ಆಲಮಟ್ಟಿಗೆ ಮಹಾಪೂರ ನಿರ್ವಹಣೆ ಉನ್ನತ ಸಮಿತಿ ಭೇಟಿ

ಕೃಷ್ಣೆ ಹಿನ್ನೀರಿನಿಂದಾದ ಹಾನಿ ಅಧ್ಯಯನ

Team Udayavani, Feb 9, 2020, 4:00 PM IST

09-February-23

ಆಲಮಟ್ಟಿ: ಮಹಾರಾಷ್ಟ್ರ ರಾಜ್ಯ ನೇಮಿಸಿರುವ ಮಹಾಪೂರ ನಿರ್ವಹಣೆ ಉನ್ನತ ಮಟ್ಟದ ಸಮಿತಿ ಆಲಮಟ್ಟಿಯ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಿತು.

ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ ನಂದಕುಮಾರ ವಡ್ನೇರೆ ಅಧ್ಯಕ್ಷತೆಯಲ್ಲಿ ಯೋಜನೆ ಹಾಗೂ ಸಹಕಾರ ಕಾರ್ಯದರ್ಶಿ ಸಂಜಯ ಘನೇಕರ, ಕಾಡಾ ಕಾರ್ಯದರ್ಶಿ ಆರ್‌.ಆರ್‌. ಪವಾರ, ತಾಂತ್ರಿಕ ಸದಸ್ಯ ವಿ.ಎಂ. ಕುಲಕರ್ಣಿ, ನಿವೃತ್ತ ಉಪನ್ಯಾಸಕ ಪ್ರದೀಪ ಪುರಂದರೆ, ಎಂ.ಆರ್‌.ಎಸ್‌.ಎ.ಸಿಯ ವಿವೇಕಾನಂದ ಘಾರೆ, ಮುಖ್ಯ ಅಭಿಯಂತರ ಅತುಲ್‌ ಕಪೋಲೆ ಹಾಗೂ ಇನ್ನೊಬ್ಬ ಮುಖ್ಯ ಅಭಿಯಂತರ ಆರ್‌.ಡಿ. ಮೋಹಿತೆ, ಕೋಯ್ನಾ ಜಲಾಶಯದ ಅಧೀಕ್ಷಕ ಅಭಿಯಂತರ ಎಸ್‌. ಎಲ್‌. ಡಾಯ್‌ಪೋಡೆ, ಸಾಂಗ್ಲಿ ನೀರಾವರಿ ಯೋಜನೆ ಅಧೀಕ್ಷಕ ಅಭಿಯಂತರ ಎಚ್‌.ವಿ. ಗುನಾಳೆ, ಕಾರ್ಯಪಾಲಕ ಅಭಿಯಂತರ ಎನ್‌. ಎಸ್‌. ಕರೆ ಹಾಗೂ ಧೈರ್ಯಶೀಲ ಪವಾರ ಅವರನ್ನು ಸಮಿತಿ ಸದಸ್ಯರುಗಳಾಗಿ ನೇಮಕ ಮಾಡಿ ಮಹಾಪೂರ ಅಧ್ಯಯನ ಸಮಿತಿ ರಚಿಸಿ ಆಲಮಟ್ಟಿಗೆ ತಂಡವನ್ನು ಕಳಿಸಿದೆ.

ಜುಲೈ-ಆಗಸ್ಟ್‌ 2019ರಲ್ಲಿ ಕೃಷ್ಣಾ ನದಿಗೆ ಬಂದಿದ್ದ ಮಹಾಪೂರದ ವೇಳೆ ಹಾನಿಯಾದ ಕುರಿತು ಸಮಿತಿ ಅಣೆಕಟ್ಟು ವೃತ್ತ ಅಧೀಕ್ಷಕ ಅಭಿಯಂತರರ ಕಚೇರಿಯಲ್ಲಿ ಸಭೆ ನಡೆಸಿ ಮಾಹಿತಿ ಪಡೆಯಿತು. ಸಭೆ ನಂತರ ಪ್ರವಾಸಿಮಂದಿರದಲ್ಲಿ ಮಾಧ್ಯಮದವರು ತಂಡದ ನೇತೃತ್ವ ವಹಿಸಿದ್ದ ನಂದಕುಮಾರ ಅವರನ್ನು ಮಾತನಾಡಿಸಿದಾಗ, 2019ರಲ್ಲಿ ಕೃಷ್ಣೆಗೆ ಮಹಾಪೂರ ಬಂದಿರುವ ವೇಳೆಯಲ್ಲಿ ರಾಜಾಪುರ ಬ್ಯಾರೇಜಿಗೆ ಸಮೀಪ ಸೇರಿದಂತೆ ಕೃಷ್ಣೆ ಪಕ್ಕದ ಗ್ರಾಮ, ಪಟ್ಟಣ, ನಗರಗಳಲ್ಲಿ ಅಪಾರ ಹಾನಿಯಾಗಿತ್ತು. ಕೃಷ್ಣಾ ನದಿಗೆ ಆಗಾಗ ಮಹಾಪೂರ ಬರುವುದು ವಾಡಿಕೆಯಾಗಿದೆ. ಈ ಹಿಂದೆಯೂ ಹಲವಾರು ಬಾರಿ ಮಹಾಪೂರ ಬಂದು ನೆರೆ ಹಾವಳಿಯಿಂದ ಕೃಷ್ಣೆಯ ದಡದಲ್ಲಿ ಸಂಭವಿಸಿದೆ, ಈಗ ಆಲಮಟ್ಟಿಯಲ್ಲಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ಹಿನ್ನೀರಿನಿಂದ ಬಾಧಿತಗೊಂಡಿವೆಯೇ? ಎನ್ನುವ ಪ್ರಶ್ನೆ ಮೂಡುವಂತಾಗಿತ್ತು. ಈ ಕುರಿತು ನಡೆದ ಸಭೆಯಲ್ಲಿ ಆಲಮಟ್ಟಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯದ ಮುಖ್ಯ ಅಭಿಯಂತರರು ಹಾಗೂ ಅಧೀಕ್ಷಕ ಅಭಿಯಂತರರು ನೆರೆ ಹಾವಳಿ ವೇಳೆ ಕೈಗೊಂಡ ನಿರ್ಣಯಗಳ ಕಡತಗಳನ್ನು ಹಾಜರುಪಡಿಸಿದ್ದಲ್ಲದೇ ಮಹಾರಾಷ್ಟ್ರದಲ್ಲಿ ಹಾನಿಯಾಗಿರುವದಕ್ಕೆ ಶಾಸ್ತ್ರಿ ಜಲಾಶಯ ಹಿನ್ನೀರಿನಿಂದಲ್ಲ ಅದು ಕೃಷ್ಣೆ ಭಾಗವಾಗಿರುವ ದೂದಗಂಗಾ ನದಿಗಳು ಸೇರಿ ಕೃಷ್ಣೆಯಿಂದ ಎನ್ನುವದನ್ನು ಮನವರಿಕೆ ಮಾಡಿದ್ದಾರೆ ಎಂದರು.

