ಬಡ ಮಕ್ಕಳ ವೈದ್ಯಕೀಯ ಶಿಕ್ಷಣಕ್ಕೆ 8 ಲಕ್ಷ ರೂ. ನೆರವು ನೀಡಿದ ಎಂ.ಬಿ.ಪಾಟೀಲ್

Team Udayavani, Dec 2, 2022, 4:10 PM IST

1-asdsadas

ವಿಜಯಪುರ : ನೀಟ್ ಪಾಸಾಗಿ ಸರಕಾರಿ ಕೋಟಾದಲ್ಲಿ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ಸೀಟು ಸಿಕ್ಕಿದ್ದರೂ ಆರ್ಥಿಕ ಸಂಕಷ್ಟದಿಂದಾಗಿ ಪ್ರವೇಶ ಪಡೆಯಲು ಪರದಾಡುತ್ತಿದ್ದ ರೈತ ಮತ್ತು ಕೃಷಿ ಕಾರ್ಮಿಕನ ಮಕ್ಕಳಿಗೆ ಹಣಕಾಸು ನೆರವು ನೀಡುವ ಮೂಲಕ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಬಿಎಲ್ ಡಿಇ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ್ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹುಬನೂರ ಗ್ರಾಮದ ಚನಬಸು ಮಾಳಿ ಮತ್ತು ಸಿದ್ಧಾಪುರ ಗ್ರಾಮದ ಶೆಮ್ಮಿರ ಜಾತಗಾರ ಎಂಬಿಬಿಎಸ್ ಪ್ರವೇಶ ಪಡೆಯಲು ಹಣಕಾಸಿನ ತೊಂದರೆಯಿಂದಾಗಿ ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರೂ ವಿದ್ಯಾರ್ಥಿಗಳ ಪೋಷಕರು ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿ ತಮ್ಮ ಅಳಲು ತೊಡಿಕೊಂಡರು. ಆಗ ಕೂಡಲೇ ಸ್ಪಂದಿಸಿದ ಶಾಸಕರು ವಿದ್ಯಾರ್ಥಿಗಳ ಪ್ರವೇಶಕ್ಕೆ ಅಗತ್ಯವಿರುವ ಶುಲ್ಕವನ್ನು ನೀಡುವ ಮೂಲಕ ನೆರವಾಗಿದ್ದಾರೆ.

