ಏಡ್ಸ್‌ ನಿಯಂತ್ರಣಕ್ಕೆ ಸರ್ಕಾರಿ ಯೋಜನೆ ಸಹಕಾರಿ

ಚಿಕಿತ್ಸೆಗಳ ಬಗ್ಗೆ ಸರಿಯಾದ ಅರಿವು, ಮಾಹಿತಿ ಲಭ್ಯವಾಗುತ್ತಿದೆ.

Team Udayavani, Dec 2, 2021, 6:06 PM IST

ಏಡ್ಸ್‌ ನಿಯಂತ್ರಣಕ್ಕೆ ಸರ್ಕಾರಿ ಯೋಜನೆ ಸಹಕಾರಿ

ವಿಜಯಪುರ: ಜಾಗತಿಕ ಸಮಸ್ಯೆಯಾಗಿ ಕಾಡುತ್ತಿರುವ ಎಚ್‌ಐವಿ ಸೋಂಕು ಹಾಗೂ ಏಡ್ಸ್‌ ರೋಗ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕಿದೆ. ಸರ್ಕಾರ ಈ ಮಾರಕ ರೋಗ ಪ್ರಮಾಣ ಕುಗ್ಗಿಸಲು ರೂಪಿಸಿರುವ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಂಡಲ್ಲಿ ಸೋಂಕು ಹರಡುವಿಕೆ ತಡೆಯಲು ಸಾಧ್ಯ ಎಂದು ಜಿಲ್ಲಾ ಧಿಕಾರಿ ಸುನೀಲಕುಮಾರ ಹೇಳಿದರು.

ಬುಧವಾರ ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ನಿಯಂತ್ರಣ ಘಟಕ, ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್‌ಎಸ್‌ಎಸ್‌ ಘಟಕಗಳು, ರೆಡ್‌ ರಿಬ್ಬನ್‌ ಕ್ಲಬ್‌ಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್‌ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು, ಸೋಂಕಿನ ಬಗ್ಗೆ ಸರ್ಕಾರ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಮೂಲಕ ಇತ್ತೀಚಿಗೆ ಇದರ ಸಂಖ್ಯೆಯಲ್ಲಿ ಬಹಳ ಇಳಿಮುಖ ಕಂಡು ಬರುತ್ತಿದೆ ಎಂದರು.

ಪ್ರಸಕ್ತ ವರ್ಷದಲ್ಲಿ ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್‌ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ ಎಂಬ ಘೋಷ ವಾಕ್ಯದೊಂದಿಗೆ ಏಡ್ಸ್‌ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಏಡ್ಸ್‌ ರೋಗ ನಿಯಂತ್ರಿಸುವಲ್ಲಿ ಸರ್ಕಾರ ರೂಪಿಸಿರುವ ಅನೇಕ ಕಾರ್ಯಕ್ರಮಗಳು ಸಕಾರಾತ್ಮ ಪರಿಣಾಮ ನೀಡುತ್ತಿವೆ. ಇದರ ಬಗೆಗಿನ ಸೂಕ್ತ ಅರಿವು ಹಾಗೂ ಮಾಹಿತಿಯಿಂದಾಗಿ ಸೋಂಕಿನ ಪ್ರಮಾಣದಲ್ಲಿ ಗಣನೀಯ ಇಳಿಮುಖ ಕಂಡು ಬರುತ್ತಿದೆ. ಇದರ ಬಗ್ಗೆ ಜನರಲ್ಲೂ ಸರಿಯಾದ ಅರಿವು ಉಂಟಾಗುತ್ತಿದ್ದು, ಈಚೆಗೆ ಸೋಂಕಿತ ಗರ್ಭಿಣಿಯರಿಂದ ಅವರ ಮಕ್ಕಳಿಗೂ ಹರಡುತ್ತಿಲ್ಲ ಎಂದು ವಿವರಿಸಿದರು.

ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಪ್ರಾಮಾಣಿಕ ಪ್ರಯತ್ನದಿಂದಾಗಿ ಜನರಿಗೆ ಇದರ ಬಗ್ಗೆ ಬಹಳ ಜಾಗೃತಿ ಉಂಟಾಗಿದೆ. ಜನರಿಗೆ ಈ ರೋಗದ ಕಾರಣ ಹಾಗೂ ಚಿಕಿತ್ಸೆಗಳ ಬಗ್ಗೆ ಸರಿಯಾದ ಅರಿವು, ಮಾಹಿತಿ ಲಭ್ಯವಾಗುತ್ತಿದೆ. ಸೋಂಕಿತರು ಇದರ ಬಗ್ಗೆ ಈ ಹಿಂದೆ ಸಮಾಜದಲ್ಲಿದ್ದ ಸಂಕೋಚ ಪರಿಸ್ಥಿತಿ ಈಗಿಲ್ಲ. ಧೈರ್ಯದಿಂದ ಮುಂದೆ ಬಂದು ಚಿಕಿತ್ಸೆ ಪಡೆದು, ಆರೋಗ್ಯಯುತ ಜೀವನ ಶೈಲಿಯಿಂದ ತಮ್ಮ ಜೀವನಮಟ್ಟ ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ಅದರಂತೆ ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಸಂಘ, ಸಂಸ್ಥೆಗಳು, ವಾಹನಗಳ ಚಾಲಕರು ಸೇರಿದಂತೆ ಪತ್ತೆಯಿಂದ ಹೊರಗುಳಿದಿರುವ ಸೋಂಕಿತರನ್ನು ಗುರುತಿಸಿ, ಅವರಿಗೆ ಸೂಕ್ತ ಅರಿವು ಹಾಗೂ ಚಿಕಿತ್ಸೆ ನೀಡುವ ಕೆಲಸ ಮಾಡಬೇಕು. ಇದರಿಂದ ಸೋಂಕು ಅವರ ಕುಟುಂಬದವರಿಗೆ ಹರಡದಂತೆ ನೋಡಿಕೊಳ್ಳಬಹುದು. ಸೋಂಕಿತರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಕೆಲಸವೂ ಆಗಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಏಡ್ಸ್‌ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉತ್ತಮ ಕಾರ್ಯ ಮಾಡಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಂಘ, ಸಂಸ್ಥೆಗಳ ಪದಾ ಧಿಕಾರಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಗೋವಿಂದರೆಡ್ಡಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಜಾನಪದ ಕಲಾವಿದ ಸಿದ್ದಪ್ಪ ಬಿದರಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಎಸ್‌.ಎಲ್‌. ಲಕ್ಕಣ್ಣವರ, ಡಾ| ರಾಜೇಶ ಹೊನ್ನುಟಗಿ, ಪೀಟರ್‌ ಅಲೆಕ್ಸಾಂಡರ್‌,ಗಂಗಯ್ಯ ಹಿರೇಮಠ, ಜಿಲ್ಲಾ ಏಡ್ಸ್‌ ಮತ್ತು ಕ್ಷಯರೋಗ ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ| ಈರಣ್ಣ ಧಾರವಾಡಕರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Vijayapura: Protest against Waqf led by many Seers

Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

Waqf Issue:  Must Be Get Protected from Land Terrorism, Land Jihad: Shobha Karandlaje

Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ

Jammer

Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್‌

Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ

Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.