ಆಲಮಟ್ಟಿ ಶಾಸ್ತ್ರಿ ಜಲಾಶಯದ ಶೇ. 80 ನೀರು ಜಿಲ್ಲೆಗೆ ಬಳಕ
Team Udayavani, Dec 1, 2018, 12:22 PM IST
ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ನೀರಿನಲ್ಲಿ ಶೇ. 80 ನೀರನ್ನು ಇನ್ನು ಮುಂದೆ ಜಿಲ್ಲೆಗೆ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು.
ಶುಕ್ರವಾರ ಸಮೀಪದ ಬೇನಾಳ ಆರ್.ಎಸ್. ಗ್ರಾಮದಲ್ಲಿ ಆಲಮಟ್ಟಿ-ಬಳೂತಿ ಸಂಯುಕ್ತ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ 3.05 ಕೋಟಿ ರೂ. ವೆಚ್ಚದ ಪೈಪ್ ಬದಲಾವಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈಗ ಆಲಮಟ್ಟಿಯಲ್ಲಿ ಸಂಗ್ರಹವಾಗುತ್ತಿರುವ ನೀರಿನಲ್ಲಿ ಹೆಚ್ಚಿನ ಭಾಗ ರಾಯಚೂರು, ಕಲಬುಗಿ, ಯಾದಗಿರಿ ಜಿಲ್ಲೆಗಳಿಗೆ ಹೋಗುತ್ತಿದೆ. ಇದರ ಪರಿಣಾಮ ಜಿಲ್ಲೆಯಲ್ಲಿ ಬೃಹತ್ ಜಲಾಶಯ ನಿರ್ಮಿಸಿದ್ದರೂ ಅಖಂಡ ಜಿಲ್ಲೆ ರೈತರ ಜಮೀನಿಗೆ ಹಿಂಗಾರು ಹಂಗಾಮಿಗೆ ನೀರು ಪೂರೈಸಲಾಗಲಿಲ್ಲ ಎಂದು ಕೃ.ಮೇ.ಯೋ. ನೀರಾವರಿ ಸಲಹಾ ಸಮಿತಿ ಸಭೆ ಅಧ್ಯಕ್ಷರೂ ಆಗಿರುವ ಶಿವಾನಂದ ಪಾಟೀಲ ಹೇಳಿದರು.
ರಾಜ್ಯದ 1.30 ಕೋಟಿ ಬಡಕುಟುಂಬಗಳ ಆರೋಗ್ಯ ರಕ್ಷಣೆಗಾಗಿ ಪ್ರತಿಯೊಂದು ಕುಟುಂಬಕ್ಕೆ 5 ಲಕ್ಷ ರೂ. ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲು ಭಾರತ ಆಯುಷ್ಮಾನ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ಬಸವನಬಾಗೇವಾಡಿ ಪಟ್ಟಣದಲ್ಲಿ ಮೆಗಾ ಮಾರುಕಟ್ಟೆ, ಸುಸಜ್ಜಿತ ಕಲ್ಯಾಣ ಮಂಟಪ ಸೇರಿದಂತೆ ಹಲವಾರು ವಿಶೇಷ
ಯೋಜನೆಗಳನ್ನು ಹಾಕಿಕೊಂಡು ಅಭಿವೃದ್ಧಿ ಮಾಡಲಾಗುತ್ತಿದೆ. 24×7 ಕುಡಿಯುವ ನೀರು ಪೂರೈಸಲು ಯೋಜನೆ ಹಾಕಿಕೊಂಡಿದ್ದು ಇದರಿಂದ ಜಿಲ್ಲೆಯಲ್ಲಿಯೇ ವಾರದ ಎಲ್ಲ ದಿನ 24 ಗಂಟೆಗಳ ಕಾಲ ನೀರು ದೊರೆಯುವ ಪಟ್ಟಣವಾಗಿ ಹೊರ ಹೊಮ್ಮಲಿದೆ ಎಂದರು.
ಇತ್ತೀಚೆಗೆ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದ ಕಲಕೇರಿಗೆ ಭೇಟಿ ನೀಡಿದಾಗ ಅಲ್ಲಿ ಕಳೆದ 2 ವರ್ಷದಿಂದ ಇಲ್ಲಿವರೆಗೂ ನಲ್ಲಿಯಲ್ಲಿ
ನೀರು ಬರುವುದೇ ಇಲ್ಲ. ಜನರು ನೀರಿಗಾಗಿ ಕಿ.ಮೀ.ಗಳವರೆಗೆ ಪರದಾಡಬೇಕಲ್ಲದೇ ಸರ್ಕಾರಿ ಆಸ್ಪತ್ರೆಯಲ್ಲಿಯೂ ಕೂಡ ಕೈ
ತೊಳೆಯಲು ಕೂಡ ನೀರಿನ ತೊಂದರೆಯಿರುವುದು ಗಮನಕ್ಕೆ ಬಂತು. ಇದರಿಂದ ಆ ಕ್ಷೇತ್ರವನ್ನು ಪ್ರತಿನಿಧಿ ಸುವ ಜನ ಪ್ರತಿನಿಧಿಗಳ ಕಾರ್ಯ ತೋರುವಂತಾಗಿತ್ತು. ಹೀಗೆ ಜಿಲ್ಲೆಯ ಕೆಲ ಕ್ಷೇತ್ರಗಳಲ್ಲಿ ನೀರಿಗಾಗಿ ಪರದಾಡುವಂತಾಗಿ ಕೆಲವು ಕ್ಷೇತ್ರಗಳಲ್ಲಿ ವರ್ಷದುದ್ದಕ್ಕೂ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ.
