![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 5, 2022, 3:05 PM IST
ಬೀದರ: ದೆಹಲಿಯಲ್ಲಿ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ಅವರ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಗೊಂಡ ಸಮಾಜದ ಮುಖಂಡರ ನಿಯೋಗ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿ, ಕುರುಬ ಸಮುದಾಯದವರನ್ನು ಎಸ್. ಟಿ ಗೊಂಡ ಪರ್ಯಾಯ ಪದವೆಂದು ಪರಿಗಣಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಮನವಿ ಮಾಡಿತು.
ನಮ್ಮ ಭಾಗದಲ್ಲಿರುವ ಕುರುಬ ಸಮಾಜದವರು ಎಸ್.ಟಿ. ಗೊಂಡ ಪರ್ಯಾಯ ಪದಕ್ಕೆ ಸೇರದಿರುವುದರಿಂದ ಹಾಗೂ ಉದ್ಯೋಗ ಮತ್ತು ಶಿಕ್ಷಣ ಪಡೆಯುವ ಸಂದರ್ಭಗಳಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಎಸ್.ಟಿ. ಗೊಂಡ ಹಾಗೂ ಕುರುಬ ಜನಾಂಗದಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ. ಈ ನಿಟ್ಟಿನಲ್ಲಿ ತಾವುಗಳು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ಕುರುಬ ಜನಾಂಗಕ್ಕೆ ಸೇರಿರುವ ಜನರನ್ನು ಎಸ್.ಟಿ. ಗೊಂಡ ಪರ್ಯಾಯ ಪದದಲ್ಲಿ ಸೇರ್ಪಡೆಗೊಳಿಸಬೇಕೆಂದು ಖೂಬಾ ಅವರು ಸಚಿವ ಅರ್ಜುನ ಮುಂಡಾ ಅವರಿಗೆ ಮನವರಿಕೆ ಮಾಡಿಕೊಟ್ಟರು.
ಶಾಸಕ ಬಂಡೆಪ್ಪ ಕಾಶೆಂಪುರ್, ಎಂಎಲ್‌ಸಿ ರಘುನಾಥರಾವ್ ಮಲ್ಕಾಪುರೆ, ಗೊಂಡ ಸಮುದಾಯದ ಪ್ರಮುಖರಾದ ಅಮೃತರಾವ ಚಿಮಕೊಡೆ, ಮಹಾಂತೇಶ ಕೌವಲಗಿ, ಬಸವರಾಜ ಮಾಳಗೆ, ಧರ್ಮಣ ದೊಡ್ಡಮನಿ, ಪಂಡಿತ ಚಿದ್ರಿ ಮತ್ತು ಎಂ.ಎಸ್ ಕಟಗಿ ಇತರರಿದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.