ಸೆಪ್ಟಿಕ್ ಟ್ಯಾಂಕ್ ನಿರ್ಮಿಸಲಾಗಿಲ್ಲ ಎಂದು ಗ್ರಾಮಸ್ಥರು ಸಚಿವರ ಎದುರಿಗೆ ದೂರಿದರು. ಈ ಕುರಿತು ಪರಿಶೀಲನೆ ನಡೆಸುವಂತೆ ಸ್ಥಳದಲ್ಲಿದ್ದ ತಾಲೂಕು
ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಧನರಾಜ್ ಬೋರಾಳೆ ಅವರಿಗೆ ನಿರ್ದೇಶನ ನೀಡಿದರು.
ಗ್ರಾಮದಲ್ಲಿನ ಚರ್ಚ್‌ನಿಂದ ಬಸ್ ನಿಲ್ದಾಣದವರೆಗೆ ಸಿಸಿ ರಸ್ತೆ, ಚರಂಡಿ ನಿರ್ಮಿಸಬೇಕು ಎಂದು ಬಡಾವಣೆ ನಿವಾಸಿಗಳು ಒತ್ತಾಯಿಸಿದರು. ಹನುಮಾನ ಮಂದಿರ ಬಳಿಯ ರಸ್ತೆಯಲ್ಲಿ ನೀರು ಸಂಗ್ರಹಗೊಂಡು ಓಡಾಡಲು ತೊಂದರೆಯಾಗುತ್ತಿದೆ.
ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಬೇಕು. ಚರಂಡಿ ಸಹಿತ ರಸ್ತೆ ನಿರ್ಮಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದಕ್ಕಾಗಿ ಸೂಕ್ತ ಯೋಜನೆ ರೂಪಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಸ್ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳು ಸಚಿವರಿಗೆ ಒತ್ತಾಯಿಸಿದರು. ಬೆಳಗ್ಗೆ ಮತ್ತು ಮಧ್ಯಾಹ್ನ ಬಸ್ ಸೌಲಭ್ಯ ಇಲ್ಲ. ಮಧ್ಯಾಹ್ನ 2ಕ್ಕೆ ಕಾಲೇಜು ಬಿಡುತ್ತದೆ. ಆದರೆ, 4 ಗಂಟೆ ವರೆಗೆ ವಿದ್ಯಾರ್ಥಿನಿಯರು ಬೀದರ್ ಬಸ್ ನಿಲ್ದಾಣದಲ್ಲಿ
ಕಾಯುತ್ತ ಕೂಡುವ ಕಷ್ಟದ ಸ್ಥಿತಿ ಇದೆ ಎಂದು ದೂರಿದರು. ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದ ಸಚಿವರು ಈ ಕುರಿತು ಬಸ್ ವ್ಯವಸ್ಥಾಕರಿಗೆ ಸೂಚಿಸಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸುವುದಾಗಿ ತಿಳಿಸಿದರು.
ಇದಕ್ಕೂ ಮುನ್ನ ಸಚಿವ ಬಂಡೆಪ್ಪ ಖಾಶೆಂಪೂರ ಬಗದಲ್ ಗ್ರಾಮದ ದರ್ಗಾಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಗ್ರಾಮದಲ್ಲಿನ ಸದ್ಗುರು ಶ್ರೀಪತಾನಂದ ಆತ್ಮಾನಂದ ಮಹಾರಾಜ ಸಂಸ್ಥಾನಕ್ಕೂ ಭೇಟಿ ನೀಡಿ ದರ್ಶನ ಪಡೆದರು. ಸಂಸ್ಥಾನದ ಪೀಠಾಧಿಪತಿ ಶ್ರೀಪತಾನಂದ ಮಹಾರಾಜರು ಶಾಲು ಹೊದಿಸಿ ಸನ್ಮಾನಿಸಿದರು.
ಜಿಲ್ಲಾ ಪಂಚಾಯತ ಸದಸ್ಯ ಆಫ್ರೋಜಾಖಾನ್, ತಾಲೂಕು ಪಂಚಾಯಿತಿ ಅಧ್ಯಕ್ಷ ವಿಜಯಕುಮಾರ ರಾಮುಲು, ಸದಸ್ಯೆ ಲಲಿತಾಬಾಯಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿಶೋರಕುಮಾರ ದುಬೆ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.