ಜಿಲ್ಲಾ ಗಡಿಯಲ್ಲಿ ಹೆಚ್ಚಿದ ಬಿಗಿ ಭದ್ರತೆ
ಅಗತ್ಯ ಸರಕು ಸಾಗಣೆ ವಾಹನಗಳಿಗಷ್ಟೇ ಪ್ರವೇಶ
Team Udayavani, Apr 11, 2020, 2:41 PM IST
ಆಲಮಟ್ಟಿ: ಯಲಗೂರ ಬಳಿ ನಿರ್ಮಿಸಿರುವ ಜಿಲ್ಲಾ ಪ್ರವೇಶ ಗಡಿಯಲ್ಲಿ ವಾಹನ ತಪಾಸಣೆ ನಡೆಸುತ್ತಿರುವ ಪೊಲೀಸರು.
ಆಲಮಟ್ಟಿ: ಮಹಾಮಾರಿ ಕೋವಿಡ್ ವೈರಸ್ ತಡೆಗಟ್ಟಲು ನಿರ್ಮಿಸಿರುವ ಜಿಲ್ಲಾ ಗಡಿ ಚೆಕ್ ಪೋಸ್ಟ್‌ನಲ್ಲಿ ಅತ್ಯವಶ್ಯ ಸಾಮಗ್ರಿಗಳ ಸಾಗಣೆ ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ವಾಹನಗಳು ಒಳಬರದಂತೆ ನಿರ್ಬಂಧಿಸಲಾಗಿತ್ತು.
ಕೋವಿಡ್ ತಡೆಗೆ ಕೇಂದ್ರ ಹಾಗೂ ರಾಜ್ಯಸರ್ಕಾರದ ನಿರ್ದೇಶನಗಳಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಯಲಗೂರ ಗ್ರಾಮದ ಬಳಿಯಲ್ಲಿ ಕೃಷ್ಣಾನದಿ ಪಕ್ಕದಲ್ಲಿ ಜಿಲ್ಲಾಗಡಿ ಚೆಕ್‌ಪೋಸ್ಟ್ ಹಾಕಲಾಗಿದ್ದು, ಇಲ್ಲಿ ಆಗಮಿಸುತ್ತಿರುವ ಪ್ರಯಾಣಿಕರ ಹಾಗೂ ಅಗತ್ಯ ಸರಕು ಸಾಗಣೆಗಳ ವಾಹನಗಳನ್ನು ಜಿಲ್ಲೆಯ ಗಡಿಪ್ರವೇಶಿಸದಂತೆ ಬೇಸಿಗೆಯ ಬಿರುಬಿಸಿಲಿನ ನಡುವೆಯೂ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದಾರೆ.
ತಲೆನೋವಾದ ಆಸ್ಪತ್ರೆ ಚೀಟಿ: ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟೆ, ನಿಡಗುಂದಿ, ಬಸವನಬಾಗೇವಾಡಿ ತಾಲೂಕಿನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಇದರಿಂದ ಬಾಗಲಕೋಟೆಗೆ ಹೋಗುವವರು ಮತ್ತು ಚಿಕಿತ್ಸೆ ಪಡೆದು ಮರಳಿ ಬರುವವರನ್ನು ನಿರ್ಬಂ ಧಿಸಿದ್ದರೂ ಕೂಡ ತುರ್ತು ಸೇವೆಯ ಆಸ್ಪತ್ರೆಯ ಚೀಟಿಗಳನ್ನು ತೋರಿಸುತ್ತಾರೆ. ಈ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳು ಆ ಕುರಿತು ಕೂಲಂಕುಶವಾಗಿ ಪರಿಶೀಲಿಸಿದ ನಂತರ ಅವಶ್ಯವೆನಿಸಿದರೆ ಮಾತ್ರ ಅವರಿಗೆ ಅವಕಾಶ ನೀಡುತ್ತಾರೆ ಇಲ್ಲದಿದ್ದರೆ ಅವರನ್ನು ಮರಳಿ ಕಳಿಸುವುದು ನಿತ್ಯವೂ ನಡೆಯುತ್ತಿದೆ.
ಈಗಾಗಲೇ ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಜಿಲ್ಲಾಕೇಂದ್ರದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ
ನೀಡಲಾಗುತ್ತಿದ್ದರೂ ಕೂಡ ಬಾಗಲಕೋಟೆಗೆ ಹೋಗುತ್ತಿರುವುದು ಕೊರೊನಾ ಆತಂಕ ಹೆಚ್ಚಿಸಿದೆ. ಜಿಲ್ಲಾಡಳಿತ ಕೈಗೊಂಡ ಕಾರ್ಯ ಯಶಸ್ವಿಯಾಗಲು ನಾಗರಿಕರು ಆಸ್ಪತ್ರೆಯ ಅವಶ್ಯಕತೆಯಿದ್ದಲ್ಲಿ ಬಾಗಲಕೋಟೆಗೆ ಹೋಗದೇ ವಿಜಯಪುರಕ್ಕೆ ತೆರಳಬೇಕು ಎಂದು ಸ್ಥಳದಲ್ಲಿರುವ ಅಧಿಕಾರಿಯೊಬ್ಬರು ತಿಳಿಸಿದರು.
ಸಿಂದಗಿ ತಾಲೂಕಿನ ಗ್ರಾಮದಲ್ಲಿ ಸಂಬಂಧಿಕರೊಬ್ಬರು ಮರಣ ಹೊಂದಿದ್ದು, ಅವರ ಅಂತ್ಯಸಂಸ್ಕಾರಕ್ಕೆ ಹೋಗಬೇಕು ಎಂದು ಬಾದಾಮಿಯಿಂದ ಬೈಕಿನಲ್ಲಿ ಆಗಮಿಸಿದ್ದ ದಂಪತಿ ಮನವೊಲಿಸಿ ಮರಳಿ ಕಳಿಸಿದ ಪ್ರಸಂಗವೂ ನಡೆಯಿತು. ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಕರ್ತವ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.