ಕಾರ್ಯಕರ್ತರೇ ಪಕ್ಷದ ಭದ್ರ ಬುನಾದಿ: ಮನಗೂಳಿ
Team Udayavani, Sep 14, 2017, 4:53 PM IST
ಸಿಂದಗಿ: ಕಾರ್ಯಕರ್ತರು ಪಕ್ಷದ ಭದ್ರ ಬುನಾದಿ ಮತ್ತು ಶಕ್ತಿ ಎಂದು ಜೆಡಿಎಸ್ ಯುವ ಧುರೀಣ ಅಶೋಕ ಮನಗೂಳಿ ಹೇಳಿದರು.
ತಾಲೂಕಿನ ಗಣಿಹಾರ ಗ್ರಾಮದಲ್ಲಿ ಜೆಡಿಎಸ್ ತಾಲೂಕು ಘಟಕ ಹಮ್ಮಿಕೊಂಡಿದ್ದ ಪಕ್ಷದ ಪ್ರಾಥಮಿಕ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಕ್ಷದ ಕಾರ್ಯಕರ್ತರು ತಳಮಟ್ಟದಿಂದ ಸಂಘಟಿತರಾಗಬೇಕು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಜೆಡಿಎಸ್ ಪಕ್ಷವನ್ನು ಬಲಪಡಿಸಲು ಪಕ್ಷದ ಕಾರ್ಯಕರ್ತರು ಸಂಘಟಿತರಾಗಬೇಕು.ಪ್ರತಿ ಬೂತ ಮಟ್ಟದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು ಒಂದಿಲ್ಲ ಒಂದು ಹಗರಣದಲ್ಲಿ ಸಿಲುಕುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಭಾಗ್ಯಗಳ ಯೋಜನೆ ಮಾಡಿದೆ. ಆದರೆ ಈ ಯೋಜನೆಗಳಿಂದ ಯಾರ ಭಾಗ್ಯ ತೆರೆದಿದೆ ಎಂಬುದು ಅರ್ಥವಾಗುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿ ವಿಫಲವಾಗಿದೆ.
ಅವೈಜ್ಞಾನಿಕವಾಗಿ ನೋಟುಗಳನ್ನು ಬ್ಯಾನ್ ಮಾಡಿದ್ದು, ಜಿಎಸ್‌ಟಿ ಹೀಗೆ ಹತ್ತು ಹಲವು ಯೋಜನೆಗಳಿಂದ ಜನಸಾಮಾನ್ಯರು ಹಾಗೂ ರೈತರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿಯಿಂದ ಜನತೆ ಬೇಸತ್ತಿದ್ದಾರೆ ಎಂದರು.
ರಾಜ್ಯದಲ್ಲಿ ರೈತರು ದೇಶದ ಬೆನ್ನೆಲುಬು ಎಂಬ ಸತ್ಯ ಅರಿತ ಜೆಡಿಎಸ್ ನಾಯಕರು ರೈತರಿಗಾಗಿ ಶ್ರಮಿಸಿದ್ದಾರೆ. ಅಲ್ಲದೇ ಸಮಾಜದಲ್ಲಿ ತುಳಿತಕ್ಕೊಳಗಾದ ದೀನ-ದಲಿತರ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ.ಅವರೆಲ್ಲರ ಆಶೀರ್ವಾದದಿಂದ ಮತ್ತೆ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಹುತ ಸಾಧಿಸಿ ಸರಕಾರ ರಚನೆ ಮಾಡಿ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿಗಳಾಗುತ್ತಾರೆ ಎಂದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಕೈಗೊಂಡ ಅಭಿವೃದ್ಧಿ ಯೋಜನೆಗಳು ಹಾಗೂ ಕೇಂದ್ರ ಬಿಜೆಪಿ ಸರಕಾರ ಹಾಗೂ ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯಗಳ ಕುರಿತು ಮತದಾರರ ಮನೆ ಮನೆಗೆ ತಲುಪಿಸುವ
ಕಾರ್ಯ ಪಕ್ಷದ ಕಾರ್ಯಕರ್ತರು ಮಾಡಬೇಕು. ಹೆಚ್ಚು ಹೆಚ್ಚು ಪಕ್ಷದ ಸದಸ್ಯತ್ವ ಅಭಿಯಾನ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಮಾಡಿಕೊಳ್ಳಲಾಯಿತು. ತಾಲೂಕಾಧ್ಯಕ್ಷ ನಿಂಗಣ್ಣ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ ಎಸ್‌ಸಿ-ಎಸ್‌ಟಿ ಘಟಕದ ಅಧ್ಯಕ್ಷ ಪರಶುರಾಮ ಕಾಂಬಳೆ, ರಾಮಚಂದ್ರ ಕಲಬುರ್ಗಿ, ಮಲ್ಲು ಶಂಬೇವಾಡ, ಮಹೇಶ ಮನಗೂಳಿ, ಕುಮಾರ ದೇಸಾಯಿ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.