ರಾಜ್ಯದಲ್ಲಿ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಒಪ್ಪಿಗೆ : ಸಚಿವ ನಾರಾಯಣಗೌಡ
Team Udayavani, Mar 1, 2021, 5:31 PM IST
ವಿಜಯಪುರ : ಮುಂಬರುವ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಕರ್ನಾಟಕ ರಾಜ್ಯದಲ್ಲಿ ಆಯೋಜಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಒಪ್ಪಿಗೆ ನೀಡಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್, ಅಥ್ಲೆಟಿಕ್ ಟ್ರಾಕ್, ವಾಲಿಬಾಲ್ ಮೈದಾನಗಳ ಹಾಗೂ ಒಳಾಂಗಣ ಈಜುಕೊಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಖೆಲೋ ಇಂಡಿಯಾ ಕ್ರೀಡಾಕೂಟ ಆಯೋಜಿಸುವ ರಾಜ್ಯದ ಮನವಿಗೆ ಪ್ರಧಾನಮಂತ್ರಿಗಳು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಕೇಂದ್ರದ ಕ್ರೀಡಾ ತಜ್ಞರು ಕೂಡ ಕ್ರೀಡಾಕೂಟಕ್ಕಾಗಿ ರಾಜ್ಯದ ಆರು ಸ್ಥಳಗಳನ್ನು ಗುರುತಿಸಿದ್ದಾರೆ ಎಂದು ಹೇಳಿದರು.
ವಿಜಯಪುರ ನಗರದಲ್ಲಿ ಕ್ರೀಡಾಪಟುಗಳನ್ನು ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ. ರಾಜ್ಯದ 2 ಕೋಟಿ ಕ್ರೀಡಾಪಟುಗಳಲ್ಲಿ ಪ್ರೋತ್ಸಾಹಿಸಿ, ಶಕ್ತಿ ತುಂಬುವ ಕಾರ್ಯ ನಡೆಯಬೇಕಿದೆ. ಕ್ರೀಡಾ ಕ್ಷೇತ್ರದಲ್ಲಿ ಸಮಸ್ಯೆ, ಅಗತ್ಯಗಳನ್ನು ತಿಳಿಯಲು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸುತ್ತಿದ್ದೇನೆ. ಬರುವ ಬಜೆಟ್ ನಲ್ಲಿ ಇದಕ್ಕಾಗಿ ಅಗತ್ಯ ಅನುದಾನ ಒದಗಿಸಲು ಸಮಗ್ರ ಅಧ್ಯಯನ ವರದಿ ಸಿದ್ಧಪಡಿಸುವುದಾಗಿ ತಿಳಿಸಿದರು.
ಗ್ರಾಮಾಂತರ ಪ್ರದೇಶದಲ್ಲಿ ಕ್ರೀಡಾಪಟುಗಳಲ್ಲಿ ಶಕ್ತಿ ತುಂಬುವ ಕಾರ್ಯ ನಡೆಯಬೇಕಾಗಿದೆ. ಕ್ರೀಡಾಪಟುಗಳ ಮೂಲಕ ದೇಶದ ಕೀರ್ತಿ ಹೆಚ್ಚಿಸಬೇಕಾಗಿದೆ ಎಂದ ಅವರು ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸುವ ಕೆಲಸವೂನಡೆದಿದೆ ಎಂದರು.
ವಿಜಯಪುರ ನಗರದಲ್ಲಿ ಅರ್ಧಕ್ಕೆ ನಿಂತಿರುವ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿಯನ್ನು ಅತ್ಯುತ್ತಮ ತಂತ್ರಜ್ಞರ ಮೂಲಕ ರೂಪಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
ನಗರದಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಅಥ್ಲೆಟಿಕ್ ಟ್ರ್ಯಾಕ್, 3 ಕೋಟಿ ರೂ. ವೆಚ್ಚದಲ್ಲಿ ಈಜುಕೊಳ, 2 ಕೋಟಿ ರೂ. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, 50 ಲಕ್ಷ ರೂ. ವೆಚ್ಚದಲ್ಲಿ ವಾಲಿಬಾಲ್ ಅಂಕಣ ಸೇರಿದಂತೆ ಇತರೆ ಕಾಮಗಾರಿಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಾರ್ಪಣೆ ಮಾಡಲಾಗಿದೆ.ಜಿಲ್ಲೆಯ ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ತರಬೇತಿ ನೀಡುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವರಿಗೆ ಅವಕಾಶ ಒದಗಿಸಬೇಕು ಎಂದು ಹೇಳಿದರು.
ಜಿ.ಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಮಾತನಾಡಿದರು. ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿ.ಪಂ ಸಿಇಒ ಗೋವಿಂದರೆಡ್ಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.