ಭತ್ತದ ಬೆಳೆ ಹಾನಿ ಪರಿಶೀಲಿಸಿದ ಶಾಸಕ ಮುದ್ನಾಳ
Team Udayavani, Apr 23, 2020, 4:38 PM IST
ವಡಗೇರಾ: ಮುನಮುಟಗಿ ಗ್ರಾಮದಲ್ಲಿ ಹಾನಿಯಾದ ಭತ್ತದ ಬೆಳೆಯನ್ನು ಶಾಸಕ ವೆಂಕಟರಡ್ಡಿ ಮುದ್ನಾಳ ಪರಿಶೀಲಿಸಿದರು.
ವಡಗೇರಾ: ಕಳೆದೆರಡು ದಿನಗಳ ಹಿಂದೆ ಬೀಸಿದ ಬಿರುಗಾಳಿಗೆ ಬೆಳೆ ಹಾನಿ ಅನುಭವಿಸಿದ ಎಲ್ಲ ರೈತರಿಗೂ ಸರಕಾರದಿಂದ ಸೂಕ್ತ ಪರಿಹಾರ ಕೊಡಿಸಲಾಗುವುದು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಭರವಸೆ ನೀಡಿದರು.
ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮುನಮುಟಗಿ, ಬಸವಂತಪುರ, ಮದರಕಲ್, ಗ್ರಾಮಗಳಿಗೆ ಕೃಷಿ ಮತ್ತು ಕಂದಾಯ ಅಧಿಕಾರಿಗಳೊಂದಿಗೆ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಣೆ ಮಾಡಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆಯಷ್ಟೇ ನೂರಾರು ಎಕರೆ ಪ್ರದೇಶ ಬೆಳೆ ಆಲೆಕಲ್ಲು ಮಳೆಗೆ ಹಾನಿಯಾಗಿದೆ. ಇದೀಗ ಮತ್ತೆ ರೈತರು ಪ್ರಕೃತಿ ಮುನಿಸಿನಿಂದ ಹಾನಿ ಅನುಭವಿಸುವಂತಾಗಿದೆ. ಅಂದಾಜು 65 ಎಕರೆ ಭತ್ತದ ಬೆಳೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಸಂಪೂರ್ಣ ವರದಿ ಪಡೆದು ಸರ್ಕಾರದಿಂದ ಬೆಳೆ ನಷ್ಟ ಪರಿಹಾರ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಶ್ರೀನಿವಾಸರೆಡ್ಡಿ ಚನ್ನೂರು, ಮಲ್ಲನಗೌಡ ಪಾಟೀಲ ಹತ್ತಿಕುಣಿ, ಶರಣಗೌಡ ಬಾಡಿಯಾಳ, ಖಂಡಪ್ಪ ದಾಸನ, ಶಹಾಪುರ ತಹಶೀಲ್ದಾರ್ ಜಗನ್ನಾಥರೆಡ್ಡಿ, ಶಹಾಪುರ ಕೃಷಿ ಅಧಿಕಾರಿ ಗೌತಮ, ಕಂದಾಯ ನಿರೀಕ್ಷಕ ಬಸಯ್ಯ ಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.