ಬಸವನಬಾಗೇವಾಡಿ ಕ್ಷೇತ್ರದ ಯಾವ ಗ್ರಾಮಕ್ಕೂ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದ ನೀರನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಭಾಗದಲ್ಲಿ ಸರ್ಕಾರಿ ಆಸ್ಪತ್ರೆ ಮಾಡಲು ಆಗುವುದಿಲ್ಲ. ಆದರೆ ಆಯುರ್ವೇದ ಆಸ್ಪತ್ರೆಗೆ ಕ್ರಮ ಕೈಗೊಳ್ಳಲಾಗುವುದು. ಬೇನಾಳ ಅಗಸರ ಹಳ್ಳಕ್ಕೆ ಬಾಂದಾರ ನಿರ್ಮಿಸುವ ಯೋಜನೆಯನ್ನು ಅತಿ ಶೀಘ್ರದಲ್ಲಿ ಕೈಗೊಳ್ಳಲಾಗುವುದು. ಕೃಷ್ಣಾ ಮೇಲ್ದಂಡೆ ಯೋಜನೆ ಹಿನ್ನೀರಿನಿಂದ ಬಾಧಿತಗೊಂಡಿರುವ ಗ್ರಾಮಗಳ ಸಂತ್ರಸ್ತರ ಮಕ್ಕಳ ಉದ್ಯೋಗ ಹಾಗೂ ಶೈಕ್ಷಣಿಕ ಮೀಸಲಾತಿಯನ್ನು 2050ರವರೆಗೆ ಮುಂದುವರಿಸಲು ಬಾಧಿತ ಜಿಲ್ಲೆಗಳ ಶಾಸಕರೊಂದಿಗೆ ಚರ್ಚಿಸಲಾಗಿದೆ. ಈ ಕುರಿತು ಸಂಪುಟಕ್ಕೆ ಒಯ್ಯಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೂ ಮುಂಚೆ ಪ್ರಾಸ್ತಾವಿಕವಾಗಿ ಗ್ರಾಮದ ಮುಖಂಡ ಜಿ.ಸಿ.ಮುತ್ತಲದಿನ್ನಿ ಮಾತನಾಡಿ, ಬೇನಾಳ ಗ್ರಾಮವು ಕೃಷ್ಣೆಯ ಹಿನ್ನೀರು ಪ್ರದೇಶಕ್ಕೆ ಸಮೀಪದಲ್ಲಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡಲಿವೆ. ಆದ್ದರಿಂದ ಸರ್ಕಾರಿ ಆಸ್ಪತ್ರೆ ಮಂಜೂರಿಸಬೇಕು ಹಾಗೂ ಸಂತ್ರಸ್ತರ ಮಕ್ಕಳಿಗಾಗಿ ಯೋಜನಾ ನಿರಾಶ್ರಿತ ಮೀಸಲನ್ನು 2050ರವರೆಗೆ ಮುಂದುವರಿಸಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ಮಲ್ಲಮ್ಮ ಉದಂಡಿ ಅಧ್ಯಕ್ಷತೆ ವಹಿಸಿದ್ದರು. ಯುವ ಮುಖಂಡ ತಾನಾಜಿ ನಾಗರಾಳ ಮಾತನಾಡಿದರು. ರಂಗಪ್ಪ ಗೌಡ ಬಿರಾದಾರ, ಎಸ್.ಆರ್. ವಿಭೂತಿ, ಮಲ್ಲನಗೌಡ ನರಸನಗೌಡರ, ಗ್ಯಾನಪ್ಪಗೌಡ ಬಿರಾದಾರ, ಬಡೇಸಾಬ ಬಾಗವಾನ, ಶಿವಾನಂದ ಅಂಗಡಿ, ಲಕ್ಷ್ಮಣ ಹಂಡರಗಲ್ಲ ಇದ್ದರು. ಮಹೇಶ ಗಾಳಪ್ಪಗೋಳ ನಿರೂಪಿಸಿದರು. ಬಿ.ಎಚ್. ಗಣಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.