ವಿಜಯಪುರದ 11ರ ಬಾಲಕಿಗೆ ಸೋಂಕು ದೃಢ: ಜಿಲ್ಲೆಯ ಸೋಂಕಿತರ ಸಂಖ್ಯೆ 49 ಕ್ಕೆ ಏರಿಕೆ
Team Udayavani, May 9, 2020, 1:25 PM IST
ವಿಜಯಪುರ: ಕೋವಿಡ್-19 ಸೋಂಕು ಶಂಕಿತ 11 ವರ್ಷದ ಬಾಲಕಿಗೆ ಶನಿವಾರ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 49 ಕ್ಕೆ ಏರಿಕೆಯಾಗಿದೆ
ಏಪ್ರಿಲ್ 27 ರಂದು ಸೋಂಕು ದೃಢಪಟ್ಟಿದ್ದ 47 ವರ್ಷದ ವ್ಯಕ್ತಿಯ ಮಗಳನ್ನು ಅದೇ ದಿನ ಕೋವಿಡ್ ಆಸ್ಪತ್ರೆ ನಿಗಾದಲ್ಲಿ ಇರಿಸಲಾಗಿತ್ತು. ಇದೀಗ ಆಕೆಗೆ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟಿರುವ 11 ವರ್ಷದ ಬಾಲಕಿಯನ್ನು ಪಿ- 769 ಎಂದು ಗುರುತಿಸಲಾಗಿದೆ.
ಬಾಲಕಿಯ ಪ್ರಕರಣದೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 49 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಸೋಂಕಿತೆಯಾಗಿದ್ದ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯ ವೈದ್ಯ ವಿದ್ಯಾರ್ಥಿನಿ ಸೇರಿದಂತೆ 25 ಜನರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ಮೂವರು ಮೃತಪಟ್ಡಿದ್ದು, ಹೊಸದಾಗಿ ಸೋಂಕು ದೃಢಪಟ್ಟಿರುವ ಬಾಲಕಿ ಸೇರಿ 21 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ರಾಜ್ಯದಲ್ಲಿ ಇಂದು ಹೊಸ 36 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಇವರಲ್ಲಿ 30 ಜನರು ಮರಣ ಹೊಂದಿದ್ದರೆ, 379 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಒಂದು ಪ್ರಕರಣ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.