ಎರಡು ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 58 ಲಕ್ಷ ರೂ. ವಶ
Team Udayavani, Mar 25, 2023, 3:07 PM IST
ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ದೇವಣಗಾಂವ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ದಾಖಲೆ ಇಲ್ಲದ ಕೆಎಲ್ 56 ಪಿ 1919 ಸಂಖ್ಯೆಯ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 9 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.
ದಾಖಲೆ ಇಲ್ಲದ ಕಾರಣ ಪೊಲೀಸರು ಸದರಿ ನಗದು ಹಣ ಜಪ್ತಿ ಮಾಡಿದ್ದಾರೆ. ಈ ಕುರಿತು ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದೆಡೆ ಇಂಡಿ ತಾಲೂಕಿನ ಧೂಳಖೇಡ ಚೆಕ್ ಪೋಸ್ಟಿನಲ್ಲೂ ದಾಖಲೆ ಇಲ್ಲದ ನಗದು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರದ ಸೋಲಾಪೂರ ದಿಂದ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣಕ್ಕೆ 407 ಕ್ಯಾಂಟರ್ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 49 ಲಕ್ಷ ರೂ. ನಗದು ಪತ್ತೆಯಾಗಿದೆ.
ಇದನ್ನೂ ಓದಿ: ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ
ಸದರಿ ವಾಹನ ಚಾಲಕ ತನ್ನ ಸೀಟ್ ಕೆಳಭಾಗದಲ್ಲಿ ಬ್ಯಾಗಿನಲ್ಲಿ ಇಟ್ಟುಕೊಂಡಿದ್ದ. ಆತನ ಶಂಕ್ಯಾಸ್ಪದ ವರ್ತನೆಯಿಂದ ಅನುಮಾನಗೊಂಡ ಇಂಡಿ ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ತಪಾಸಣೆ ನಡೆಸಿದಾಗ ದಾಖಲೆ ಇಲ್ಲದ 49 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.
ಸದರಿ ಹಣ ಇಂಡಿ ಪಟ್ಟಣದ ಎಪಿಎಂಸಿ ವರ್ತಕರೊಬ್ಬರಿಗೆ ಸೇರಿದ ದಾಖಲೆ ಇಲ್ಲದೆ ನಗದು ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ಚುನಾವಣೆ ಆಯೋಗದ ನಿರ್ದೇಶನದಂತೆ ಈ ಕುರತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.