ಸಾಂಸ್ಕೃತಿಕ ಭವನಕ್ಕೆ 25 ಲಕ್ಷ ರೂ. ಘೋಷಣೆ
ಮನವಿ ಪತ್ರಕ್ಕೆ ಸಹಿ ಮಾಡಿ ಅನುದಾನ ಬಿಡುಗಡೆಗೆ ಅಧಿ ಕಾರಿಗಳಿಗೆ ಸೂಚಿಸಿದ ಸಚಿವ ಸಿ.ಟಿ.ರವಿ
Team Udayavani, Nov 18, 2019, 11:46 AM IST
ಬೀದರ: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನ ಪೂರ್ಣಗೊಳಿಸುವುದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ 25 ಲಕ್ಷ ರೂ. ಘೋಷಣೆ ಮಾಡಿದ್ದು, ಸ್ಥಳದಲ್ಲಿಯೇ ಮನವಿ ಪತ್ರದ ಮೇಲೆ ಸಹಿ ಮಾಡಿ ಅನುದಾನ ಬಿಡುಗಡೆ ಮಾಡಲು ಅಧಿಕಾರಿಗಳಗೆ ಸೂಚಿಸಿದ್ದಾರೆ ಎಂದು ಸಂಘದ ಅಧ್ಯಕ್ಷ ಡಾ| ಜಗನ್ನಾಥ ಹೆಬ್ಟಾಳೆ ತಿಳಿಸಿದ್ದಾರೆ.
ನಗರದಲ್ಲಿ ಪ್ರವಾಸ ಕೈಗೊಂಡಿದ್ದ ಸಚಿವ ಸಿ.ಟಿ. ರವಿ ಅವರಿಗೆ ಡಾ| ಹೆಬ್ಟಾಳೆ ಅವರು, ಸಂಘ ಕುರಿತು ಸುದೀರ್ಘ ಮಾಹಿತಿ ನೀಡಿದರು. ಸಂಘವು ಈಗಾಗಲೇ 50 ವರ್ಷಗಳಿಂದ ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ಸಾಂಸ್ಕೃತಿಕ ಭವನ ನಿರ್ಮಾಣ ಮಾಡುತ್ತಿದೆ.
ಭವನದ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. 2020ಕ್ಕೆ ಕರ್ನಾಟಕ ಸಾಹಿತ್ಯ ಸಂಘವು ಸ್ಥಾಪನೆಯಾಗಿ 50 ವರ್ಷ ಆಗಿರುವುದರಿಂದ ಸಂಘದ ಸುವರ್ಣ ಮಹೋತ್ಸವವನ್ನು ಸಂಘದ ಸಾಂಸ್ಕೃತಿಕ ಭವನದಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ. ಅಲ್ಲಿಯವರೆಗೆ ಭವನದ ಕಾಮಗಾರಿ ಪೂರ್ಣಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.
ಸಂಸದ ಭಗವಂತ ಖೂಬಾ, ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ, ಈಶ್ವರಸಿಂಗ್ ಠಾಕೂರ್, ಬಾಬು ವಾಲಿ, ಶಂಕರೆಪ್ಪ ಹೊನ್ನಾ, ಪ್ರೊ| ಎಸ್.ಬಿ.ಬಿರಾದಾರ, ಡಾ| ರಾಜಕುಮಾರ ಹೆಬ್ಟಾಳೆ, ಮಹಾರುದ್ರ ಡಾಕುಳಗಿ, ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪುರ, ಮಲ್ಲಮ್ಮ ಸಂತಾಜಿ, ಎಸ್.ಬಿ.ಕುಚಬಾಳ, ಎಸ್.ವಿ.ಕಲ್ಮಠ, ನಿರಂಜನ ಸ್ವಾಮಿ, ರಾಜೇಂದ್ರಸಿಂಗ್ ಪವಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.