ಮಾತ್ರೆ ಸೇವಿಸಿ 40 ಮಕ್ಕಳು ಅಸ್ವಸ್ತ
Team Udayavani, Aug 19, 2017, 3:34 PM IST
ತಾಳಿಕೋಟೆ: ಚೊಕ್ಕಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ನಂತರ ನೀಡಲಾದ ಆನೆಕಾಲು ರೋಗದ ಮಾತ್ರೆ ನುಂಗಿ 40 ಮಕ್ಕಳು ಅಸ್ವಸ್ಥಗೊಂಡ ಘಟನೆ ಶುಕ್ರವಾರ ನಡೆದಿದೆ. ಆನೆಕಾಲು ರೋಗದ ಮಾತ್ರೆ ಹಾಗೂ ಜಂತುನಾಶಕ ಮಾತ್ರೆ ಮಕ್ಕಳಿಗೆ ನುಂಗಿಸಿದ ನಂತರ ಅಸ್ವಸ್ಥರಾಗತೊಡಗಿದರು. ಇದನ್ನು ಗಮನಿಸಿದ ಶಾಲೆ ಶಿಕ್ಷಕರು ಅಸ್ವಸ್ಥ ಮಕ್ಕಳನ್ನು ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಕೆಲ ಮಕ್ಕಳು ಪಾಲಕರು ತಮ್ಮ ಮಕ್ಕಳು ಅಸ್ವಸ್ಥಗೊಳ್ಳುತ್ತಿರುವ ಸುದ್ದಿ ಅರಿತು ಸರ್ಕಾರಿ
ಆಸ್ಪತ್ರೆಗೆ ಸಂಪರ್ಕಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಇನ್ನೂ ಕೆಲವು ಮಕ್ಕಳ ಪಾಲಕರು ದಿನದ ಕೆಲಸದ ಮೇಲೆ ಹೊರಗಡೆ ಹೋಗಿದ್ದರಿಂದ ಅಸ್ವಸ್ಥ ಮಕ್ಕಳು ಮನೆ ಬಾಗಿಲಿಗೆ ಮಲಗಿದ್ದಾರೆ. ಇದನ್ನು ಗಮನಿಸಿದ ಬಡಾವಣೆ ಜನರು 108 ಆಂಬ್ಯುಲೆನ್ಸ್ ಮೂಲಕ ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಡಾ| ವಿಜಯಲಕ್ಷ್ಮೀ ಹಜೇರಿ, ಡಾ| ಎಂ.ಬಿ. ಸೀಂಗಲ್ ಮತ್ತು ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಇನ್ನೂ ಕೆಲ ಅಸ್ವಸ್ಥ ಮಕ್ಕಳು ಚೋಕ್ಕಾವಿಯಲ್ಲೇ ಉಳಿದಿದ್ದು ತಾಲೂಕು ವೈದ್ಯಾಧಿಕಾರಿ ಡಾ| ಸತೀಶ ತಿವಾರಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ| ಸಂಪತ್ತಕುಮಾರ ಗುಣಾರಿ ತಮ್ಮ ತಂಡದೊಂದಿಗೆ ಗ್ರಾಮಕ್ಕೆ ತೆರಳಿ ಎಲ್ಲ ಮಕ್ಕಳಿಗೆ ಚಿಕಿತ್ಸೆ ನೀಡಿದಾರೆ. ಪಾಲಕರ ಆಕ್ರೋಶ: ಆನೆಕಾಲು ಮಾತ್ರೆ ನುಂಗಿ ನಮ್ಮ ಮಕ್ಕಳು ಅಸ್ವಸ್ಥರಾಗಿದ್ದು ಹೆಚ್ಚು ಕಮ್ಮಿಯಾದರೆ ಯಾರು ಹೊಣೆ. ಇಂತಹ ಮಾತ್ರೆಗಳನ್ನು ಮಕ್ಕಳಿಗೆ ನುಂಗಿಸುವುದು ತರವಲ್ಲ ಎಂದು ಪಾಲಕರು ಹರಿಹಾಯ್ದರು. ಈ ವೇಳೆ ಡಾ|ಸತೀಶ ತಿವಾರಿ ಮಕ್ಕಳ ಜೀವಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಪಾಲಕ ಮತ್ತು ಗ್ರಾಮಸ್ಥರಿಗೆ ಸಮಾಧಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.