ರೈತರ ಅನುಕೂಲಕ್ಕಾಗಿ ಕ್ವಿಂಟಲ್ ತೊಗರಿಗೆ 6 ಸಾವಿರ ರೂ.
ಖರೀದಿ ಕೇಂದ್ರದಲ್ಲಿ ಸರದಿ ಪದ್ಧತಿಯಂತೆ ತೊಗರಿ ಖರೀದಿಸಬೇಕು.
Team Udayavani, Jan 22, 2021, 5:13 PM IST
ಮುದ್ದೇಬಿಹಾಳ: ಪ್ರತಿ ಕ್ವಿಂಟಲ್ ತೊಗರಿಗೆ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ದರವಿದ್ದರೂ ಸರ್ಕಾರ ರೈತರ ಅನುಕೂಲಕ್ಕಾಗಿ ಕ್ವಿಂಟಲ್‌ಗೆ 6000 ರೂ. ಬೆಂಬಲ ಬೆಲೆಯಡಿ ತೊಗರಿ ಖರೀದಿಸುತ್ತಿದ್ದು ಎಲ್ಲರೂ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ ಹೇಳಿದರು.
ಹಿರೇಮುರಾಳ ಗ್ರಾಮದಲ್ಲಿ ಪಿಕೆಪಿಎಸ್‌ನಡಿ ತೊಗರಿ ಖರೀದಿಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ಹಿರೇಮುರಾಳ ಪಿಕೆಪಿಎಸ್ ಅಡಿ
650ರವರೆಗೆ ರೈತರು ನೋಂದಣಿ ಮಾಡಿಕೊಂಡಿರುವುದು ಉತ್ತಮ ಬೆಳವಣಿಗೆ. ಖರೀದಿ ಕೇಂದ್ರದಲ್ಲಿ ಸರದಿ ಪದ್ಧತಿಯಂತೆ ತೊಗರಿ ಖರೀದಿಸಬೇಕು.
ರೈತರಲ್ಲಿ ಗೊಂದಲ ಮೂಡಿಸಬಾರದು ಎಂದು ಸಲಹೆ ನೀಡಿದರು. ಪಿಕೆಪಿಎಸ್ ಅಧ್ಯಕ್ಷ ಬಸವಂತ್ರಾಯ ಭೋವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗಬೇಕಿದೆ. ರೈತನಿಗೆ ತಾನು ಬೆಳೆದ ಬೆಳೆ ಮೇಲೆ ಬೆಲೆ ನಿಗದಿ ಮಾಡುವುದು ಸಾಧ್ಯವಿಲ್ಲ. ಇದನ್ನರಿತಿರುವ ಪ್ರಧಾನಿ
ನರೇಂದ್ರ ಮೋದಿ ಬೆಂಬಲ ಬೆಲೆ ಘೋಷಿಸಿ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಮುಂದಾಗಿದ್ದಾರೆ. ರೈತರ ಖಾತೆಗೆ ಹಣ ಜಮಾ ಮಾಡಿ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಪಿಕೆಪಿಎಸ್ ಉಪಾಧ್ಯಕ್ಷ ನಿಂಗಣ್ಣ ರಾಮೋಡಗಿ, ನಾಗರಾಜ ರಾಮೋಡಗಿ, ಮಾನಸಿಂಗ್ ರಾಠೊಡ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಬಸಲಿಂಗಪ್ಪ ಮೇಟಿ, ಎಸ್.ಎಂ. ಯಾಳವಾರ, ಬಸ್ಸು ಜೈನಾಪುರ, ರಮೇಶ ಇಂಗಳೇಶ್ವರ, ಸಾಬಣ್ಣ ವಗ್ಗರ, ಎ.ಎನ್. ನಾಡಗೌಡ್ರ, ಶೇಖಪ್ಪ ನಾರಾಯಣಪುರ ಇತರರಿದ್ದರು. ಪಿಕೆಪಿಎಸ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಬಿ. ಬಾಗೇವಾಡಿ ಸ್ವಾಗತಿಸಿದರು. ರುದ್ರು ರಾಮೋಡಗಿ ನಿರೂಪಿಸಿದರು. ಗ್ರಾಪಂ ಸದಸ್ಯ ಮಾರುತಿ ಭೋವಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.