ಆರು ಮಕ್ಕಳು ಸೇರಿ 13 ಜನರಿಗೆ ಸೋಂಕು


Team Udayavani, Jun 11, 2020, 7:49 AM IST

ಆರು ಮಕ್ಕಳು ಸೇರಿ 13 ಜನರಿಗೆ ಸೋಂಕು

ವಿಜಯಪುರ: ಮಹಾರಾಷ್ಟ್ರದಿಂದ ಜಿಲ್ಲೆಗೆ ಮರಳಿದ 13 ಜನರಲ್ಲಿ ಬುಧವಾರ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಮತ್ತೂಂದೆಡೆ ಸೋಂಕಿತರಲ್ಲಿ ಮತ್ತೆ ಇಬ್ಬರು ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದ್ದಾರೆ.

ಹೊಸದಾಗಿ ಸೋಂಕು ದೃಢಪಟ್ಟ 13 ಜನರಲ್ಲಿ 6 ಮಕ್ಕಳೇ ಇದ್ದಾರೆ. ಜಿಲ್ಲೆಯಲ್ಲಿ ಈವರೆಗೆ 217 ಜನ ಸೋಂಕಿತರು ಪತ್ತೆಯಾಗಿದ್ದು, 131 ಜನರು ಕೋವಿಡ್‌ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಫಲವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 80 ಸಕ್ರೀಯ ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಸೋಂಕಿತರಲ್ಲಿ ಈ ವರೆಗೆ 6 ಜನರು ಮೃತಪಟ್ಟಿದ್ದಾರೆ ಎಂದು ವಿವರಿಸಿದ್ದಾರೆ.

ಜಿಲ್ಲೆಯಲ್ಲಿ ಹೊಸದಾಗಿ ಸೋಂಕು ದೃಢಟ್ಟವರನ್ನು 28 ವರ್ಷದ ವ್ಯಕ್ತಿ ಪಿ-5973, 5 ವರ್ಷದ ಬಾಲಕಿ ಪಿ-5974, 3 ವರ್ಷದ ಬಾಲಕಿ ಪಿ-5975, 50 ವರ್ಷದ ವ್ಯಕ್ತಿ ಪಿ-5976, 25 ವರ್ಷದ ವ್ಯಕ್ತಿ ಪಿ-5977, 24 ವರ್ಷದ ವ್ಯಕ್ತಿ ಪಿ-5978, 23 ವರ್ಷದ ಮಹಿಳೆ ಪಿ-5979, 7 ವರ್ಷದ ಬಾಲಕ ಪಿ-5980, 2 ವರ್ಷದ ಹೆಣ್ಣು ಮಗು ಪಿ-5981, 1 ವರ್ಷದ ಗಂಡು ಮಗು ಪಿ-5982, 10 ವರ್ಷದ ಬಾಲಕ ಪಿ-5983, 25 ವರ್ಷದ ಮಹಿಳೆ ಪಿ-5984, 28 ವರ್ಷದ ವ್ಯಕ್ತಿ ಪಿ-5994 ಎಂದು ಗುರುತಿಸಲಾಗಿದೆ. ಮತ್ತೂಂದೆಡೆ 22 ವರ್ಷದ ವ್ಯಕ್ತಿ ಪಿ-3157 ಹಾಗೂ 20 ವರ್ಷದ ಮಹಿಳೆ ಪಿ-4603 ಇವರು ಕೋವಿಡ್‌ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯ ಫಲವಾಗಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 26,506 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದು, 26,139 ಜನರ ವರದಿ ನೆಗೆಟಿವ್‌ ಬಂದಿದೆ. 150 ಜನರ ವರದಿ ನಿರೀಕ್ಷೆಯಲ್ಲಿದ್ದೇವೆ. ಈ ವರೆಗೆ 217 ಜನರಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದ್ದು,131 ಜನರು ಸೋಂಕುಮುಕ್ತರಾಗಿ ಕೋವಿಡ್‌ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಈ ವರೆಗೆ ವಿದೇಶ ಹಾಗೂ ಇತರೆ ಸ್ಥಳಗಳಿಂದ ಜಿಲ್ಲೆಗೆ ಮರಳಿರುವ 29021 ಜನರ ಮೇಲೆ ನಿಗಾ ಇರಿಸಿದ್ದು, 8589 ಜನರು 28 ದಿನಗಳ ಐಸೋಲೇಶನ್‌ ಅವಧಿ ಮುಗಿಸಿದ್ದಾರೆ. 20295 ಜನರು 28 ದಿನಗಳ ರಿಪೋರ್ಟಿಂಗ್‌ ಅವಧಿಯಲ್ಲಿದ್ದಾರೆ ಎಂದು ಜಿಲ್ಲಾ ಧಿಕಾರಿಗಳು ವಿವರಿಸಿದ್ದಾರೆ.

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.