ಮುಖ್ಯ ರಸ್ತೆ ಮೇಲ್ದರ್ಜೆಗೆ 21 ಕೋಟಿ ರೂ. ಅನುದಾನ
ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಪ್ರಯತ್ನಕ್ಕೆ ಸಾರ್ವಜನಿಕರಿಂದ ಶ್ಲಾಘನೆ
Team Udayavani, Sep 29, 2020, 4:26 PM IST
ಮುದ್ದೇಬಿಹಾಳ: ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾಗಿದ್ದ ಮುದ್ದೇಬಿಹಾಳ ಪಟ್ಟಣದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಿಂದ ವಿಜಯಪುರ ರಸ್ತೆಯ ಬಿದರಕುಂದಿ ಕಿರು ಸೇತುವೆವರೆಗಿನ ಒಂದೂವರೆ ಕಿ.ಮೀ. ಹೆದ್ದಾರಿ ಮಾದರಿಯ 14 ಮೀ. ಅಗಲದ ಡಾಂಬರೀಕರಣ ಹಾಗೂ ಅಲ್ಲಿಂದ ಅಗಸಬಾಳ ಕ್ರಾಸ್ ವರೆಗಿನ 13.5 ಕಿ.ಮೀ.ವರೆಗಿನ 7 ಮೀ. ಅಗಲದ ಡಾಂಬರೀಕರಣ ರಸ್ತೆ ದುರಸ್ತಿ ಕಾಮಗಾರಿಗೆ ಸರ್ಕಾರ ಸೋಮವಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಸಾರ್ವಜನಿಕ ವಲಯದಲ್ಲಿ ಹರ್ಷಕ್ಕೆ ಕಾರಣವಾಗಿದೆ.
ಈ ರಸ್ತೆ ದುರಸ್ತಿಗಾಗಿ ಸ್ಥಳೀಯ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಕಳೆದ ಮೂರು ತಿಂಗಳಿಂದ ಸರ್ಕಾರದ ಮಟ್ಟದಲ್ಲಿ ನಡೆಸುತ್ತಿದ್ದ ಪ್ರಯತ್ನಕ್ಕೆ ಯಶ ದೊರಕಿದಂತಾಗಿದ್ದು ಶಾಸಕರ ಜನಪರ ಕಾಳಜಿಯನ್ನು ಸಾರ್ವಜನಿಕರು ಕೊಂಡಾಡಿದ್ದಾರೆ. ಈಗಾಗಲೇ ಕರ್ನಾಟಕದ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಶಿರಾಡೋಣದಿಂದ ರಾಯಚೂರು ಜಿಲ್ಲೆ ಲಿಂಗಸಗೂರವರೆಗೆ ರಾಜ್ಯ ಹೆದ್ದಾರಿ 41ರ ಕಾಮಗಾರಿ ಹಂತ ಹಂತವಾಗಿ ಪ್ರಗತಿಯಲ್ಲಿದೆ. ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಈ ರಸ್ತೆಯು ವಿಜಯಪುರ ಮುಖ್ಯ ರಸ್ತೆಯ ಅಗಸಬಾಳ ಕ್ರಾಸ್‌ನಿಂದ ಮುದ್ದೇಬಿಹಾಳ, ನಾಲತವಾಡ ಪಟ್ಟಣಗಳ ಮೂಲಕ ನಾರಾಯಣಪುರ ಚೆಕ್‌ಪೋಸ್ಟ್‌ವರೆಗೂ, ನಂತರಬಸವಸಾಗರ ಜಲಾಶಯ ಮುಂಭಾಗ ಮಾರ್ಗವಾಗಿ ಲಿಂಗಸಗೂರು ತಾಲೂಕಿಗೆ ಪ್ರವೇಶಿಸುತ್ತದೆ. ಕಳೆದ ವರ್ಷ ಹಾಗೂ ಈ ವರ್ಷದ ಮಳೆಗೆ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ಅಡಿ ಬರುವ ವಿಜಯಪುರ ರಸ್ತೆ ಸಂಪೂರ್ಣ ಹಾಳಾಗಿ ಸಂಚಾರ ದುಸ್ತರವಾಗಿದ್ದನ್ನು ಶಾಸಕರು ಗಂಭೀರವಾಗಿ ಪರಿಗಣಿಸಿದ್ದರು.
