ಭಾರಿ ಮಳೆಗೆ ತುಂಬಿ ಹರಿದ ಹಳ್ಳ -ಕೊಳ್ಳ
Team Udayavani, Jul 31, 2022, 5:40 PM IST
ಆಲಮೇಲ: ಆಲಮೇಲ ಭಾಗದಲ್ಲಿ ಶುಕ್ರವಾರ ಮಧ್ಯರಾತ್ರಿ ಧಾರಾಕಾರ ಮಳೆಯಾಗಿದ್ದು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಗುರುವಾರ ಸಂಜೆ ಒಂದು ಗಂಟೆ ಭಾರಿ ಮಳೆಯಾಗಿದ್ದರೆ ಮತ್ತೆ ಶುಕ್ರವಾರ ಮಧ್ಯರಾತ್ರಿ ಅಪಾರ ಪ್ರಮಾಣದ ಮಳೆಯಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಆಲಮೇಲ ತಾಲೂಕಿನ ದೇವಣಗಾಂವ ಪಂಚಾಯಿತಿ ವ್ಯಾಪ್ತಿಯಲ್ಲಿ 71 ಮೀ.ಮೀ, ದೇವರನಾವದಗಿ 50 ಮಿ.ಮೀ, ಬಮ್ಮನಹಳ್ಳಿ 26.5 ಮಿ.ಮೀ, ಮಲಘಾಣ 48.5 ಮಿ.ಮೀ, ಮೋರಟಗಿ 49.5 ಮಿ.ಮೀ, ಹಿಕ್ಕನಗುತ್ತಿ, 37.5 ಮಿ.ಮೀ, ಕಡಣಿ 37.5 ಮಿ.ಮೀ, ರಾಮನಹಳ್ಳಿ 50.5 ಮಿ.ಮೀ, ಕೊರಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ 2.5 ಮಿ.ಮೀಟರ್ ಮಳೆಯಾಗಿದೆ. ಆಲಮೇಲ ಭಾಗದಲ್ಲಿ ಮುಂಗಾರು ಮಳೆ ತಡವಾಗಿ ಆರಂಭವಾಗಿದ್ದು ಕಳೆದ ಒಂದು ವಾರ ಹಿಂದೆ ಜಿಟಿ ಜಿಟಿ ಮಳೆಯಿಂದ ಕೃಷಿ ಚಟುವಟಿಕೆಗೆ ಅನುಕೂಲವಾಗಿತ್ತು. ಗುರುವಾರ ಮತ್ತು ಶುಕ್ರವಾರ ಅಧಿಕ ಪ್ರಮಾಣದಲ್ಲಿ ಮಳೆಯಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.
ಎರಡು ದಿನ ಸುರಿದ ಮಳೆಗೆ ರೈತರು ಸಂತಸಗೊಂಡಿದ್ದಾರೆ. ಆದರೆ ಬೇಸಿಗೆಯಲ್ಲಿ ಕೊಳವೆ ಬಾವಿಯಲ್ಲಿನ ನೀರು ಬತ್ತಿ ಹೋಗಿದ್ದು ಅದಕ್ಕೆ ನೀರು ಬರಬೇಕು ಎಂದರೆ ಹಳ್ಳ ಕೊಳ್ಳಗಳು ಹರಿಯುವಂತೆ ಹೆಚ್ಚಿನ ಮಳೆ ಅವಶ್ಯಕತೆ ಇದೆ. ಕಳೆದ ಒಂದು ವಾರದಿಂದ ಆರಂಭವಾದ ಜಿಟಿ ಜಿಟಿ ಮಳೆಯಿಂದ ಹತ್ತಿ, ಕಬ್ಬು, ಕಲ್ಲಂಗಡಿ, ಪಪ್ಪಾಯಿ, ಲಿಂಬೆ, ದಾಳಿಂಬೆ ಸೇರಿದಂತೆ ಅನೇಕ ಬೆಳೆಗಳಿಗೆ ಜೀವಕಳೆ ಬಂದಿದೆ. ಈ ಮಳೆಯ ಹದ ಚೆನ್ನಾಗಿ ಆದರೆ ಹೆಸರು, ಉದ್ದು, ತೊಗರಿ, ಹತ್ತಿ, ಕಬ್ಬು ನಾಟಿ ಮಾಡುವ ರೈತರಿಗೆ ಆಸರೆಯಾಗಲಿದೆ. ಜಿಡಿ ಮಳೆ ಕಡಿಮೆಯಾಗಿ ಬಿಸಿಲು, ಗಾಳಿ ಬಿದ್ದರೆ ಬೀಜ ಬಿತ್ತಲು ಅನುಕೂಲವಾಗುತ್ತದೆ ಎನ್ನುತ್ತಾರೆ ರೈತರು. ಮಳೆ ಮತ್ತು ತಂಪಾದ ಗಾಳಿ ಹೊಡೆತಕ್ಕೆ ಜನರಿಗೆ ಮಳೆಗಾಲದ ಕಾಯಿಲೆಗಳು ಬರುವ ಆತಂಕ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.