ಜಿಪಂ ಸಭೆ: 5.74 ಕೋಟಿ ರೂ. ಕ್ರಿಯಾ ಯೋಜನೆಗೆ ಅಸ್ತು
Team Udayavani, Dec 31, 2019, 11:54 AM IST
ಬೀದರ: ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಅನುದಾನ 5 ಕೋಟಿ 74 ಲಕ್ಷ ರೂ.ಗಳ ಕ್ರಿಯಾ ಯೋಜನೆಗೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದಿಸಲಾಯಿತು.
ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಅನುದಾನ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ನಡೆಯಿತು. ಕುಡಿಯುವ ನೀರಿಗೆ ಸಂಬಂಧಿಸಿದ ಒಂದು ಕೋಟಿ ರೂ. ಅನುದಾನವನ್ನು ಜಿಲ್ಲಾ ಪಂಚಾಯತ್‌ನ ಎಲ್ಲ ಕ್ಷೇತ್ರಗಳಿಗೆ ಸಮಾನವಾಗಿ ಹಂಚಿಕೆ ಮಾಡಬೇಕು ಎಂದು ಎಲ್ಲ ಸದಸ್ಯರು ಪಟ್ಟು ಹಿಡಿದರು. ಬಳಿಕ ಸದರಿ ಅನುದಾನವನ್ನು ಜಿಲ್ಲಾ ಪಂಚಾಯತ್‌ನ ಎಲ್ಲ ಕ್ಷೇತ್ರಗಳಿಗೆ ಸರಿ ಸಮಾನವಾಗಿ ಹಂಚಿಕೆ ಮಾಡಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಯಿತು.
ಬಳಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಗೀತಾ ಚಿದ್ರಿ ಮಾತನಾಡಿ, ಈ ವಿಷಯವನ್ನು ಪರಿಶೀಲಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಲಕ್ಷ್ಮ ಣರಾವ್ ಬುಳ್ಳಾ, ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ,ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್., ಹಾಗೂ ಸದಸ್ಯರು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.