ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಸಲಹೆ
Team Udayavani, Jan 26, 2022, 2:43 PM IST
ವಿಜಯಪುರ: ಪ್ರವಾಸೋದ್ಯಮ ಇಲಾಖೆ ರಾಜ್ಯ ಹಾಗೂ ಜಿಲ್ಲೆಯಲ್ಲಿರುವ ಎಲ್ಲ ಪ್ರವಾಸಿ ತಾಣಗಳಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಿದಲ್ಲಿ ಪ್ರವಾಸಿಗರನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಲು ಸಾಧ್ಯವಾಗಲಿದೆ ಎಂದು ಆಕಾಶವಾಣಿ ಕಾರ್ಯಕ್ರಮ ಅಧಿಕಾರಿ ಸೋಮಶೇಖರ ರೋಳಿ ಅಭಿಪ್ರಾಯಪಟ್ಟರು.
ನಗರದ ಸಂಗೀತ ಮಹಲ್ ಪ್ರವಾಸಿ ತಾಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ರೋಟರಿ ಕ್ಲಬ್ ಆಫ್ ವಿಜಯಪುರ-ಮಾನ್ಯುಮೆಂಟಲ್ ಹೆರಿಟೇಜ್ ಸಿಟಿ, ಆರ್‌ಕೆಎಂ ಆಯುರ್ವೇದ ಮೆಡಿಕಲ್ ಕಾಲೇಜ್, ಹಾಸ್ಪಿಟಲ್ ಮತ್ತು ಪಿಜಿ ರಿಸರ್ಚ್ ಸೆಂಟರ್ ವಿಜಯಪುರ ಇವರುಗಳ ಸಹಯೋಗದಲ್ಲಿ ಪ್ರವಾಸೋದ್ಯಮ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ವಿಚಾರಗೋಷ್ಠಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಥೀಮ್ ಅಡಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆ ರೂಪಿಸುವ ಅನೇಕ ಯೋಜನೆಗಳು ಮುಂಬರುವ ದಿನಗಳಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಆಶಿಸಿದರು.
ಪ್ರವಾಸೋದ್ಯಮ ಬಲವರ್ಧನೆಯಲ್ಲಿ ನಾಗರಿಕರೂ ಸಹಕರಿಸುವ ಅಗತ್ಯವಿದೆ. ಮಕ್ಕಳಿಗೆ ಸ್ಮಾರಕಗಳ ಬಗ್ಗೆ ತಿಳಿ ಹೇಳುವುದರ ಜೊತೆಗೆ ಪ್ರವಾಸೋದ್ಯಮ ಕ್ಷೇತ್ರದ ಅವಕಾಶಗಳ ಮಹತ್ವ ತಿಳಿಸಿಕೊಡಬೇಕು ಎಂದು ಹೇಳಿದರು.
ಅಝಾದಿ ಕಾ ಅಮೃತ ಮಹೋತ್ಸವ ಥೀಮ್ ಅಡಿ ವಿಜಯಪುರ ಜಿಲ್ಲೆಯಲ್ಲಿ ಗ್ರಾಮೀಣ ಮತ್ತು ಸಮುದಾಯ ಆಧಾರಿತ ಪ್ರವಾಸೋದ್ಯಮವನ್ನು ಈ ವರ್ಷದ ಆಚರಣೆಯ ವಿಷಯವಾಗಿ ಗುರುತಿಸಿ, ರಾಷ್ಟ್ರೀಯ ಪ್ರವಾಸೋದ್ಯಮ ದಿನ ಎಂದು ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸ ನೀಡಿದ ಡಾ| ರಮೇಶ ಕಾಂಬಳೆ, ನಾವೆಲ್ಲರೂ ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನಗಳನ್ನು ಸ್ಮರಿಸಬೇಕು. ಅದರಂತೆ ವಿಜಯಪುರ ಜಿಲ್ಲೆಯು ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದ್ದು ಇದರಲ್ಲಿ ನವರಸಪುರಕ್ಕೆ ವಿಶೇಷ ಮಹತ್ವ ಬಂದಿದೆ ಎಂದರು.
ಪ್ರವಾಸೋದ್ಯಮ ಇಲಾಖೆಯಿಂದ ಗ್ರಾಮೀಣ ಮಟ್ಟದಲ್ಲಿ ಸಮುದಾಯಗಳಿಗೆ ಉದ್ಯೋಗಾವಕಾಶ ಹೆಚ್ಚಿನ ಸಂಖ್ಯೆಯಲ್ಲಿ ದೊರೆಯುವಂತೆ ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು.
ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಪ್ರಾಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ ರಸಪ್ರಶ್ನೆ, ಭಾಷಣ ಸರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಪೀಟರ್ ಅಲೆಕ್ಸಾಂಡರ್, ಅಡಿವೆಪ್ಪ ಸಾಲಗಲ್, ಶಂಭುಲಿಂಗ ಕರ್ಪೂರಮಠ, ಭೀಮರಾಯ ಜಿಗಜಿಣಗಿ, ಮಹೇಶ ಕ್ಯಾತನ್, ಅಂಬಾದಾಸ ಜೋಶಿ, ರಾಕೇಶ, ವರದರಾಜನ್, ನಂದಕುಮಾರ ರುದ್ರಗೌಡರ, ವಿದ್ಯಾರ್ಥಿನಿ ಅಕ್ಷತಾ ಅಂಬೂರ, ಸೋಮನಗೌಡ ಕಲ್ಲೂರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.