ನಿಗದಿತ ಗುರಿಯಂತೆ ಕೆಲಸ ಪೂರ್ಣಗೊಳಿಸಿ

ಆರ್ಥಿಕ-ಭೌತಿಕ ಸಾಧನೆಯಾಗುವಂತೆ ನೋಡಿಕೊಳ್ಳಲು ನಿರ್ದೇಶನ

Team Udayavani, Dec 13, 2019, 5:17 PM IST

13-December-26

ಬೀದರ: ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.ಮಹಾದೇವ ಅವರ ಅಧ್ಯಕ್ಷತೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಿರ್ಮಿತಿ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಧಿಕಾರಿಗಳು, ನಿಗದಿಪಡಿಸಿದ ಗುರಿಯಂತೆ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ 108 ಶಾಲೆಗಳಲ್ಲಿ ತೀವ್ರ ನಿಗಾ ಕಲಿಕಾ ತರಗತಿಗಳನ್ನು ತೆರೆಯುವ ಯೋಜನೆಗೆ ಸಂಬಂ ಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಕೆಲಸ ಬೇಗ ಪೂರ್ಣಗೊಳಿಸಿ ಆರ್ಥಿಕ ಮತ್ತು ಭೌತಿಕ ಸಾಧನೆಯಾಗುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಎಲ್ಲ ತಾಲೂಕುಗಳಲ್ಲಿ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿರುವುದಕ್ಕೆ ಅಸಮಾಧಾನಗೊಂಡ ಜಿಲ್ಲಾಧಿಕಾರಿಯವರು ಹಳೆಯ ಕಾಮಗಾರಿ ಗಳನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡುವಂತಿಲ್ಲ. ಚಾಲ್ತಿಯಲ್ಲಿರುವ ಕೆಲಸಗಳನ್ನು ಚುರುಕುಗೊಳಿಸಿ ಅನುದಾನ ಖರ್ಚು ಮಾಡುವಂತೆ ಸೂಚಿಸಿದರು.

ಲೋಕೋಪಯೋಗಿ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಾಕಷ್ಟು ಯೋಜನೆಗಳಿವೆ. ಈಗಾಗಲೇ ನಡೆಯುತ್ತಿರುವ ಕೆಲಸಗಳನ್ನು ಆದಷ್ಟು ಶೀಘ್ರ ಮುಗಿಸಬೇಕು. ಹಾಗೂ ಇನ್ನೂ ಆರಂಭವಾಗದ ಕೆಲಸಗಳನ್ನು ತುರ್ತಾಗಿ ಆರಂಭಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆಕೆಆರ್‌ಡಿಬಿ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಪ್ರತಿನಿತ್ಯ ಪ್ರಗತಿ ವರದಿ ಸಲ್ಲಿಸಬೇಕು. ಆರ್ಥಿಕ ಪ್ರಗತಿ ಸಾಧನೆಯಾದಲ್ಲಿ ಕೂಡಲೇ ಆ ಬಗ್ಗೆ ವೆಬ್‌ ಸೈಟ್‌ನಲ್ಲಿ ಮಾಹಿತಿ ದಾಖಲಿಸಬೇಕು ಎಂದು ಅಧಿ ಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿ ರುದ್ರೇಶ್‌ ಗಾಳಿ, ನಗರಸಭೆ ಪೌರಾಯುಕ್ತ ಬಿ.ಬಸಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.