ಅಲ್ಪಸಂಖ್ಯಾತರು ‘ಕೈ’ ಜಾರದಂತೆ ಜಮೀರ್‌ ‘ಅಸ್ತ್ರ’ |

ಮಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದ ದಳ |ಜೆಡಿಎಸ್‌ ವಿರುದ್ಧ "ಕೈ' ಪ್ರತಿತಂತ್ರ |ಜಮೀರ್‌ ಹೆಗಲಿಗೆ ಪ್ರಚಾರ ಹೊಣೆ

Team Udayavani, Mar 27, 2021, 8:27 PM IST

zmeer

ಬೀದರ: ಬಸವಕಲ್ಯಾಣ ಉಪ ಕದನಕ್ಕೆ ಯಸ್ರಬ್‌ ಅಲಿ ಖಾದ್ರಿ ಅವರನ್ನು ಕಣಕ್ಕಿಳಿಸುವ ಮೂಲಕ ಮುಸ್ಲಿಂ ಸಮುದಾಯದ ಮತ ಸೆಳೆಯುವ ಜೆಡಿಎಸ್‌ನ ತಂತ್ರಗಾರಿಕೆ ವಿಫಲಗೊಳಿಸಲು ಕಾಂಗ್ರೆಸ್‌ ಕೂಡ ಮೆಗಾ ಪ್ಲಾನ್‌ ಮಾಡಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಶಿಷ್ಯ, ಮಾಜಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಕ್ಷೇತ್ರದ ಹೊಣೆ ಹೊರಿಸಿ ಸಾಂಪ್ರದಾಯಿಕ ಮತಗಳು ಚದುರದಂತೆ ಕಾರ್ಯತಂತ್ರ ರೂಪಿಸುತ್ತಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಮುಸ್ಲಿಮರದ್ದು ಎರಡನೇ ಅತಿ ದೊಡ್ಡ ಸಮುದಾಯ. ಇಲ್ಲಿ ಬಹುಸಂಖ್ಯಾತರಾಗಿ ಗುರುತಿಸಿಕೊಂಡಿರುವ ಮುಸ್ಲಿಂ ಮತಗಳು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಹಾಗಾಗಿ ಎಲ್ಲರ ಕಣ್ಣು ಆ ಮತಗಳ ಮೇಲೆಯೇ ಇವೆ.

ಕಲ್ಯಾಣ ಉಪ ಕದನ ಪ್ರತಿಷ್ಠೆಯಾಗಿ ಪಡೆದಿರುವ ಜನತಾ ದಳ ಕಾಂಗ್ರೆಸ್‌ ನಲ್ಲಿದ್ದ ಮುಸ್ಲಿಂ ಸಮುದಾಯದ ಮುಖಂಡ ಖಾದ್ರಿ ಅವರಿಗೆ ಗಾಳ ಹಾಕಿ, ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕೈ ಪಡೆಯಲ್ಲಿ ತಳಮಳಕ್ಕೆ ಕಾರಣವಾಗಿವೆ. ಈಗ ಚುನಾವಣಾ ಕಣ ರಂಗೇರುತ್ತಿದ್ದಂತೆ ಎಚ್ಚೆತ್ತಿರುವ ಕೈ ನಾಯಕರು, ಮುಸ್ಲಿಂ ಸಮುದಾಯದ ಪ್ರಬಲ ನಾಯಕ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಕಲ್ಯಾಣದಲ್ಲೇ ಠಿಕಾಣಿ ಹೂಡಿಸಿ ಮತ ಕ್ರೋಡೀಕರಣದ ಜವಾಬ್ದಾರಿ ವಹಿಸಲಿದೆ.

ಅಲ್ಪಸಂಖ್ಯಾತರ ಮತಗಳೇ ಕಾಂಗ್ರೆಸ್‌ ಪಕ್ಷಕ್ಕೆ ಹಿಂದಿನಿಂದಲೂ ಸಾಂಪ್ರದಾಯಿಕ ವೋಟ್‌ ಬ್ಯಾಂಕ್‌. ಈ ಮತಗಳನ್ನು ಒಡೆದು ಚುನಾವಣೆ ಎದುರಿಸುವುದು ದಳದ ಉದ್ದೇಶ. ಇದರಿಂದ ಹಾನಿಯಾಗುವುದು ಕಾಂಗ್ರೆಸ್‌ ಪಡೆಗೆ. ಇದನ್ನರಿತಿರುವ ಕೈ ನಾಯಕರು, ನಿರ್ಣಾಯಕ ಪಾತ್ರ ವಹಿಸಲಿರುವ ಮತಗಳನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಲು ಸಿದ್ಧವಿಲ್ಲ. ಹಾಗಾಗಿ ಜಮೀರ್‌ ಅವರನ್ನು ಅಖಾಡಕ್ಕೆ ಇಳಿಸಿ, ಅಲ್ಪಸಂಖ್ಯಾತರ ಮತ ಸೆಳೆಯುವ ಪ್ರತಿತಂತ್ರ ಹೆಣೆಯುತ್ತಿದೆ.

ಕಾಂಗ್ರೆಸ್‌ನಲ್ಲಿದ್ದ ಯಸ್ರಬ್‌ ಅವರನ್ನು ಜೆಡಿಎಸ್‌ ಸೆಳೆದು ಚುನಾವಣೆ ಕಣಕ್ಕಿಳಿಸಿದೆ. ಈಗ ಕಾಂಗ್ರೆಸ್‌ ಸಹ ಹಿಂದೆ ಜೆಡಿಎಸ್‌ನಲ್ಲಿದ್ದ ಜಮೀರ್‌ ಖಾನ್‌ ಅವರನ್ನು ಅಸ್ತ್ರವಾಗಿ ಪ್ರಯೋಗಿಸಿ ಸಾಧ್ಯವಾದಷ್ಟು ಮುಸ್ಲಿಂ ಮತಗಳು “ಕೈ’ ಜಾರದಂತೆ ಪ್ಲಾನ್‌ ರೂಪಿಸಿದೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಸವಕಲ್ಯಾಣ ಕ್ಷೇತ್ರದ ಜವಾಬ್ದಾರಿ ವಹಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದು, ಶೀಘ್ರವೇ ಅಖಾಡಕ್ಕೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಜಮೀರ್‌ ಆರ್ಥಿಕವಾಗಿ ಸದೃಢರಾಗಿ ರುವುದರಿಂದ ಕ್ಷೇತ್ರದಲ್ಲಿ ಸಂಪನ್ಮೂಲ ವಿನಿಯೋಗದ ಜತೆಗೆ ಚುನಾವಣೆ ಕಾರ್ಯತಂತ್ರ ರೂಪಿಸಲು ಮತ್ತು ರಾಜಕೀಯ ಒಳ ಸುಳಿಗಳನ್ನು ಅನುಷ್ಠಾನಕ್ಕೆ ತರಲು ಕಾಂಗ್ರೆಸ್‌ಗೆ ಸುಲಭವಾಗಬಹುದು. ಆದರೆ, ಕೈ ಪಡೆಯ ಕಾರ್ಯತಂತ್ರ ಎಷ್ಟರ ಮಟ್ಟಿಗೆ ಫಲ ಕೊಡಬಹುದು ಎಂಬುದನ್ನು ಕಾದು ನೊಡಬೇಕಷ್ಟೇ.

ಶಶಿಕಾಂತ ಬಂಬುಳಗೆ 

ಟಾಪ್ ನ್ಯೂಸ್

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.