ಕ್ವಾರಂಟೈನ್ ಕೇಂದ್ರದಲ್ಲಿನ 11 ಜನರ ಗಂಟಲು ದ್ರವ ಸಂಗ್ರಹ
Team Udayavani, May 25, 2020, 5:58 AM IST
ವಿಜಯಪುರ: ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ತೆರೆಯಲಾಗಿರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿರುವರಲ್ಲಿ 11 ಜನರ ಗಂಟಲು ದ್ರವ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಕಳಿಸಲಾಯಿತು.
ಆರೋಗ್ಯ ಇಲಾಖೆ ಪ್ರಯೋಗಾಲಯದ ತಾಂತ್ರಿಕ ಸಿಬ್ಬಂದಿ ಗ್ರಾಮದ ಕ್ವಾರಂಟೈನ ಕೇಂದ್ರಕ್ಕೆ ತೆರಳಿ ಕ್ವಾರಂಟೈನ್ ಕೇಂದ್ರದಲ್ಲಿ ಜಿಲ್ಲಾಡಳಿತದ ನಿಗಾದಲ್ಲಿರುವ ಇಬ್ಬರು ಮಕ್ಕಳು, ಒಬ್ಬಳು ಗರ್ಭಿಣಿ, ಆರು ಜನ ಯುವತಿಯರು ಸೇರಿದಂತೆ 11 ಜನರ ಗಂಟಲು ದ್ರವ ಸಂಗ್ರಹಿಸಿದರು. ಕ್ವಾರಂಟೈನ್‌ಗೆ ಒಳಪಟ್ಟ ಎಲ್ಲರಿಗೂ ಸಾಮಾಜಿಕ ಅಂತರ ಕಾಪಾಡಿ, ಮಾಸ್ಕ್ ಹಾಗೂ ಸಾನಿಟೈಜರ್ ಬಳಕೆ ಮಾಡಬೇಕು. ಸ್ನಾನ ಮಾಡಲು ತೆರಳಿದಾಗ ನಳಕ್ಕೆ ಕಡ್ಡಾಯವಾಗಿ ಸೈನಿಟೈಜರ್ ಹಚ್ಚಬೇಕು. ಒಂದೇ ಕುಟುಂಬದ ಸದಸ್ಯರು ಇದ್ದರೂ ಆರೋಗ್ಯ ಇಲಾಖೆಯ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಜ್ವರ, ಕೆಮ್ಮು, ಶೀತದಂಥ ರೋಗ ಲಕ್ಷಗಳು ಕಂಡು ಬಂದಲ್ಲಿ ತಕ್ಷಣವೇ ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಗರ್ಭಿಣಿಯರು, ಮಕ್ಕಳಿಗೆ ಯಾವುದೇ ಆರೋಗ್ಯದ ಸಮಸ್ಯೆ ಕಂಡು ಬಂದಲ್ಲಿ ನಿರ್ಲಕ್ಷ ಮಾಡದೇ ಮೇಲಧಿ ಕಾರಿಗಳ ಗಮನಕ್ಕೆ ತರಬೇಕು ಎಂದು ಘೋಣಸಗಿ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಜಮಾಲುದ್ದಿನ ಮುಲ್ಲಾ ಸೂಚಿಸಿದರು.
ಕ್ವಾರಂಟೈನ್ ಕೇಂದ್ರದಲ್ಲಿರುವವರು ಗ್ರಾಮದಲ್ಲೇ ಮನೆ ಇದ್ದರೂ ಯಾವದೇ ಆಹಾರ ತರಿಸಿಕೊಳ್ಳುವಂತಿಲ್ಲ. ಬದಲಾಗಿ ಕ್ವಾರಂಟೈನ್ ಕೇಂದ್ರದಲ್ಲಿರುವ ಗುಣಮಟ್ಟದ ಆಹಾರ ಹಾಗೂ ಇತರೆ ಸೌಲಭ್ಯಗಳನ್ನೇ ಬಳಸಬೇಕು ಎಂದು ಸೂಚಿಸಿದರು.
ಹಿರಿಯ ಆರೋಗ್ಯ ಸಹಾಯಕ ಎಸ್.ಆರ್. ಉಪ್ಪಾರ, ಪ್ರಯೋಗಾಲಯ ತಂತ್ರಜ್ಞರು ಎಂ.ಬಿ.ಜನಗಿಂಡ, ಎಚ್.ಬಿ.ಬಡಿಗೇರ, ಆಶಾ ಕಾರ್ಯಕರ್ತೆ ಅಶ್ವಿàನಿ ಗಿಡ್ನವರ್, ಸಂಗೀತಾ ವಾಲಿಕಾರ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.