ನೀರು ರಾಷ್ಟ್ರೀಯ ಸಂಪತ್ತು. ಇದರ ಬಳಕೆ ಎಲ್ಲ ರಾಜ್ಯಗಳಿಗೂ ಸಂಬಂ ಧಿಸಿದ್ದಾಗಿದೆ. ಇದರಿಂದ ನೆರೆ ಹಾಗೂ ಬರಗಾಲದ ವೇಳೆಯಲ್ಲಿ ನೀರು ನಿರ್ವಹಣೆ ಬಗ್ಗೆ ವಾಸ್ತವಾಂಶಗಳ ಬಗ್ಗೆ ಕೋಯ್ನಾ, ಆಲಮಟ್ಟಿಯ ಶಾಸ್ತ್ರೀ, ನಾರಾಯಣಪುರದ ಬಸವಸಾಗರ ವ್ಯಾಪ್ತಿ ಅಧಿ ಕಾರಿಗಳ ನಡುವೆ ಮಾಹಿತಿ ವಿನಿಮಯದ ಸಹಕಾರ ಅತಿ ಮುಖ್ಯವಾಗಿದೆ ಎಂದು ಹೇಳಿದರು.

ನಂತರ ಮಾತನಾಡಿದ ಮುಖ್ಯ ಅಭಿಯಂತರ ಆರ್‌.ಪಿ. ಕುಲಕರ್ಣಿ, ಜುಲೈ-ಆಗಸ್ಟ್‌ ತಿಂಗಳಿನಲ್ಲಿ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿದಿರುವುದರಿಂದ ಕೃಷ್ಣೆ ಹಾಗೂ ಅದರ ಉಪ ನದಿಗಳು ವ್ಯಾಪಕವಾಗಿ ತುಂಬಿ ಹರಿದಿದ್ದರಿಂದ ನೆರೆ ಹಾವಳಿಯುಂಟಾಗಿತ್ತು.

ಆಲಮಟ್ಟಿಗೆ ಎಷ್ಟು ನೀರು ಹರಿದು ಬಂದಿತ್ತು ಅದನ್ನು ಜಲಾಶಯದಿಂದ ಎಷ್ಟು ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡಲಾಗಿತ್ತು ಎನ್ನುವದರ ಬಗ್ಗೆ ಸಮಗ್ರ ಅಂಕಿ ಅಂಶಗಳನ್ನು ಸಮಿತಿ ಮುಂದಿಡಲಾಯಿತು ಎಂದರು. ಇನ್ನು ಆಲಮಟ್ಟಿ ಮೇಲ್ಭಾಗದಲ್ಲಿ ಕೋಯ್ನಾ ಜಲಾಶಯ ಹಾಗೂ ಕೆಳ ಭಾಗದಲ್ಲಿ ನಾರಾಯಣಪುರ ಜಲಾಶಯವಿದೆ. ಈ ಮೂರು ಜಲಾಶಯಗಳ ಮಧ್ಯೆ ಸಹಕಾರ ಅತಿ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿರುವ ನೀರಿನ ಸಂಗ್ರಹ, ಒಳಹರಿವು ಹಾಗೂ ಹೊರ ಹರಿವಿನ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಲಭಿಸುವಂತಾಗಬೇಕು ಎಂದು ಚರ್ಚಿಸಲಾಗಿದೆ ಎಂದು ಹೇಳಿದರು.

ಈ ವೇಳೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ ತಂಡದ ಸದಸ್ಯರುಗಳು ಹಾಗೂ ಆಲಮಟ್ಟಿ ಅಣೆಕಟ್ಟು ವೃತ್ತ ಅಧೀಕ್ಷಕ ಅಭಿಯಂತರ ಡಿ.ಬಸವರಾಜು ಸೇರಿದಂತೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.