ಕೆರೆ ಪೂರ್ತಿ ತುಂಬಿ: ಕುಲಕರ್ಣಿ
Team Udayavani, Apr 25, 2020, 4:52 PM IST
ಆಲಮಟ್ಟಿ: ರೈತ ಸಂಘದ ಪದಾಧಿಕಾರಿಗಳು ಕೆರೆಗೆ ಭೇಟಿ ನೀಡಿದರು
ಆಲಮಟ್ಟಿ: ಮುಳವಾಡ ಏತ ನೀರಾವರಿ ಯೋಜನೆಯಿಂದ ಜಿಲ್ಲೆಯ ಕೆರೆಗಳನ್ನು ಅರ್ಧದಷ್ಟು ತುಂಬಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿರುವುದು ಜಿಲ್ಲೆಯ ರೈತಾಪಿ ವರ್ಗ ಆತಂಕಪಡುವಂತಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.
ಈ ಕುರಿತು ಪ್ರಕಟಣೆಯಲ್ಲಿ ನೀಡಿರುವ ಅವರು, ರೈತರ ಒತ್ತಾಯದ ಮೇರೆಗೆ ಕೃ.ಮೇ.ಯೋ. ವ್ಯಾಪ್ತಿಯ ಮುಳವಾಡ ಏತ ನೀರಾವರಿ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಗಳ 97 ಕೆರೆಗಳನ್ನು ಅರ್ಧ ಮಾತ್ರ ತುಂಬಿಸಿದರೆ ಬೇಸಿಗೆಯ ಪ್ರಖರ ಬಿಸಿಲಿನಿಂದ ಸಾಕಷ್ಟು ಪ್ರಮಾಣದಲ್ಲಿ ಭಾಷ್ಪೀಭವನ ಹೊಂದುತ್ತದೆ. ಅಲ್ಲದೇ ಭೂಮಿಯಲ್ಲಿಯೂ ನೀರು ಇಂಗುತ್ತದೆ. ಇದರಿಂದ ಮಳೆಗಾಲ ಆರಂಭವಾಗುವುದಕ್ಕಿಂತಲೂ ಮುಂಚಿತವಾಗಿಯೇ ಮತ್ತೆ ಜನ-ಜಾನುವಾರುಗಳು ನೀರಿಗಾಗಿ ಪರದಾಡುವ ಸ್ಥಿತಿ ಬರಲಿದೆ. ಖಾಲಿಯಾಗಿರುವ ಕೆರೆಗಳನ್ನು ತುಂಬಿಸಬೇಕಾದರೆ ಕಾಲುವೆಗಳ ಹೂಳು ತೆಗೆಯುವ ಕೆಲಸ ಅರ್ಧಕ್ಕೆ ನಿಲ್ಲಿಸಬೇಕಾಗುತ್ತದೆ. ಇಲ್ಲವೇ ಕೆರೆಗಳನ್ನು ನೀರು ತುಂಬಿಸದೇ ಕಾಮಗಾರಿ ನೆಪ ಹೇಳಲಾಗುತ್ತದೆ. ಆದ್ದರಿಂದ ಎಲ್ಲ ಕೆರೆಗಳನ್ನು ಸಂಪೂರ್ಣವಾಗಿ ತುಂಬಿಸಬೇಕು. ಇದರಿಂದ ಕುಡಿಯುವ ನೀರಿಗಾಗಿ ಪರದಾಡುವದು ತಪ್ಪುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.