ಮುದ್ದೇಬಿಹಾಳ ಸಾವಯವ, ಸಮಗ್ರ ಕೃಷಿ ತರಬೇತಿ, ಸಂಶೋಧನೆ ಕೇಂದ್ರಕ್ಕೆ ಮನವಿ: ನಡಹಳ್ಳಿ
Team Udayavani, Feb 22, 2021, 4:33 PM IST
ವಿಜಯಪುರ: ಮುದ್ದೇಬಿಹಾಳದಲ್ಲಿ ಸಾವಯವ ಕೃಷಿ ತರಬೇತಿ ಕೇಂದ್ರ, ಸಮಗ್ರ ಕೃಷಿ ಸಂಶೋಧನೆ-ತರಬೇತಿ ಕೇಂದ್ರ ಸ್ಥಾಪಿಸಲು ಮಂಗಳವಾರ ಮುದ್ದೇಬಿಹಾಳ ತಾಲೂಕಿಗೆ ಆಗಮಿಸುತ್ತಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗರ ಮನವಿ ಸಲ್ಲಿಸುವುದಾಗಿ ಶಾಸಕರಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ.
ಸೋಮವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುದ್ದೇಬಿಹಾಳ ತಾಲೂಕು ಸಮಗ್ರ ನೀರಾವರಿಯಾಗುತ್ತಿದ್ದು, ಸಮಗ್ರ ಅಭಿವೃದ್ದಿಯತ್ತ ದಾಪುಗಾಲು ಹಾಕುತ್ತಿದೆ. ಸರ್ಕಾರಿ ಜಮೀನು ಲಭ್ಯವಿದ್ದು, ಸಾವಯವ ಕೃಷಿಗೆ ಪೂರಕ ವಾತಾವರಣ ಇದೆ. ಸಾವಯವ ಹಾಗೂ ಸಮಗ್ರ ಕೃಷಿ ತರಬೇತಿ ಹಾಗೂ ಸಂಶೋಧನೆ ಕೇಂದ್ರಗಳನ್ನು ತೆರೆಯುವ ಬೇಡಿಕೆ ಜೊತೆಗೆ ಮನವರಿಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದರು.
ಇದನ್ನೂ ಓದಿ:ಕುಡಿವ ನೀರು ಪೂರೈಸಲು ಖಾಸಗಿ ಬೋರ್‌ವೆಲ್ ಬಳಸಿಕೊಳ್ಳಿ
ಇನ್ನು ವಿಜಯಪುರ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಮುದ್ದೇಬಿಹಾಳಕ್ಕೆ ಸ್ಥಳಾಂತರಿಸಿದರೆ ರೈತರೊಂದಿಗೆ ಹೋರಾಟ ನಡೆಸುವುದಾಗಿ ಶಾಸಕ ದೇವಾನಂದ ಚವ್ಹಾಣ ಹೇಳಿಕೆಗೆ ಪ್ರತಿಕ್ರಿಯಿಸಲಾರೆ. ಸದರಿ ಕೇಂದ್ರ ಮುದ್ದೇಬಿಹಾಳಕ್ಕೆ ಸ್ಥಳಾಂತರಿಸಲು 4-5 ವರ್ಷಗಳ ಹಿಂದೆಯೇ ಆದೇಶವಾಗಿದ್ದು, ಸದರಿ ಆದೇಶ ಇನ್ನೂ ಜೀವಂತವಾಗಿದೆ. ಆದರೆ ಈ ಕೇಂದ್ರ ಸ್ಥಳಾಂತರದಿಂದ ನಮ್ಮ ಭಾಗದ ರೈತರಿಗೆ ಏನೂ ಪ್ರಯೋಜನ ಇಲ್ಲ. ಆದರೆ ನಮ್ಮ ರೈತರ ಕೋರಿಕೆಯಂತೆ ಬೇಡಿಕೆ ಇಡಲಿದ್ದು, ಮುದ್ದೇಬಿಹಾಳಕ್ಕೆ ಕೃಷಿ ವಿಸ್ತರಣಾ ಕೇಂದ್ರ ಸ್ಥಳಾಂತರದ ಸಗತ್ಯದ ಕುರಿತು ವಿಶ ಕೃಷಿ ಸಚಿವರ ಗಮನಕ್ಕೆ ತರುತ್ತೇನೆ. ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.