ಮತದಾರರ ಪಟ್ಟಿಗೆ ಹೆಸರು ಸೇರಿಸಿ
Team Udayavani, Jan 22, 2018, 2:26 PM IST
ವಿಜಯಪುರ: ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಹತ್ವವನ್ನು ತಿಳಿಸುವ ಜಾಗೃತಿ ಜಾಥಾಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿಪಂ ಸಿಇಒ ಎಂ.ಸುಂದರೇಶಬಾಬು ಚಾಲನೆ ನೀಡಿದರು.
ಗೋದಾವರಿ ಹೋಟೆಲ್ ಆವರಣದಿಂದ ಆರಂಭಗೊಂಡ ವಿದ್ಯಾರ್ಥಿಗಳ ಜಾಥಾ ಶಿವಾಜಿ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ ಮೂಲಕ ಸಂಚರಿಸಿ ಡಾ| ಅಂಬೇಡ್ಕರ್ ವೃತ್ತದಲ್ಲಿ ಮುಕ್ತಾಯವಾಯಿತು.
ಚಾಲನೆ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಮತದಾನದ
ಮಹತ್ವ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಹತ್ವ ತಿಳಿ ಹೇಳುವ ಜಾಗೃತಿ ಜಾಥಾಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಂ.ಸುಂದರೇಶಬಾಬು ಚಾಲನೆ ನೀಡಿದರು. ನಗರದ ಕೆಎಸ್‌ಆರ್‌ಟಿಸಿ ಘಟಕಗಳ ಬಳಿ ಮುಖ್ಯ ರಸ್ತೆಯಲ್ಲಿ ಚಾಲನೆ ಪಡೆದ ಜಾಥಾದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಶಿವಾಜಿ ವೃತ್ತ, ಮಹಾತ್ಮ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ ಮೂಲಕ ಸಂಚರಿಸಿ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ದರು. ಈ ವೇಳೆ ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಾದ ಜಿ.ಎಂ. ದೊಡ್ಡಮನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ ನದಾಫ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ವಿಸ್ತರಣಾಧಿಕಾರಿ ಜಿ.ಎಲ್. ರಾಠೊಡ, ಎಸ್.ಎ. ಜಮಾದಾರ ಇದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.