ಇಂದು ತಮ್ಮ ನಿವಾಸಕ್ಕೆ ಆಗಮಿಸಿದ ಇಬ್ಬರೂ ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್. ಮೊದಲ ವರ್ಷದ ಕಾಲೇಜು ಮತ್ತು ಹಾಸ್ಟೇಲು ಶುಲ್ಕ ಮತ್ತೀತರ ವೆಚ್ಚ ಸೇರಿದಂತೆ ಇಬ್ಬರು ವಿದ್ಯಾರ್ಥಿಗಳಿಗೆ ತಲಾ ರೂ. 4,07,196 ಮೌಲ್ಯದ ಚೆಕ್ ವಿತರಿಸಿದರು. ಅಲ್ಲದೆ, ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಬಸವನಾಡಿನ ಹೆಮ್ಮೆಯನ್ನು ಎತ್ತಿ ಹಿಡಿಯುವಂತೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಚನಬಸು ತಂದೆ ಆನಂದ ಮಾಳಿ, ಶೆಮ್ಮಿರ ತಂದೆ ಮೆಹಬೂಬ ಜಾತಗಾರ, ಬಿಎಲ್ ಡಿಇ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ಆರ್.ವಿ.ಕುಲಕರ್ಣಿ ಮತ್ತು ಬಿಎಲ್ ಡಿಇ ಮುಖ್ಯ ಆಡಳಿತಾಧಿಕಾರಿ ಆರ್.ಬಿ.ಕೊಟ್ನಾಳ ಉಪಸ್ಥಿತರಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಹುಬನೂರಿನ ವಿದ್ಯಾರ್ಥಿ ಚನಬಸು ಮಾಳಿ, ನನ್ನ ತಂದೆ ಆನಂದ ಮಾಳಿ ಬಡ ರೈತರಾಗಿದ್ದಾರೆ. ನೀಟ್ ಪಾಸಾದರೂ ಹಣದ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮದ ಮುಖಂಡ ಪ್ರಶಾಂತ ಜಂಡೆ ಮತ್ತು ನಮ್ಮ ತಂದೆ ಶಾಸಕರನ್ನು ಭೇಟಿಯಾದಾಗ ಕೂಡಲೇ ಸ್ಪಂದಿಸಿದ್ದಾರೆ. ಕಷ್ಟಪಟ್ಟು ಸರಕಾರಿ ಶಾಲೆಯಲ್ಲಿ ಓದಿ ವೈದ್ಯನಾಗಬೇಕೆಂಬ ಕನಸು ಕಂಡಿದ್ದ ನನಗೆ ಸುಳ್ಯದ ವೆಂಕಟೇಶ್ವರಗೌಡ ಮೆಡಿಕಲ್ ಕಾಲೇಜಿನಲ್ಲಿ ಸೀಟು ಸಿಕ್ಕಿತ್ತು. ಆದರೆ ಹಣದ ಸಮಸ್ಯೆ ಹಿನ್ನೆಲೆಯಲ್ಲಿ ಪರದಾಡುತ್ತಿದ್ದ ನಮಗೆ ಆಪತ್ಭಾಂಧವರಾಗಿದ್ದಾರೆ. ವೈದ್ಯನಾಗಬೇಕೆಂಬ ನನ್ನ ಕನಸಿಗೆ ಎಂ.ಬಿ.ಪಾಟೀಲರು ದೇವರ ರೂಪದಲ್ಲಿ ಬಂದು ನೆರವಾಗಿದ್ದಾರೆ. ಈಗ ನನ್ನ ಕನಸು ನನಸಾಗುತ್ತಿದೆ. ಶಾಸಕರು ಮೊದಲ ಕಂತಿನ ಹಣ ರೂ. 4 ಲಕ್ಷ ಚೆಕ್ ನೀಡಿದ್ದು ಕೋರ್ಸ್ ಮುಗಿಸಲು ಅಗತ್ಯವಾಗಿರುವ ಉಳಿದ ಹಣವನ್ನು ಕೂಡ ಹಂತಹಂತವಾಗಿ ನೀಡುವುದಾಗಿ ತಿಳಿಸಿದರು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿ ಶಮ್ಮಿರ ಜಾತಗಾರ ಮಾತನಾಡಿ, ಎಸ್ ಎಸ್ಎಲ್ ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಸರಕಾರಿ ಶಾಲೆಯಲ್ಲಿ ಓದಿರುವ ನಾನು ವೈದ್ಯನಾಗುವ ಕನಸು ಕಂಡಿದ್ದೆ ನಮ್ಮ ತಂದೆ ತಾಯಿ ಕೃಷಿ ಕಾರ್ಮಿಕರಾಗಿದ್ದು ಉದ್ಯೋಗ ಅರಸಿ ಮಹಾರಾಷ್ಟ್ರಕ್ಕೆ ಕಬ್ಬು ಕಡಿಯಲು ಗುಳೆ ಹೋಗುತ್ತಾರೆ. ನೀಟ್ ಪಾಸಾದ ನನಗೆ ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಸ್ ಸೀಟು ಸಿಕ್ಕಿತ್ತು. ಆದರೆ, ಬಡ ಕುಟುಂಬಕ್ಕೆ ಸೇರಿರುವ ನಮಗೆ ಹಣ ಹೊಂದಿಸುವುದು ಕಷ್ಟವಾಗಿತ್ತು. ಈಗ ಎಂ.ಬಿ.ಪಾಟೀಲರು ನೇರವಾಗುವ ಮೂಲಕ ನನ್ನ ಕನಸನ್ನು ನನಸು ಮಾಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿ ತಂದೆ ಮೆಹಬೂಬ ಜಾತಗಾರ ಮಾತನಾಡಿ, ಕೃಷಿ ಕಾರ್ಮಿಕನಾಗಿರುವ ನನಗೆ ಮಗನನ್ನು ವೈದ್ಯನನ್ನಾಗಿ ಮಾಡಲು ಸಾಧ್ಯವಿರಲಿಲ್ಲ. ನಮ್ಮ ಸಂಕಷ್ಟಕ್ಕೆ ನೆರವಾಗುವ ಮೂಲಕ ಎಂ.ಬಿ.ಪಾಟೀಲರು ಎಂದೂ ಮರೆಯದ ದೊಡ್ಡ ಉಪಕಾರ ಮಾಡಿದ್ದಾರೆ. ಜೀವನಪೂರ್ತಿ ಅವರಿಗೆ ಋಣಿಯಾಗಿರುತ್ತೇವೆ ಎಂದು ಆನಂದಭಾಷ್ಟ ಸುರಿಸಿದರು.

ಈ ಹಿಂದೆಯೂ ಹಲವಾರು ಜನರಿಗೆ ಎಂಬಿಬಿ ಎಸ್ ಓದಲು ಸಹಾಯ ಮಾಡಿರುವ ಎಂ.ಬಿ.ಪಾಟೀಲರು ಈಗ ಮತ್ತೆ ಇಬ್ಬರು ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.