ಭಾಲ್ಕಿಯಲ್ಲಿ ವಚನ ಕ್ರಾಂತಿಯ ಪುನರುತ್ಥಾನ ವಿಚಾರ ಸಂಕಿರಣ
Team Udayavani, Feb 26, 2018, 12:29 PM IST
ಭಾಲ್ಕಿ: ವಿಶ್ವದ ಸಕಲ ಜೀವಾತ್ಮರ ಲೇಸಿಗಾಗಿ ಬಸವಾದಿ ಶರಣರು ನೀಡಿದ ವಚನ ಸಾಹಿತ್ಯ ವಿಶಿಷ್ಟ ಕೊಡುಗೆಯಾಗಿದೆ ಎಂದು ಡಾ| ವೈ.ವೇ. ದೇವರುಷಿ ಹೇಳಿದರು. ಪಟ್ಟಣದ ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯ ಶ್ರೀ ಚನ್ನಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ವಚನ ಕ್ರಾಂತಿಯ ಪುನರುತ್ಥಾನ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ದುಡಿಯುವ ಜನರೇ ವಚನ ಸಾಹಿತ್ಯದ ಉದಯಕ್ಕೆ ಕಾರಣರಾಗಿದ್ದಾರೆ. 12ನೇ ಶತಮಾನದಲ್ಲಿ ಉದಯವಾದ ವಚನ ಸಾಹಿತ್ಯದ ಅಧ್ಯಯನ ಅನುಷ್ಠಾನ ಇಂದಿನ ದಿನಮಾನಗಳಿಗೆ ಬಹು ಅವಶ್ಯಕವಾಗಿದೆ ಎಂದು ಹೇಳಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೊ| ಶಂಭುಲಿಂಗ ಕಾಮಣ್ಣ ಮಾತನಾಡಿ, ವಚನ ಸಾಹಿತ್ಯ ಸರ್ವರ ಹಿತವನ್ನು ಬಯಸುವ ಸಾಹಿತ್ಯವಾಗಿದೆ.
ವ್ಯಕ್ತಿ ಮತ್ತು ಸಮಾಜ ಎರಡನ್ನೂ ಎತ್ತರಕ್ಕೆ ಕೊಂಡೊಯ್ಯುವ ಮೌಲಿಕ ವಿಚಾರ ಇಲ್ಲಿವೆ ಎಂದು ಹೇಳಿದರು. ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಪ್ರೊ| ವಿ.ಎಸ್. ಕಟ್ಟಿಮನಿ ಉದ್ಘಾಟಿಸಿದರು. ಸರಸ್ವತಿ ಸ್ವಾಮಿ ವಚನಗಾಯನ ಮಾಡಿದರು. ಪ್ರಾಚಾರ್ಯ ಪ್ರೊ| ಎಸ್.ಎಸ್. ರಾಂಪುರೆ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕ ಪ್ರೊ| ಚಂದ್ರಶೇಖರ ಬಿರಾದಾರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.