ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಸ್ಮರಣೆಗಾಗಿ 101 ಜೋಡಿ ಸಾಮೂಹಿಕ ವಿವಾಹ : ಶಾಸಕ ಶಿವಾನಂದ
Team Udayavani, Nov 24, 2021, 12:57 PM IST
ವಿಜಯಪುರ : ಕೋವಿಡ್ ಹಿನ್ನೆಲೆಯಲ್ಲಿ ಪದೇ ಪದೇ ಮುಂದೂಡಲ್ಪಡುತ್ತಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶತಮಾನೋತ್ಸವ ನಡೆಸಲು ನಿರ್ಧರಿಸಲಾಗಿದೆ. ಸರ್ಕಾರ ಅನುಮತಿಸಿದರೆ ಡಿಸೆಂಬರ್ ತಿಂಗಳಲ್ಲಿ ಶತಮಾನೋತ್ಸವ ಸ್ಮರಣೆಗಾಗಿ ನೂರೊಂದು ಜೋಡಿ ಸಾಮೂಹಿಕ ವಿವಾಹವೂ ನಡೆಯಲಿದೆ.
ಬುಧವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿತುವ ಬಸವನಬಾಗೆವಾಡಿ ಶಾಸಕ ಶಿವಾನಂದ ಪಾಟೀಲ, ಕೋವಿಡ್ ಹಿನ್ನೆಲೆಯಲ್ಲಿ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಬಡ ಕುಟುಂಬಗಳ ಮದುವೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಿಂತು ಹೋಗಿವೆ. ಹೀಗಾಗಿ ಬಡ ಕುಟುಂಬಗಳಿಗೆ ನೆರವು ನೀಡುವ ಸಾಮಾಜಿಕ ಹೊಣೆಗಾರಿಕೆಗಾಗಿ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದರು.
ಸರ್ಕಾರ ಇನ್ನೂ ಪೂರ್ಣ ಪ್ರಮಾಣದಲ್ಲಿ ಕೋವಿಡ್ ನಿಯಮಗಳನ್ನು ಸಡಿಲಿಸಿಲ್ಲ. ಹೀಗಾಗಿ ನಭೂತೋ ನಭವಿಷತ್ ಮಾದರಿಯಲ್ಲಿ ಸಾಮೂಹಿಕ ವಿವಾಹ ನೆರವೇರಿಸಲು ಸರ್ಕಾರದ ಅನುಮತಿಗೆ ಕಾದಿದ್ದೇವೆ. ಡಿಸೆಂಬರ್ ಅಂತ್ಯದೊಳಗೆ ಅನುಮತಿ ಸಿಗುವ ನಿರೀಕ್ಷೆ ಇದೆ ಎಂದರು.
ಇದನ್ನೂ ಓದಿ: ಮಂಗಳೂರು: ಲೈಂಗಿಕ ದೌರ್ಜನ್ಯವೆಸಗಿ 8 ರ ಬಾಲಕಿ ಕೊಲೆ; 4 ಆರೋಪಿಗಳ ಬಂಧನ
ಸಾಮೂಹಿಕ ವಿವಾಹದ ಹಿನ್ನೆಲೆಯಲ್ಲಿ ಹೆಸರು ನೋಂದಣಿಗೆ ಶೀಘ್ರವೇ ಸಂಪರ್ಕಕ್ಕೆ ಮೊಬೈಲ್ ಸಂಖ್ಯೆಯನ್ನು ನೀಡುತ್ತೇವೆ. ನೊಂದಾಯಿತ ಜೋಡಿಯ ದಾಖಲೆಗಳನ್ನು ಮಹಿಳ, ಮಕ್ಕಳ ಕಲ್ಯಾಣ ಇಲಾಖೆ ಪರಿಶೀಲನೆ ಬಳಿಕ ಜೋಡಿಯ ಹೆಸರುಗಳನ್ನು ಸಾಮೂಹಿಕ ವಿವಾಹಕ್ಕೆ ಅಂತಿಮಗೊಳಿಸಲಾಗುತ್ತದೆ ಎಂದು ವಿವರಿಸಿದರು.
29 ರಂದು ಪುತ್ರಿ ಸಂಯುಕ್ತಾ ವಿವಾಹ : ಕೋವಿಡ್ ಕಾರಣಕ್ಕೆ ಹಲವು ಬಾರಿ ಮುಂದೂಡಲ್ಪಟ್ಟ ನನ್ನ ಹಿರಿಯ ಪುತ್ರಿಯ ವಿವಾಹವನ್ನು ನವೆಂಬರ್ 29 ರಂದು ವಿಜಯಪುರ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ನಗರದ ಬೇಗಂ ತಲಾಬ್ ಕೆರೆ ಪ್ರದೇಶದಲ್ಲಿ ಸಂಜೆ 5-30 ಗೋಧೂಳಿ ಸಂದರ್ಭದಲ್ಲಿ ಪುತ್ರಿಯ ವಿವಾಹ ನಡೆಯಲಿದೆ ಎಂದರು.
ಇದನ್ನೂ ಓದಿ: ಬಿಟ್ ಕಾಯಿನ್ ನಿಷೇಧದ ಸುಳಿವು; ಒಂದೇ ದಿನದಲ್ಲಿ ಭಾರೀ ಕುಸಿತ ಕಂಡ ಕ್ರಿಫ್ಟೋ ಕರೆನ್ಸಿ ಮೌಲ್ಯ
ಕೋವಿಡ್ ನಿಯಮಗಳ ಪಾಲನೆಗಾಗಿ ಯಾರಿಗೂ ಆಮಂತ್ರಣ ಪತ್ರಿಕೆ ನೀಡುತ್ತಿಲ್ಲ. ಆದರೆ ನನ್ನ ಕ್ಷೇತ್ರ, ವಿಜಯಪುರ, ಬಾಗಲಕೋಟೆ ಸೇರಿದಂತೆ ರಾಜ್ಯದ ಜನರು ಮಾಧ್ಯಮಗಳ ಮೂಲಕ ನನ್ನ ಪುತ್ರಿಯ ವಿವಾಹದ ಆಮಂತ್ರಣ ಸ್ವೀಕರಿಸಿ, ಮಗಳ ಮದುವೆಗೆ ಆಗಮಿಸಲು ಕೋರುತ್ತೇನೆ ಎಂದು ಮನವಿ ಮಾಡಿದರು.
ನನ್ನ ಪುತ್ರಿಯ ವಿವಾಹ ಸಂದರ್ಭದಲ್ಲೇ ಬಡವರಿಗಾಗಿ ನೂರೊಂದು ಸಾಮೂಹಿಕ ವಿವಾಹ ಮಾಡುವ ಯೋಜನೆ ರೂಪಿಸಲಾಗಿತ್ತು. ಆದರೆ ಕೋವಿಡ್ ಕಾರಣದಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಸ್ಮರಣೆಗಾಗಿ ಬ್ಯಾಂಕ್ ಸಹಯೋಗದಲ್ಲಿ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದರು.
ಶಾಸಕರ ಪುತ್ರಿಯೂ ಆಗಿರುವ ವಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.