ಹೇಗಿರಲಿದೆ ರಸ್ತೆ?: ಈಗಾಗಲೇ ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರಗತಿಯಲ್ಲಿರುವ ಹುನಗುಂದ- ತಾಳಿಕೋಟೆ ರಾಜ್ಯ ಹೆದ್ದಾರಿಮಾದರಿಯಲ್ಲೇ ಅಂಬೇಡ್ಕರ್ ಸರ್ಕಲ್‌ನಿಂದ ಬಿದರಕುಂದಿ ಬಳಿಯ ಕಿರು ಸೇತುವೆವರೆಗೂ 14 ಮೀ. ಅಗಲ ಡಾಂಬರೀಕೃತ ಡಬಲ್ ರಸ್ತೆ ನಿರ್ಮಾಣಗೊಳ್ಳಲಿದೆ. ಎರಡೂ ಬದಿಚರಂಡಿ, ರಸ್ತೆ ಮಧ್ಯೆ ಒಂದೂವರೆ ಮೀಟರ್‌ನ ರಸ್ತೆ ವಿಭಜಕ ಇರಲಿದ್ದು ಪಿಲೇಕೆಮ್ಮ ನಗರದ ಹೆಸ್ಕಾಂ ಕಚೇರಿಬಳಿ ನಿಂತು ಬಸವೇಶ್ವರ, ಅಂಬೇಡ್ಕರ್ ವೃತ್ತದ ಮೂಲಕ ನೋಡಿದರೆ ಒಂದೇ ಮಾದರಿ ರಸ್ತೆಯಂತೆ ಕಾಣುವ ಹಾಗೆ ಯೋಜನೆ ರೂಪಿಸಲಾಗಿದೆ.
ಮೇಲ್ಭಾಗದಿಂದ ಹರಿದು ಬರುವ ನೀರು ಬಿದರಕುಂದಿ ಹಳ್ಳ ಸೇರಿಸಲು ವ್ಯವಸ್ಥೆ ಕಲ್ಪಿಸಿದ್ದು ಚರಂಡಿ ನೀರಿನ ಸಮಸ್ಯೆಗೆ ಮುಕ್ತಿ ಹೇಳುವಂತಿದೆ. ಇನ್ನು ಕಿರು ಸೇತುವೆಯಿಂದ ಅಗಸಬಾಳ ಕ್ರಾಸ್‌ವರೆಗೆ ಸದ್ಯ ಇರುವ 5.5 ಮೀ. ಅಗಲದ ಡಾಂಬರೀಕೃತ ವಿಜಯಪುರ ಮುಖ್ಯರಸ್ತೆಯ 13.5 ಕಿ.ಮೀ. ಅಂತರದ ರಸ್ತೆಯನ್ನು 7 ಮೀ. ಡಾಂಬರೀಕೃತ ರಸ್ತೆಯನ್ನಾಗಿ ಅಗಲೀಕರಣಗೊಳಿಸುವುದು ಯೋಜನೆಯಲ್ಲಿ ಸೇರಿದೆ.
2019-20ನೇ ಸಾಲಿನ ಅತಿವೃಷ್ಟಿಯಿಂದ ಸಂಪೂರ್ಣ ಹಾಳಾಗಿದ್ದ ಈ ರಸ್ತೆ ಅಭಿವೃದ್ಧಿಗೆ ಉಪ ಮುಖ್ಯಮಂತ್ರಿಗಳು, ಪಿಡಬ್ಲೂಡಿ ಸಚಿವರು ಸಹಕರಿಸಿದ್ದಾರೆ. ಜನರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಶೀಘ್ರ ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಂಡು ಕನಸು ನನಸಾಗಲಿದೆ.– ಎ.ಎಸ್. ಪಾಟೀಲ ನಡಹಳ್ಳಿ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.