ಇಂದು ನಾಲ್ಕು ಕಡೆ ಸಿಎಂ ಪ್ರಚಾರ ಸಭೆ
Team Udayavani, Apr 12, 2021, 7:51 PM IST
ಬಸವಕಲ್ಯಾಣ : ಕಾಂಗ್ರೆಸ್ ಸ್ವಂತ ಬಲದ ಮೇಲೆ ಗೆಲ್ಲಲಿಕ್ಕಾಗುವುದಿಲ್ಲ ಎಂದು ತಿಳಿದುಕೊಂಡು ಪಕ್ಷೇತರ ಅಭ್ಯರ್ಥಿ ನಿಲ್ಲಿಸಿ ತನು-ಮನದಿಂದ ಸಹಾಯ ಮಾಡುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟೀಕಿಸಿದರು. ಕ್ಷೇತ್ರದ ಮುಡಬಿಯಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡೆಸುವ ಚುನಾವಣಾ ಪ್ರಚಾರದ ಬಹಿರಂಗ ಸಭೆಯ ಸಿದ್ಧತೆ ಅವಲೋಕಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ನಾಲ್ಕು ಕಡೆ ಬಹಿರಂಗ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿ ಅಭ್ಯರ್ಥಿ ಶರಣು ಸಲಗರ ಪರ ಮತಯಾಚಿಸುವರು. ಬಿಜೆಪಿ ಸರ್ವ ವರ್ಗದವರ ಮತ ಪಡೆಯಲಿದ್ದು, ಕ್ಷೇತ್ರದ ಮಾಜಿ ಶಾಸಕ ಹಾಗೂ ಪಕ್ಷೇತರ ಅಭ್ಯರ್ಥಿ ಕಾಂಗ್ರೆಸ್ ನ ಬಿ ಟೀಮ್‌ವಾಗಿದೆ. ಪಕ್ಷೇತರ ಅಭ್ಯರ್ಥಿಗೆ ಮತ ಹಾಕಿದರೆ ಕಾಂಗ್ರೆಸ್ ಗೆ ಹಾಕಿದಂತೆ ಎಂಬುದನ್ನು ಜನರು ತಿಳಿದುಕೊಂಡಿದ್ದಾರೆ.
ಬಸವಕಲ್ಯಾಣ ಸಮಗ್ರ ಅಭಿವೃದ್ಧಿಯಾಗಬೇಕೆಂದರೆ ಬಿಜೆಪಿಗೆ ಮತ ಎಂಬುದನ್ನು ಸರ್ವ ವರ್ಗದ ಮತದಾರರು ನಿಶ್ಚಯಿಸಿದ್ದಾರೆ. ಹೀಗಾಗಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಸವಕಲ್ಯಾಣ ಅಭಿವೃದ್ಧಿ ಎಂಬುದು ನಿಂತ ನೀರಾಗಿದೆ. ಬಿಜೆಪಿ ಗೆದ್ದ ನಂತರ ಅಭಿವೃದ್ಧಿ ಪರ್ವ ಶುರುವಾಗಲಿದೆ. ಅನುಭವ ಮಂಟಪಕ್ಕೆ ಅಡಿಗಲ್ಲು ಹಾಕಿರುವುದು ಅಭಿವೃದ್ಧಿ ವೇಗಕ್ಕೆ ದಿಕ್ಸೂಚಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಭಗವಂತ ಖೂಬಾ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಜಿಪಂ ಮಾಜಿ ಸದಸ್ಯ ಚಂದ್ರಶೇಖರ ಪಾಟೀಲ್, ಮುಖಂಡ ಸಿದ್ದು ಪಾಟೀಲ್, ರೇವಣಸಿದ್ದಪ್ಪ ಸಂಕಾಲಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Robbery: ಬೀದರ್ ದರೋಡೆ ಬಿಹಾರಿ ಗ್ಯಾಂಗ್ ಕೃತ್ಯ: ಪೊಲೀಸರು
Air Balloon: ಹೈದರಾಬಾದ್‌ನಲ್ಲಿ ಹಾರಿಸಿದ ‘ಏರ್ ಬಲೂನ್’ ಹುಮನಾಬಾದ್ ನಲ್ಲಿ ಬಿತ್ತು…
ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರದಿಂದ ಅಸಹಕಾರ: ಎಚ್.ಡಿ.ಕುಮಾರಸ್ವಾಮಿ
Bidar ದರೋಡೆ ಕೇಸ್: ಆರೋಪಿಗಳ ಗುರುತು ಪತ್ತೆ, ಶೀಘ್ರ ಬಂಧನ: ಎಡಿಜಿಪಿ ಹರಿಶೇಖರನ್
Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.