ಹಳ್ಳಿಗಳಲ್ಲಿ ಸ್ವಯಂ ಕ್ವಾರಂಟೈನ್
Team Udayavani, Apr 13, 2020, 5:40 PM IST
ಆಳಂದ: ಹೊರಗಿನ ವ್ಯಕ್ತಿಗಳಿಂದ ಕೋವಿಡ್ ವೈರಸ್ ಹರಡುವ ಭೀತಿ ಇರುವುದರಿಂದ ಗ್ರಾಮಗಳ ಸಂಪರ್ಕ ರಸ್ತೆಗೆ ಗ್ರಾಮಸ್ಥರು ಮುಳ್ಳು ಕಂಟಿ ಇಟ್ಟು ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದಾರೆ.
ಆಳಂದ: ಕೋವಿಡ್ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ತಾಲೂಕಿನ ಗಡಿ ಭಾಗದ ಅನೇಕ ಹಳ್ಳಿ ಮತ್ತು ಬಡಾವಣೆಗಳಲ್ಲಿ ಜನರು ಸಂಪರ್ಕ ರಸ್ತೆಗಳನ್ನು ಮುಳ್ಳುಕಂಟಿಗಳಿಂದ ಮುಚ್ಚಿ, ಹೊರಗಡೆಯಿಂದ ಬರುವುದಕ್ಕೆ ಹಾಗೂ ಹೊರ ಹೋಗುವುದಕ್ಕೆ ನಿರ್ಬಂಧ ಹೇರಿದ್ದಾರೆ.
ತಾಲೂಕಿನ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಆಳಂಗಾ, ಹೊದಲೂರ, ಅಣೂರ, ತುಗಾಂವ, ನರೋಣಾ ವ್ಯಾಪ್ತಿಯ ವಳವಂಡವಾಡಿ, ಥಳಿ, ಖಸಗಿ ಇನ್ನಿತರ ಹಳ್ಳಿಗಳಲ್ಲಿ ಸ್ವತಃ ಗ್ರಾಮಸ್ಥರೇ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಜ್ಜಾಗಿದ್ದಾರೆ. ಗ್ರಾಮಕ್ಕೆ ಬರುವ ಎಲ್ಲ ರಸ್ತೆಗಳಿಗೂ ಬೇಲಿ ಹಾಕಿರುವ ಗ್ರಾಮಸ್ಥರು ಗ್ರಾಮಕ್ಕೆ ಬೇರೆಯವರ ಪ್ರವೇಶ ನಿರ್ಬಂಧಿಸಿ, ಸ್ವಯಂ ದಿಗ್ಬಂಧನ ಹಾಕಿಕೊಂಡಿದ್ದಾರೆ. ಹೊರಗಿನಿಂದ ಬರುವ ವಾಹನಗಳನ್ನು ದೂರದಿಂದಲೇ ತಡೆದು ಪ್ರವೇಶಿಸದಂತೆ ನೋಡಿಕೊಳ್ಳುತ್ತಿದ್ದಾರೆ. ಜೊತೆಗೆ ಮನೆಯಿಂದ ಯಾರು ಸಹ ಹೊರಗಡೆ ಬಾರದಂತೆ ಎಚ್ಚರ ವಹಿಸಿದ್ದಾರೆ.
ತುರ್ತು ಪರಿಸ್ಥಿತಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಬಾರದು ಎಂದು ಪಟ್ಟಣದ ಬಡಾವಣೆ ಸೇರಿದಂತೆ ಇನ್ನಿತರ ಕಡೆ ಮುಚ್ಚಿದ ರಸ್ತೆಗಳನ್ನು ತೆರವುಗೊಳಿಸಲಾಗಿದೆ ಎಂದು ಪಿಎಸ್ಐ ಬಾಪುಗೌಡ ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.