ದೆಹಲಿ ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ


Team Udayavani, Jan 6, 2021, 4:33 PM IST

ದೆಹಲಿ ರೈತರ ಹೋರಾಟ ಬೆಂಬಲಿಸಿ ಪ್ರತಿಭಟನೆ

ವಿಜಯಪುರ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ರೈತರುನಡೆಸುತ್ತಿರುವ ಹೋರಾಟ ಬೆಂಬಲಿಸಿ ಐಯುಟಿಯುಸಿಜಿಲ್ಲಾ ಸಮಿತಿ ಮಂಗಳವಾರ ಅಂಬೆಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾ ಡಳಿತ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿತು.

ಈ ವೇಳೆ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಎಚ್‌.ಟಿ. ಮಲ್ಲಿಕಾರ್ಜುನ ಮಾತನಾಡಿ, ಬಿಜೆಪಿ ಸರ್ಕಾರದ ಮೂರು ಕರಾಳ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿ ಭಾಗದಲ್ಲಿ ಕೊರೆಯುವ ಚಳಿ ನಡುವೆಯೂ ಕಳೆದ 36 ದಿನಗಳಿಂದ ನಡೆಯುತ್ತಿರುವ ರೈತರ ದಿಟ್ಟ ಹೋರಾಟಕ್ಕೆ ನಮ್ಮ ಬೆಂಬವಿದ್ದು ಕೇಂದ್ರ ಸರ್ಕಾರ ಕೂಡಲೇ ಈಕರಾಳ ಕಾಯ್ದೆಗಳನ್ನು ಕೈ ಬಿಡುವಂತೆ ಆಗ್ರಹಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ಕಾರ್ಪೋರೇಟ್‌ ಕಂಪನಿಗಳ ಪರವಾಗಿಅಂದರೆ ಅಂಬಾನಿ-ಆದಾನಿಯಂತಹ ಕೈಗಾರಿಕಾ ಮನೆತನಗಳ ಲಾಭಕ್ಕಾಗಿ ಕಾರ್ಮಿಕ ವಿರೋಧಿ ಕಾಯ್ದೆಗಳು ರೈತರ ಹಾಗೂ ದೇಶದ ಕೃಷಿಯ ಮೇಲೂಸಹ ದಾಳಿ ಮಾಡುತ್ತಿವೆ. ಎಪಿಎಂಸಿ ತಿದ್ದುಪಡಿಕಾಯ್ದೆ 2020 (ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯಗಳ ಉತ್ತೇಜನ ಮತ್ತು ಸೌಕರ್ಯ ಕಾಯ್ದೆ 2020), ಬೆಲೆ ಭರವಸೆ (ಸಶಕ್ತೀಕರಣ ಮತ್ತು ಸುರಕ್ಷೆ)ಕೃಷಿ ಸೇವೆಗಳ ಕಾಯ್ದೆ 2020 (ಗುತ್ತಿಗೆ ಕೃಷಿ ಕಾಯ್ದೆ2020), ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ 2020ಹಾಗೂ ವಿದ್ಯುತ್‌ ತಿದ್ದುಪಡಿ ಮಸೂದೆ 2020 ಜಾರಿಗೆಮುಂದಾಗಿದೆ ಎಂದು ಹರಿಹಾಯ್ದರು.ಮತ್ತೂಂದೆಡೆ ಕರ್ನಾಟಕ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತರುತ್ತಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗಳು ಅಗತ್ಯ ವಸ್ತುಗಳನ್ನು

