ಕ್ಷಯರೋಗ ಪತ್ತೆ ಆಂದೋಲನ


Team Udayavani, Nov 19, 2019, 12:39 PM IST

bidar-tdy-2

ಬೀದರ: ಜಿಲ್ಲೆಯಲ್ಲಿ ನ. 25ರಿಂದ ಡಿ.10ರ ವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮ ನಿಮಿತ್ತ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಯಿತು.

ಈ ವೇಳೆ ಸಿಇಒ ಅವರು ಮಾತನಾಡಿ, ಹೆಚ್ಚು ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇರುವುದರಿಂದ ಇವರ ಮಾಹಿತಿ ಪಡೆಯಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಶಿಕ್ಷಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ತಾಲೂಕು, ಹೋಬಳಿ ಮತ್ತು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ಅಭಿಯಾನದಲ್ಲಿ ಜಿಲ್ಲೆಯ 410010 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದಕ್ಕಾಗಿ 607 ತಂಡಗಳು ರಚಿಸಲಾಗಿದ್ದು, 1,214 ಸದಸ್ಯರ ಅವಶ್ಯಕತೆಯಿದೆ. 366 ಮೇಲ್ವಿಚಾರಕರು, 685 ಆಶಾ ಕಾರ್ಯಕರ್ತೆಯರು, 250 ಸ್ವಯಂ ಸೇವಕರು ಭಾಗವಹಿಸುವರು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ|ದೀಪಾ ಖಂಡ್ರೆ ಮಾತನಾಡಿ, ಕ್ಷಯರೋಗವು ಮೈಕ್ರೋಬ್ಯಾಕ್ಟಿರಿಯಂ ಟ್ಯೂಬರಕ್ಯುಲೋಸಿಸ್‌ಎಂಬ ರೋಗಾಣುವಿನಿಂದ ಬರುತ್ತದೆ. ಸೋಂಕಿತ ವ್ಯಕ್ತಿ ಸೀನುವುದು ಮತ್ತು ಕೆಮ್ಮಿದಾಗ ಹೊರಬರುವ ರೋಗಾಣುಗಳು ಗಾಳಿಯಲ್ಲಿ ಸೇರಿಕೊಂಡು ಒಬ್ಬರಿಂದೊಬ್ಬರಿಗೆ ಹರಡುತ್ತವೆ. ಈ ಕಾಯಿಲೆಗೆ ಹೆದರಬೇಕಾಗಿಲ್ಲ. ರೋಗ ಪೀಡಿತರು ಕಾಯಿಲೆಯನ್ನು ಗುಪ್ತವಾಗಿಡದೇ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆರು, ಹಾಗೂ ಸ್ವಯಂ ಸೇವಕರ ಗಮನಕ್ಕೆ ತಂದು ಪ್ರಾರಂಭಿಕ ಹಂತದಲ್ಲೆ ಪತ್ತೆ ಹಚಿದಲ್ಲಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸ ಬಹುದಾಗಿದೆ. ಯಾವುದೇ ವ್ಯಕ್ತಿ ಕ್ಷಯರೋಗದಿಂದ ಬಳಲುತ್ತಿದ್ದಲ್ಲಿ ಅವರನ್ನು ಗುಣಪಡಿಸಲು ಸಹಕರಿಸುವ ವಾತಾವರಣ ನಿರ್ಮಿಸಬೇಕಿದೆ ಎಂದು ಹೇಳಿದರು.

ಬ್ರಿಮ್ಸ್‌ ವೈದ್ಯಕೀಯ ಆಸ್ಪತ್ರೆಯ ಡಾ| ಮಹೇಶ ತೊಂಡಾರೆ ಅವರು ಕ್ಷಯರೋಗದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ|ಇಂದುಮತಿ ಪಾಟೀಲ, ಡಾ|ರವೀಂದ್ರ ಸಿರಸಗೆ, ಡಾ|ರಾಜಶೇಖರ ಪಾಟೀಲ, ಡಾ| ಕೃಷ್ಣಾ ರೆಡ್ಡಿ, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ|ಶರಣಯ್ಯ ಸ್ವಾಮಿ, ಡಾ| ಶಿವಕುಮಾರ ಸಿದ್ದೇಶ್ವರ, ಡಾ|ಶರಣಪ್ಪಾ ಮುಡಬಿ, ಡಾ|ವೈಜಿನಾಥ ತುಗಾಂವೆ, ಗೌತಮ ಜ್ಯೋತಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

IFFI: ಪಾಪ್‌ ಸಂಗೀತಗಾರ ರಾಬಿ ವಿಲಿಯಮ್ಸ್‌ ಬೆಟರ್‌ ಮ್ಯಾನ್‌ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

crimebb

Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Arrest

Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ

ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.