ಕುಸಿದ ಬೆಲೆ; ರೈತರ ಚಿತ್ತ ಹೋರಾಟದತ್ತ

Team Udayavani, Dec 30, 2021, 9:28 PM IST

ಬಹಗ್ದ

ಸಿಂಧನೂರು: ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬೆಲೆಗಿಂತಲೂ ಕಡಿಮೆ ಬೆಲೆಗೆ ಜೋಳ ಕೇಳುತ್ತಿರುವುದರಿಂದ ನೊಂದ ರೈತರು ಕೊನೆಗೂ ಹೋರಾಟದ ಮಾರ್ಗ ತುಳಿದಿದ್ದಾರೆ. 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ನಿಗದಿಪಡಿಸಿದ ಪ್ರತಿ ಎಕರೆಗೆ 20 ಕ್ವಿಂಟಲ್‌ ಜೋಳ ಖರೀದಿ ಎಂಬ ಷರತ್ತು ತೆಗೆಯುವಂತೆ ಆಡಳಿತದ ವರ್ಗದ ದುಂಬಾಲು ಬಿದ್ದಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಸದುಪಯೋಗ ಪಡೆದಿದ್ದ ರೈತರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ವರ್ಷ ರೈತರ ಖಾತೆಗಳಿಗೆ 110 ಕೋಟಿ ರೂ. ಮೊತ್ತ ಜಮೆಯಾಗಿತ್ತು. ಮುಕ್ತ ಮಾರುಕಟ್ಟೆಯ ಬದಲು ಸರ್ಕಾರದಿಂದಲೇ ತೆಗೆದ ಖರೀದಿ ಕೇಂದ್ರಕ್ಕೆ ಜೋಳ ಮಾರಾಟ ಮಾಡಿ, ಹಣ ವಿಳಂಬವಾದರೂ ಉತ್ತಮ ಬೆಲೆಗಾಗಿ ಸಹಿಸಿಕೊಂಡಿದ್ದರು.

ಈ ವರ್ಷ ಮಾರುಕಟ್ಟೆಯಲ್ಲಿ ಕ್ವಿಂಟಲ್‌ಗೆ 1,200 ರೂ. ಕುಸಿತವಾದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟಕ್ಕೆ ಮುಂದಾಗಿದ್ದಾರೆ. ರೈತ ನಿಯೋಗ: ಬೂದಿಹಾಳ ವಿಎಸ್‌ಎಸ್‌ ಎನ್‌ ಅಧ್ಯಕ್ಷ ಮಲ್ಲಯ್ಯ ಮಾಡಸಿರವಾರ, ರೈತ ಮುಖಂಡ ಶ್ರೀನಿವಾಸ್‌ ಗೋಮರ್ಸಿ, ಬಸವರಾಜಗೌಡ ಮಾಡಸಿರವಾರ, ಮೌಲಾಸಾಬ್‌, ವೀರೇಶ, ಮಾತಾಂಗಪ್ಪ, ಸಿದ್ದಪ್ಪ, ಗ್ರಾಪಂ ಸದಸ್ಯ ನಿರುಪಾದೆಪ್ಪ ನೇತೃತ್ವದ ನಿಯೋಗ ಬುಧವಾರ ತಹಶೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದೆ. ಮಾರುಕಟ್ಟೆಯಲ್ಲಿ 1,400ರಿಂದ 1,600 ರೂ.ಗೆ ಕೇಳುತ್ತಿದ್ದಾರೆ. ಬೆಂಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್‌ಗೆ 2,738 ರೂ. ದರವಿದೆ. ಪ್ರತಿ ಕ್ವಿಂಟಲ್‌ಗೆ 1,300 ರೂ.ಗಿಂತಲೂ ಕಡಿಮೆ ದರಕ್ಕೆ ಜೋಳ ಕೇಳುತ್ತಿರುವುದರಿಂದ ರೈತರ ನೆರವಿಗೆ ಧಾವಿಸುವಂತೆ ಸರ್ಕಾರದ ಮೊರೆ ಇಟ್ಟಿದ್ದಾರೆ.

ದಿನದಿಂದ ದಿನಕ್ಕೆ ಬೆಲೆ ಕುಸಿತ: ಬೆಂಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆದಾಗ ಮಾರುಕಟ್ಟೆಯಲ್ಲಿ ಬೆಲೆ ಜಿಗಿತ ಸಾಮಾನ್ಯ. ಜೋಳದ ವಿಷಯಕ್ಕೆ ಬಂದಾಗ ಕಳೆದ 10 ದಿನಗಳಿಂದಲೂ ಬೆಲೆ ಕುಸಿತದ ಹಾದಿ ಹಿಡಿದಿದ್ದು, ಇದು ರೈತರನ್ನು ಕಂಗೆಡಿಸಿದೆ. 1,600ರಿಂದ 1,700 ರೂ. ಇದ್ದ ಬೆಲೆ ಕೂಡ 500 ರೂ. ತಗ್ಗಿಸಲಾಗಿದೆ. ಜೋಳ ಕೊಯ್ಲು ಮಾಡಿ ಬೆಲೆ ನಿರೀಕ್ಷೆಯಲ್ಲಿದ್ದ ರೈತರು ಮಾರುಕಟ್ಟೆ ಸ್ಥಿತಿ ಕಂಡು ಆಕ್ರೋಶಭರಿತರಾಗಿದ್ದು, ಈಗಾಗಲೇ ಜನಪ್ರತಿನಿಧಿ ಗಳ ದುಂಬಾಲು ಬಿದ್ದಿದ್ದಾರೆ. ಮುಂದುವರಿದ ಭಾಗವಾಗಿ ಸರ್ಕಾರದ ಗಮನ ಸೆಳೆಯಲು ಹೋರಾಟಕ್ಕೆ ಮುಂದಾಗಿದ್ದಾರೆ. ರೈತರು ತಾಲೂಕು ಆಡಳಿತಕ್ಕೆ ಆಗಮಿಸಲಾರಂಭಿಸಿದ್ದು, ಈ ಬಗ್ಗೆ ಸರ್ಕಾರದ ಗಮನ ಸೆಳೆಯುವಂತೆ ತಾಲೂಕು ದಂಡಾಧಿ  ಕಾರಿಯನ್ನು ಒತ್ತಾಯಿಸುತ್ತಿದ್ದಾರೆ. ಮನವಿ ಸ್ವೀಕರಿಸಿದ ಅ ಧಿಕಾರಿಗಳು ರಾಜ್ಯ ಸರ್ಕಾರಕ್ಕೆ ರವಾನೆ ಮಾಡುವುದಾಗಿ ಹೇಳುತ್ತಿದ್ದು, ಜಿಲ್ಲಾ ಧಿಕಾರಿಗೆ ವರದಿ ಒಪ್ಪಿಸುತ್ತಿದ್ದಾರೆ

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.