Akka Mahadevi ಮಹಿಳಾ ವಿವಿ: ಮೌಲ್ಯಮಾಪನ ಮುಗಿದ ಅರ್ಧ ಗಂಟೆಯಲ್ಲೇ ಫಲಿತಾಂಶ
Team Udayavani, Aug 14, 2023, 6:42 PM IST
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬಿಎಡ್ ಸೆಮಿಸ್ಟರ್ ಪರೀಕ್ಷೆಯ ಮೌಲ್ಯಮಾಪನ ಪೂರ್ಣಗೊಂಡ ಅರ್ಧಗಂಟೆಯಲ್ಲೇ ಫಲಿತಾಂಶ ಪ್ರಕಟಿಸಿ, ವಿಶಿಷ್ಟ ಸಾಧನೆ ಮಾಡಲಾಗಿದೆ.
ಜುಲೈ ತಿಂಗಳಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಜರುಗಿದ ಬಿ.ಎಡ್ ಪ್ರಥಮ ಸೆಮಿಸ್ಟರ್ ನ ಪರೀಕ್ಷೆಯ ಮೌಲ್ಯಮಾಪನ ಕಾರ್ಯವನ್ನು ಮೌಲ್ಯಮಾಪಕರು ಕೇವಲ 14 ದಿನಗಳಲ್ಲಿ ಪೂರ್ಣಗೊಳಿಸಿದ್ದಾರೆ. ಮತ್ತೊಂದೆಡೆ ಮೌಲ್ಯಮಾಪನ ಪೂರ್ಣಗೊಂಡ ಅರ್ಧ ಗಂಟೆಯಲ್ಲೇ ಫಲಿತಾಂಶವನ್ನು ಪ್ರಕಟಿಸುವ ಮೂಲಕ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗವು ವಿಶಿಷ್ಟ ಸಾಧನೆ ಮಾಡಿದೆ.
ರಾಜ್ಯ ಸರ್ಕಾರ ಹೊಸದಾಗಿ ಸ್ಥಾಪಿಸಿರುವ ಯು.ಯು.ಸಿ.ಎಂ.ಎಸ್ ತಂತ್ರಾಂಶ ಬಳಸಿಕೊಂಡು, ಮೌಲ್ಯಮಾಪನ ಕಾರ್ಯವನ್ನು ಮುಗಿಸಿರುವುದಾಗಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ ತಿಳಿಸಿದ್ದಾರೆ.
ಮೌಲ್ಯಮಾಪನ ಕುಲಸಚಿವರು, ಉಪ ಕುಲಸಚಿವರು, ಸಹಾಯಕ ಕುಲಸಚಿವರು, ಮೌಲ್ಯಮಾಪನ ಕಾರ್ಯದ ಹೊಣೆಗಾರಿಕೆಯನ್ನು ನಿರ್ವಹಿಸಿದ ಬಿ.ಒ.ಇ. ಅಧ್ಯಕ್ಷ ಡಾ.ಪ್ರಕಾಶ ಸಣ್ಣಕ್ಕನವರ, ಪರೀಕ್ಷಾಂಗದ ಸಿಬ್ಬಂದಿಗಳನ್ನು ಹಾಗೂ ಮೌಲ್ಯಮಾಪಕರನ್ನು ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ
Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
CHANAKYA CAREER ACADEMY: ಚಾಣಕ್ಯ ಯುವ ಭವಿಷ್ಯಕ್ಕೆ ಭದ್ರ ಬುನಾದಿ
Waqf issue: ಎಲ್ಲ ಪಹಣಿಯಲ್ಲೂ ವಕ್ಫ್ ಹೆಸರು ತೆಗೆಯಿರಿ: ಮುಲ್ಲಾ ಅಸೋಸಿಯೇಷನ್ ಆಗ್ರಹ
Tragedy: ಕೂಲಿ ಆಸೆಗೆ ತೆಂಗಿನ ಮರ ಏರಿದ್ದ ಅವಿವಾಹಿತ ಯುವಕ ಆಯತಪ್ಪಿ ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.