ಸಿಂದಗಿ ಅಪ್ರಾಪ್ತೆ ಅತ್ಯಾಚಾರ ಆರೋಪಿ ಸಾವಿನ ಪ್ರಕರಣ: ಸಿಐಡಿ ತನಿಖೆಗೆ ಶಿಫಾರಸು
Team Udayavani, Aug 29, 2021, 1:40 PM IST
ವಿಜಯಪುರ: ಸಿಂದಗಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆ ಅತ್ಯಾಚಾರ ಆರೋಪಿ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಶಿಫಾರಸು ಮಾಡಲಾಗಿದೆ.
ಪ್ರಕರಣದ ಕುರಿತು ಮಾಧ್ಯಮಗಳಿಗೆ ವಿವರ ನೀಡಿರುವ ಎಸ್ಪಿ ಆನಂದಕುಮಾರ, ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಕುರಿತು ಆರೋಪಿ ದೇವೇಂದ್ರ ಸಂಗೋಗಿ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿಯಲ್ಲಿ ದೂರು ದಾಖಲಾಗಿತ್ತು.
ಸದರಿ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಶನಿವಾರ ತಡರಾತ್ರಿ ಠಾಣೆಗೆ ಕರೆ ತಂದಿದ್ದರು. ಭಾನುವಾರ ಬೆಳಿಗ್ಗೆ ಶೌಚಾಲಯಕ್ಕೆ ಹೋದಾಗ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಆರೋಪಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವಿವರಿಸಿದರು.
ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು?
ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಹೀಗಾಗಿ ಸದರಿ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿ ತನಿಖಾ ಸಂಸ್ಥೆಗೆ ವಹಿಸಲು ಶಿಫಾರಸು ಮಾಡಲಾಗುತ್ತದೆ ಎಂದು ಎಸ್ಪಿ ವಿವರಿಸಿದರು.
ಇದಲ್ಲದೇ ಮೃತನ ಪತ್ನಿ, ತಾಯಿ ಸೇರಿದಂತೆ ಕುಟುಂಬದ ಸದಸ್ಯರು ಸಿಂದಗಿ ಪೊಲೀಸ್ ಠಾಣೆ ಎದುರು ಧರಣಿ ಆರಂಭಿಸಿದ್ದಾರೆ. ಇಂಥ ಪ್ರಕರಣದಲ್ಲಿ ಇದೆಲ್ಲ ಸಾಮಾನ್ಯ. ಧರಣಿ ನಿರತರು ಕೂಡಲೇ ಪ್ರತಿಭಟನೆ ಬಿಡಬೇಕು. ಪ್ರಕರಣದ ಸಮಗ್ರ ತನಿಖೆ ನಡೆಸಲು ಮುಕ್ತ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.