ಕಾಳಸಂತೆಯಲ್ಲಿ ದಾಸ್ತಾನು ಮಾಡುವುದಕ್ಕೆ ಅವಕಾಶ ನೀಡುತ್ತವೆ. ಅಲ್ಲದೆ ಇದು ಸರ್ಕಾರಿ ಕೃಷಿ-ಮಂಡಿಗಳನ್ನು(ಎಪಿಎಂಸಿ) ನಾಶ ಮಾಡುತ್ತದೆ. ಉದ್ಯಮಿಗಳಿಗೆಖಾಸಗಿ (ಎಪಿಎಂಸಿ) ಮಂಡಿಗಳನ್ನು ತೆರೆಯಲುಅವಕಾಶ ನೀಡುತ್ತದೆ. ರೈತರ ಭೂಮಿಯನ್ನು ಕಸಿದುಕೊಂಡು ಅವರನ್ನು ಒಕ್ಕಲೆಬ್ಬಿಸುತ್ತದೆ. ಕೃಷಿಯನ್ನು ಖಾಸಗಿ ಕಂಪನಿಗಳ ನಿಯಂತ್ರಣಕ್ಕೆ ತರಲಾಗುತ್ತದೆ. ರೈತರು ಸಂಪೂರ್ಣವಾಗಿ ತಮ್ಮ ಸ್ವಾತಂತ್ರ್ಯ ಕಳೆದುಕೊಂಡು ಕಂಪನಿಗಳ ಹಂಗಿನಲ್ಲಿನಡೆದಾಡುವ ಹೆಣಗಳಾಗಿ ಬಿಡುತ್ತಾರೆ. ಇದನ್ನು ವಿರೋಧಿ ಸಿ ದೇಶದ ರಾಜಧಾನಿಯಲ್ಲಿ ರೈತರು ಬೀದಿಗೆಇಳಿದು ಹೋರಾಟಕ್ಕೆ ಮುಂದಾಗಿದ್ದಾರೆ ಎಂದರು.

ಸಂಘಟನೆ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ ಮಾತನಾಡಿ, ಪಂಜಾಬ, ಹರಿಯಾಣ,ಉತ್ತರಪ್ರದೇಶ, ರಾಜಸ್ಥಾನ, ಉತ್ತರಖಂಡ,ಛತ್ತೀಸ್‌ಘಡ್‌, ಮಧ್ಯಪ್ರದೇಶ ಹೀಗೆ ಹಲವುರಾಜ್ಯಗಳಿಂದ ರೈತರು ದೆಹಲಿಯತ್ತ ತೆರಳಿದ್ದು,ಲಕ್ಷಾಂತರ ರೈತರು ಬೀದಿಯಲ್ಲೇ ಕುಳಿತು ಹೋರಾಟಮುಂದುವರಿಸಿದ್ದಾರೆ. ರೈತರ ಹೋರಾಟಕ್ಕೆ ಹೆದರಿದಮೋದಿ ಸರಕಾರ ರೈತರು ದೆಹಲಿ ತಲುಪದಂತೆ ಕುತಂತ್ರ ನಡೆಸಲು ಬರ್ಬರ ವಾಗಿ ವರ್ತಿಸಿತು. ಸರ್ಕಾರ ನಡೆಸಿದ ಎಲ್ಲ ಸಂಚುಗಳನ್ನು ಎದುರಿಸಿ ರೈತರು ಮುನ್ನುಗ್ಗಿದ್ದಾರೆ. ಪೋಲಿಸರನ್ನು ಬಳಸಿಕೊಂಡು ಮಾಡಿದ ಯಾವುದೆ ದೌರ್ಜನ್ಯಕ್ಕೂ ರೈತರು ಬಗ್ಗದೇ, ಜಗ್ಗದೇ ಹೋರಾಟಕ್ಕೆ ಅಣಿಯಾಗಿರುವುದು ರೈತ ಶಕ್ತಿಯ ಕೆಚ್ಚಿನ ಪ್ರತೀಕ. ಇನ್ನಾದರೂ ಕೇಂದ್ರ, ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳಿಂದ ಹಿಂದೆ ಸರಿಯಲಿ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಶೀಬಾಯಿ ಜನಗೊಂಡ, ಮಹಾದೇವಿ ಧರ್ಮಶೆಟ್ಟಿ, ಶಶಿಕಲಾ ಮ್ಯಾಗೇರಿ, ಲಕ್ಷ್ಮೀ ಲಕ್ಷಟ್ಟಿ ಮಾತನಾಡಿದರು.ಕಾರ್ಮಿಕರಾದ ಅಂಬಿಕಾ ಒಳಸಂಗ,ಗಂಗೂಬಾಯಿ ಉಳಾಗಡ್ಡಿ, ಪ್ರಶಾಂತ ಮನಗೂಳಿ, ವಿಜಯಲಕ್ಷ್ಮೀ ಹುಣಶ್ಯಾಳ, ಭಾಗೀರತಿ ಬಡಿಗೇರ, ಬಸಿರಾ ಬಾಗೇವಾಡಿ, ಯಮನವ್ವ ಕೋಲಾರ, ಮುತ್ತು, ಮಂಜು, ಹನುಮಂತ, ಪರಶುರಾಮ ತಳವಾರ ಇದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.