ಮುಂಬೈನಿಂದ ರೈಲಲ್ಲಿ ಬಂದ 210 ಜನ
Team Udayavani, Jun 3, 2020, 6:21 AM IST
ವಿಜಯಪುರ: ದುಡಿಮೆ ಅರಸಿ ಮಹಾರಾಷ್ಟ್ರದ ವಿವಿಧ ಕಡೆಗಳಲ್ಲಿ ಗುಳೆ ಹೋಗಿದ್ದ ಜಿಲ್ಲೆಯ 210 ಜನರು ಮಂಗಳವಾರ ಮುಂಬೈ-ಗದಗ ರೈಲು ಮೂಲಕ ನಗರಕ್ಕೆ ಬಂದಿಳಿದರು.
ಬೆಳಗ್ಗೆ 7:30ಕ್ಕೆ ಆಗಮಿಸಿದ ಎಲ್ಲ ಕಾರ್ಮಿಕರನ್ನು ಜಿಲ್ಲಾಡಳಿತ ಬಸ್ ಮೂಲಕ ಆಯಾ ತಾಲೂಕಿನ ಕ್ವಾರಂಟೈನ್ ಕೇಂದ್ರಕ್ಕೆ ಕಳಿಸುವ ವ್ಯವಸ್ಥೆ ಮಾಡಿತು. ಮುಂಬೈನಿಂದ ಜಿಲ್ಲೆಗೆ ಮರಳಿದ ಕಾರ್ಮಿಕರಲ್ಲಿ ವಿಜಯಪುರ ತಾಲೂಕಿನ 95, ಇಂಡಿ ತಾಲೂಕಿನ 40, ಸಿಂದಗಿ ತಾಲೂಕಿನ 28, ಮುದ್ದೇಬಿಹಾಳ ತಾಲೂಕಿನ 18 ಹಾಗೂ ಬಸವನಬಾಗೇವಾಡಿ ತಾಲೂಕಿನ 29 ಜನರು ಸೇರಿ ಜಿಲ್ಲೆಗೆ ಮರಳಿದ ಎಲ್ಲ ವಲಸಿಗರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ರೈಲ್ವೆ ನಿಲ್ದಾಣದಲ್ಲಿ ಕಾರ್ಮಿಕರನ್ನು ಬರ ಮಾಡಿಕೊಂಡು ಮಾತನಾಡಿದ ಮಹಾನಗರ ಪಾಲಿಕೆ ಆಯುಕ್ತ ಹರ್ಷಾಶಟ್ಟಿ, ಮುಂಬೈಯಿಂದ ಜಿಲ್ಲೆಗೆ ಮರಳಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ಇದಕ್ಕೂ ಮೊದಲು ಆರೋಗ್ಯ ಪರೀಕ್ಷೆ ನಡೆಸಲಿದ್ದೇವೆ. 7 ದಿನ ಸಾಂಸ್ಥಿಕ ಕ್ವಾರಂಟೈನ್ ಸಂದರ್ಭದಲ್ಲಿ ಕೋವಿಡ್ ರೋಗ ಲಕ್ಷಣ ಕಂಡುಬಂದವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ರೋಗ ಲಕ್ಷಣ ಇಲ್ಲದವರನ್ನು 7 ದಿನ ನಿಗಾದ ಬಳಿಕ ಹೋಂ ಕ್ವಾರಂಟೈನ್‌ಗೆ ಕಳಿಸಲಾಗುತ್ತದೆ ಎಂದರು.
ಮುಂಬೈ ರೈಲಿನಿಂದ ವಿಜಯಪುರ ನಿಲ್ದಾಣದಲ್ಲಿ ಇಳಿದವರಲ್ಲಿ ನೆರೆಯ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಜನರು ಸೇರಿದ್ದಾರೆ. ಇವರನ್ನು ಆಯಾ ಜಿಲ್ಲೆಗೆ ಕಳುಹಿಸಿಕೊಡಲು ಬಸ್ ವ್ಯವಸ್ಥೆ ಹಾಗೂ ಆಹಾರ ಕಿಟ್ ವ್ಯವಸ್ಥೆ ಮಾಡಲಾಗಿದೆ ಎಂದರು.
ತಹಶೀಲ್ದಾರ್ ಮೋಹನಕುಮಾರಿ, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ಡಿವೈಎಸ್‌ಪಿ ಲಕ್ಷ್ಮೀನಾರಾಯಣ ಸೇರಿದಂತೆ ಇತರ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.