ಲಾರಿಯಲ್ಲಿ 5 ಲಕ್ಷ ಮೌಲ್ಯದ ಅಫೀಮು ಸಾಗಾಟ: ಚಾಲಕನನ್ನು ವಶಕ್ಕೆ ಪಡೆದ ಅಬಕಾರಿ ಅಧಿಕಾರಿಗಳು
Team Udayavani, Oct 9, 2020, 8:07 PM IST
ವಿಜಯಪುರ: ಜಿಲ್ಲೆಯ ಅಬಕಾರಿ ಅಧಿಕಾರಿಗಳು ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿನ ರಾಷ್ಟ್ರೀಯ ಹೆದ್ದಾರಿ ಬಳಿ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಅಫೀಮು ಸಾಗಿಸುತ್ತಿದ್ದ ಲಾರಿಯನ್ನು ತಡೆದು ವಶಕ್ಕೆ ಪಡೆದು, ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದ್ವಿಚಕ್ರ ವಾಹನಗಳ ಬಿಡಿಭಾಗಗಳನ್ನು ಹೊತ್ತು ರಾಜಸ್ಥಾನದಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿಯನ್ನು ಚಡಚಣ ತಾಲೂಕಿನ ಶಿರಾಡೂಣ ಬಳಿ ತಡೆದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪರಿಶೀಲಿಸಿದಾಗ ಲಾರಿಯಲ್ಲಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ 12.05 ಕೆ.ಜಿ ತೂಕದ ಅಫೀಮು ಹಾಗೂ 30 ಲಕ್ಷ ರೂ. ಮೌಲ್ಯದ ಲಾರಿಯನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ಚಾಲಕನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ವಿಜಯಪುರ ಅಬಕಾರಿ ಆಯುಕ್ತ ಅರುಣ ಕಮ್ಮಾರ ಅವರ ನೇತೃತ್ವದಲ್ಲಿ ಚಡಚಣ ಶಾಖೆಯ ಅಬಕಾರಿ ಪಿ.ಎಸ್.ಐ ಸದಾಶಿವ ಕೊರ್ತಿ, ಅಬಕಾರಿ ಅಧಿಕಾರಿ ಪಡಲಸಗಿ, ಗಾರ್ಡಗಳಾದ ಅಶೋಕ ಬಿರಾದಾರ, ಎ.ಎಸ್.ಗೊಣಸಗಿ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು ಎಂದು ಅಬಕಾರಿ ಜಂಟಿ ಆಯುಕ್ತರಾದ ಡಾ.ವೈ.ಮಂಜುನಾಥ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.